Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ೧೨೭ನೇ ಜನ್ಮ ದಿನಾಚರಣೆ

ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ,೨೩: ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯು ಮಹಾನ್ ಸ್ವಾತಂತ್ರ‍್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ೧೨೭ನೇ ಜನ್ಮ ವರ್ಷಾಚರಣೆ ಅಂಗವಾಗಿ ನಗರದ ವಾರ್ಡ್ಲಾ ಹೈಸ್ಕೂಲ್ ನಲ್ಲಿ ಕಾರ್ಯಕ್ರಮ ನಡೆಯಿತು. ನೇತಾಜಿ ಭಾವಚಿತ್ರಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ದ್ವಾರಕಾ ಬಾಯಿ ಅವರು ಮಾಲಾರ್ಪಣೆ ಮಾಡಿದರು. ಎಐಡಿಎಸ್‌ಓ ಜಿಲ್ಲಾ ಉಪಾಧ್ಯಕ್ಷೆ ಎಂ.ಶಾAತಿ ಅವರು ಮಾತನಾಡಿ..... “ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ‍್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊAದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ.” ಎಂಬುದು ಸ್ವಾತಂತ್ರ‍್ಯ ಸಂಗ್ರಾಮದ ಜ್ವಾಲೆಗೆ ತನ್ನ ರಕ್ತ ತರ್ಪಣ ಮಾಡಿದ ಧೀರನೊಬ್ಬನ ನುಡಿಗಳು! ಆ ಧೀರನೇ, ನೇತಾಜಿ ಸುಭಾಷ್ ಚಂದ್ರ ಬೋಸ್.
ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ‍್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಾದ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡ್ಯೊಯ್ಯುವುದು ಅತ್ಯವಶ್ಯಕವಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪ್ರತಿಯೊಬ್ಬರಿಗೂ ಶಿಕ್ಷಣ, ಉದ್ಯೋಗ, ಹೆಣ್ಣು ಮಕ್ಕಳು ಘನತೆ ಗೌರವದಿಂದ ಬದುಕುವ ಸಮ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದರು. ಆದರೆ ಅದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ, ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ನೇತಾಜಿಯವರ ವಿಚಾರಗಳನ್ನು ಅರಿತು, ಮೈಗೂಡಿಸಿಕೊಂಡು ಅನ್ಯಾಯ ಹಾಗೂ ಅಸತ್ಯದೊಂದಿಗೆ ಹೋರಾಡುತ್ತಾ ನೇತಾಜಿ ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಉನ್ನತ ಸಂಸ್ಕೃತಿ, ನೀತಿ-ನೈತಿಕತೆಗಳನ್ನು ಮೇಲೆತ್ತುವ ಉದ್ದೇಶದೊಂದಿಗೆ ಜನವರಿ ೨೩ರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ೧೨೭ನೇ ಜನ್ಮ ವಾರ್ಷಿಕದ ಸಂದರ್ಭದಲ್ಲಿ ರಾಜ್ಯದಾದ್ಯಂತ ನೂರಾರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಆಯೋಜಿಸಲಾಗಿದ್ದ.. ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಎಐಡಿಎಸ್‌ಓ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರು ಸಮೀರ್ ಇತರರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?