Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಅಂಬಳಿ ಗ್ರಾಮಪಂಚಾಯಿತಿಯಲ್ಲಿ 75 ನೇ ಗಣರಾಜೋತ್ಸವ ಅಚರಣೆ

ಕೊಟ್ಟೂರು; ತಾಲೂಕಿನ ಅಂಬಳಿ ಗ್ರಾಮ ಪಂಚಾಯಿತಿಯಲ್ಲಿ 75 ನೇ ಗಣರಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿ ಅದ್ಯಕ್ಷರಾದ ಹೊಳಲಮ್ಮ ಹನುಮಂತಪ್ಪ ರವರು ಧ್ವಜರೋಹಣ ಮಾಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿ ಭಾರತ ಸಂವಿಧಾನವು 1949 ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂತು. ಈ ದಿನದ ಗೌರವಾರ್ಥವಾಗಿ ಪ್ರತಿ ವರ್ಷ ಜನವರಿ 26 ರಂದು ಭಾರತದಲ್ಲಿ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ನಂತರ ಗ್ರಾಮ ಪಂಚಾಯತಿ ಉಪಾದ್ಯಕ್ಷರಾದ ಟಿ.ಕೊಟ್ರಮ್ಮ ಮಾರುತಿ ರವರು ಮಾತನಾಡಿ ದೇಶದ ವಿವಿಧ ಭಾಗಗಳಲ್ಲಿ ರಕ್ಷಣಾ ಪಡೆಗಳು ಪರೇಡ್‌ ಮಾಡುವ ಮೂಲಕ, ಶಾಲೆಗಳು, ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಮಾರಂಭಗಳು ನಡೆಯುತ್ತವೆ. ಪ್ರತಿವರ್ಷ ನಮ್ಮ ದೇಶದಲ್ಲಿ ಇದೊಂದು ಮಹತ್ವದ ಸಂದರ್ಭವಾಗಿದೆ ಎಂದು ಹೇಳಿದರು.ಈ ಕಾಯ೯ಕ್ರಮವನ್ನು ಉದ್ದೇಶಿಸಿ ಪ್ರಥಮ ದಜೆ೯ಯ ಗುತ್ತಿಗೆದಾರರಾದ ವಿ ಬಸವರಾಜ ರವರು ನವದೆಹಲಿಯ ಕರ್ತವ್ಯ ಪಥದಲ್ಲಿ ರಕ್ಷಣಾ ಪಡೆಗಳು ಅತ್ಯಂತ ಭವ್ಯವಾದ ಪರೇಡ್‌ ಮೆರವಣಿಗೆಯನ್ನು ನಡೆಸುತ್ತವೆ. ಈ ಸುದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ಸ್ಮರಿಸಲು ನಾಗರೀಕರೆಲ್ಲರೂ ಒಟ್ಟಾಗಿ ಸೇರುತ್ತೇವೆ ಎಂದರು. ಗ್ರಾಮ ಪಂಚಾಯತಿಯ ಸದಸ್ಯರಾದ ಬಿ ಸಣ್ಣ ಬಸವರಾಜ ರವರು -ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ದಿನವನ್ನು ಅತ್ಯಂತ ಉತ್ಸಾಹ ಮತ್ತು ದೇಶಭಕ್ತಿಯ ಭಾವನೆಗಳಿಂದ ಆಚರಿಸಲಾಗುತ್ತದೆ ಎಂದರು. ಎನ್ ವಿರುಪಾಕ್ಷಿ, ಟಿ ಶಿವಣ್ಣ ನವರು ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣಗಳು, ಪ್ರಬಂಧ ಸ್ಪರ್ಧೆ, ಇತರೆ ಚಟುವಟಿಕೆಗಳೊಂದಿಗೆ ಈ ದಿನವನ್ನು ಸ್ಮರಣೀಯವಾಗಿಸಲಾಗುತ್ತದೆ ಎಂದು ಹೇಳಿದರು. ಮಾಜಿ ಅಧ್ಯಕ್ಷರಾದ ಅನುಸೂಯಮ್ಮಗೊಣೇಪ್ಪ ಮತ್ತು ಉಪಾಧ್ಯಕ್ಷರಾದ ವಿ ಗಂಗಮ್ಮ ಬಸವರಾಜ ರವರು ಡಾ" ಬಾಬಸಾಹೇಬ ಅಂಬೇಡ್ಕರ್ ರವರು ಸಂವಿಧಾನವನ್ನು ಎಲ್ಲಾ ಜಾತಿ, ಧಮ೯, ಬಾಷೆಗಳಿಗೆ ಅನುಗುಣವಾಗಿ ರಚಿಸಿದರು‌. ಗ್ರಾಮ ಪಂಚಾಯತಿಯ ಪಿಡಿಓ ದೇವೇಶ ಮತ್ತು ಕಾಯ೯ದಶಿ೯ ಪ್ರದೀಪ್ ರವರು ಇದೊಂದು ಬೃಹತ್‌ ಸಂವಿಧಾನವಾಗಿದ್ದು, ಇದರ ಜಾರಿಗೆ ಮಹತ್ವದ ಕೊಡುಗೆ ನೀಡಿದವರು ಡಾ ಬಿ.ಆರ್‌.ಅಂಬೇಡ್ಕರ್‌ ರವರು. ಆದ್ದರಿಂದ ಅಂಬೇಡ್ಕರ್‌ ರನ್ನು ಭಾರತ ಸಂವಿಧಾನದ ಪಿತಾಮಹರು ಎನ್ನುವರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಎಂ ಲಿಂಗರಾಜರವರು ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ಮೂಲಭೂತ ಹಕ್ಕುಗಳಂತೆ, ದೇಶದ ಪ್ರಜೆಗಳಾಗಿ ಇದರಲ್ಲಿ ನೀಡಲಾದ ಮೂಲಭೂತ ಕರ್ತವ್ಯಗಳನ್ನು ಸಹ ಪಾಲಿಸಬೇಕು. ಈ ಕಾಯ೯ಕ್ರಮವನ್ನು ಗ್ರಾಮ ಪಂಚಾಯತಿಯ ಕಂಪ್ಯೂಟರ್ ಆಫ್ ರೇಟರ್ ಹುಲುಗಪ್ಪ ಮತ್ತು ಕೊಟ್ರೇಶ ಬಿಲ್ ಕಲೆಕ್ಟರ್ ರವರು ಮಹಾತ್ಮ ಗಾಂಧೀಜಿ ಮತ್ತು 'ಬಾಬ ಸಾಹೇಬರ ' ಪುಷ್ಪ ನಮನವನ್ನು ಸಲ್ಲಿಸಿ ಪೂಜೆಯನ್ನು ನೆರವೇರಿಸಿದರು.ಸ್ವಾಗತವನ್ನು ಕರಿಬಸಪ್ಪ ಶಿಕ್ಷಕರು ಮಾಡುವ ಮೂಲಕ ಕಾಯ೯ಕ್ರಮಕ್ಕೆಅನುವು ಮಾಡಿ ಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರು, ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು . ಎಸ್ ಡಿ ಎಂ ಸಿ ಸದಸ್ಯರು, ಅಧ್ಯಕ್ಷರು, ವಿ ಎಸ್ ಎಸ್ ಎನ್ ಸದಸ್ಯರು, ಅಧ್ಯಕ್ಷರು , ಅಂಗನವಾಡಿ ಟೀಚರ್, ಆಶಾ ಕಾಯ೯ಕತ೯ರು, ಸಾವ೯ಜನಿಕರು, ಊರಿನ ಮುಖಂಡರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?