Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಜ.14 ರಂದು ಶಿವಯೋಗಿ ಸಿದ್ಧರಾಮೇಶ್ವರ 853 ನೇ ಜಯಂತ್ಯೋತ್ಸವ ಕಾರ್ಯಕ್ರಮ

ಬಳ್ಳಾರಿ,ಜ.09 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ 853ನೇ ಜಯಂತಿ ಕಾರ್ಯಕ್ರಮವನ್ನು ಜ.14 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಳ್ಳಾರಿ ಜಿಲ್ಲಾ ಭೋವಿ ಸಂಘ ಅಧ್ಯಕ್ಷ ವಿ.ರಾಮಾಂಜನೇಯ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಗಾದೆಪ್ಪ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ರಾಘವೇಂದ್ರ ಗುಡುದೂರು ತಂಡದಿAದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.

ಮೆರವಣಿಗೆ: ಮುನ್ಸಿಪಾಲ್ ಕಾಲೇಜು ಮೈದಾನದಿಂದ ಮೆರವಣಿಗೆಯು ಆರಂಭವಾಗಿ ಗಡಿಗೆ ಚೆನ್ನಪ್ಪ ವೃತದಿಂದ ತೇರು ಬೀದಿ, ಜೈನ್ ಮಾರ್ಕೆಟ್, ಹೆಚ್.ಆರ್.ಗವಿಯಪ್ಪ ವೃತ, ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?