Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಎಸ್.ಎಸ್.ಕ್ರಿಕೇಟ್ ಕ್ಲಬ್ ಅಧ್ಯಕ್ಷ ಎಸ್.ಎಸ್.ಮೆಹಬೂಬ್ ಬಾಷ ಅವರು ತಮ್ಮ 51ನೇ ವಯಸ್ಸಿನಲ್ಲಿ ಬಳ್ಳಾರಿಯಿಂದ ಬೆಂಗಳೂರಿಗೆ 'ಮ್ಯಾರಥಾನ್ ಓಟ' ಕೈಗೊಳ್ಳುವ ಮೂಲಕ ಪ್ರತಿಭಟನೆ!

ಬಳ್ಳಾರಿ:  ಬಳ್ಳಾರಿ ನಗರದಲ್ಲಿ ಕ್ರಿಕೇಟ್ ಮೈದಾನ ಸೇರಿದಂತೆ ಕ್ರೀಡೆಗಳಿಗೆ ಮೂಲಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್.ಎಸ್.ಕ್ರಿಕೇಟ್ ಕ್ಲಬ್ ಅಧ್ಯಕ್ಷ ಎಸ್.ಎಸ್.ಮೆಹಬೂಬ್ ಬಾಷ ಅವರು ತಮ್ಮ 51ನೇ ವಯಸ್ಸಿನಲ್ಲಿ ಬಳ್ಳಾರಿಯಿಂದ ಬೆಂಗಳೂರಿಗೆ 'ಮ್ಯಾರಥಾನ್ ಓಟ' ಕೈಗೊಳ್ಳುವ ಮೂಲಕ ಪ್ರತಿಭಟನೆ ಆರಂಭಿಸಿದರು.

ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಸೋಮವಾರ ಬೆಳಗಿನ ಜಾವ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಳಿಕ ದೇವಸ್ಥಾನದ ಆವರಣದಿಂದ 'ಮ್ಯಾರಥಾನ್ ಓಟ'ವನ್ನು ಆರಂಭಿಸಿದರು. ಕೆಳಸೇತುವೆ, ಗಡಿಗಿ ಚನ್ನಪ್ಪ ವೃತ್ತ, ಮೋತಿ ವೃತ್ತ, ಹೊಸ ಬಸ್ ನಿಲ್ದಾಣ, ಬೆಂಗಳೂರು ರಸ್ತೆ ಮೂಲಕ ಬೆಂಗಳೂರಿಗೆ ಮ್ಯಾರಥಾನ್ ಓಟ ನಡೆಸಿದರು.

ಇದಕ್ಕೆ ಕ್ಲಬ್ ಉಪಾಧ್ಯಕ್ಷರು, ಪಾಲಿಕೆ ಸದಸ್ಯ ಎಂ.ಪ್ರಭಂಜನ್ ಕುಮಾರ್, ಬಳ್ಳಾರಿ ಸೈಕ್ಲಿಂಗ್ ಕ್ಲಬ್ ಸಹಕಾರ ನೀಡಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರಿಗೆ ಮಾತನಾಡಿದ ಮೆಹಬೂಬ್ ಬಾಷ, ಬಳ್ಳಾರಿ ನಗರದಲ್ಲಿ ಕ್ರಿಕೇಟ್ ಆಟಕ್ಕೆ ಮೈದಾನ ಸೇರಿ ಮೂಲಸೌಲಭ್ಯಗಳೇ ಇಲ್ಲ. ಬಳ್ಳಾರಿಯಲ್ಲಿ ಸಾಕಷ್ಟು ಜನ ಪ್ರತಿಭಾವಂತ ಕ್ರಿಕೇಟ್ ಆಟಗಾರರು ಇದ್ದಾರೆ. ಆದರೆ, ಪ್ರತಿಭೆ ಪ್ರದರ್ಶನಕ್ಕೆ ಮೈದಾನ ಸೇರಿ ಮೂಲಭೂತ ಸೌಲಭ್ಯಗಳೇ ಇಲ್ಲ. ಹಾಗಾಗಿ ಬಳ್ಳಾರಿಯಿಂದ 'ಮ್ಯಾರಥಾನ ಓಟ'ದ ಮೂಲಕ ಬೆಂಗಳೂರಿಗೆ ತೆರಳಿ, ಅಲ್ಲಿ ಕರ್ನಾಟಕ ರಾಜ್ಯ ಕ್ರಿಕೇಟ್ ಅಸೋಸಿಯೇಷನ್ ಗೆ ಮನವಿ ಸಲ್ಲಿಸಿ, ಬಳ್ಳಾರಿಯಲ್ಲೂ ಕ್ರಿಕೇಟ್ ಗೆ ಮೈದಾನ ಸೇರಿ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿಯಿಂದ ಮ್ಯಾರಥಾನ್ ಓಟದ ಮೂಲಕ 7-8 ದಿನಗಳೊಳಗಾಗಿ ಬೆಂಗಳೂರಿಗೆ ತೆರಳುವ ಗುರಿ ಹೊಂದಲಾಗಿದೆ. ಪ್ರತಿದಿನ ಬೆಳಗ್ಗೆ 20 ಕಿಮೀ, ಸಂಜೆ 20 ಕಿಮೀ ಒಟ್ಟು 40 ಕಿಮೀಗಳಂತೆ ಓಟವನ್ನು ನಡೆಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದೇನೆ. ಕ್ಲಬ್ ಉಪಾಧ್ಯಕ್ಷ ಪಾಲಿಕೆ ಸದಸ್ಯ ಪ್ರಭಂಜನ್ ಕುಮಾರ್, ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನವರು ಸಹ ಸಹಕಾರ ನೀಡಿದ್ದಾರೆ ಎಂದು ಅವರು ವಿವರಿಸಿದರು.

ಪಾಲಿಕೆ ಸದಸ್ಯ, ಎಸ್.ಎಸ್.ಕ್ರಿಕೇಟ್ ಕ್ಲಬ್ ಉಪಾಧ್ಯಕ್ಷ ಪ್ರಭಂಜನ ಕುಮಾರ್ ಮಾತನಾಡಿ, ಕ್ರಿಕೇಟ್ ಗಾಗಿ ಬೆಂಗಳೂರಿಗೆ ಓಟ ಕೈಗೊಂಡಿರುವ ಮೆಹಬೂಬ್ ಬಾಷ ಅವರು, ಮೊದಲಿನಿಂದಲೂ ಕ್ರಿಕೇಟ್ ಗಾಗಿ ಶ್ರಮಿಸುತ್ತಿದ್ದಾರೆ.‌ ಸಾಕಷ್ಟು ಮಕ್ಕಳಿಗೆ ಕ್ರಿಕೇಟ್ ಕಲಿಸುತ್ತಿದ್ದಾರೆ.‌ ಆದರೆ, ಬಳ್ಳಾರಿಯಲ್ಲಿ ಸಮರ್ಪಕವಾದ ಮೂಲಸೌಲಭ್ಯಗಳೇ ಇಲ್ಲ. ಬಳ್ಳಾರಿಯಲ್ಲಿ ಸಾಕಷ್ಟು ಅನುದಾನಗಳು ಇವೆ. ಆದರೆ, ಅವುಗಳ ಬಳಕೆ ಸಮರ್ಪಕವಾಗಿ ಆಗುತ್ತಿಲ್ಲ. ಮುಂದಿನ ದಿನಗಳಲ್ಲಾದರೂ ಮಾಬೇಕಾಗಿದೆ.

ಈ ವೇಳೆ ಕ್ಲಬ್ ಗೌರವಾಧ್ಯಕ್ಷ ಎಂ.ನಾರಾಯಣರಾವ್, ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನ ಮುಖ್ಯಸ್ಥ ಡಾ. ರವಿಶಂಕರ್, ಕೃಷ್ಣಾರೆಡ್ಡಿ, ಹಳೆಯ ಕ್ರಿಕೇಟ್ ಸ್ನೇಹಿತರಾದ ಬಿ.ಬಾಲಕೃಷ್ಣ, ಹುಸೇನ್, ಸೀನಾ, ಬಾಬು, ಶ್ರೀನಿವಾಸ್ ಸೇರಿ ಹಲವರು ಇದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?