Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಭವ್ಯ ಸ್ವಾಗತ

ಕಾರಟಗಿ _ ಕಾರಟಗಿ ತಾಲೂಕಿನ ಮೈಲಾಪುರ ಗ್ರಾ.ಪಂ ವ್ಯಾಪ್ತಿಯ ಸೋಮನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿ.ಪಂ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥವನ್ನು ತಾಲೂಕಿನಿಂದ ಅದ್ದೂರಿಯಾಗಿ
ಸ್ವಾಗತಿಸಲಾಯಿತು.

ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ತಹಶೀಲ್ದಾರ್ ಶ್ರೀ‌ ಎಂ.‌ಕುಮಾರಸ್ವಾಮಿ ಹಾಗೂ ತಾ.ಪಂ‌ ಸಹಾಯಕ ನಿರ್ದೇಶಕರಾದ ಶ್ರೀಮತಿ ವೈ.ವನಜಾ ಅವರು ಪುಷ್ಪಾರ್ಪಣೆ ಮಾಡಿ ಗೌರವಿಸಿದರು. ನಂತರ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಬೋಧಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ಸೋಮನಾಳ ಗ್ರಾಮದ ಮುಖ್ಯ ರಸ್ತೆ ಮಾರ್ಗವಾಗಿ ಗುಡೂರು, ಮೈಲಾಪುರ ಗ್ರಾಮಕ್ಕೆ ತೆರಳಿದ ಸಂವಿಧಾನ ಜಾಗೃತಿ ರಥವನ್ನು ಮಾನ್ಯ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ ಅವರು ಗ್ರಾಮಸ್ಥರು, ಶಾಲಾ ಮಕ್ಕಳೊಂದಿಗೆ ಸ್ವಾಗತಿಸಿದರು. ಗ್ರಾ.ಪಂ ಅಧಿಕಾರಿಗಳು ಸಂವಿಧಾನ‌ ಪ್ರಸ್ತಾವನೆ ಬೋಧಿಸಿದರು.

ಜಾಥಾ ಮೆರವಣಿಗೆಯಲ್ಲಿ ಕಲಾ ತಂಡಗಳಾದ ಡೊಳ್ಳು ಕುಣಿತ, ರಾಮ, ಲಕ್ಷ್ಮಣ, ಸೀತೆ, ಆಂಜನೇಯ, ದುರ್ಯೋಧನ, ಅರ್ಜುನ, ರಾವಣನ ಹಗಲು ವೇಷದಾರಿಗಳ ನೃತ್ಯ, ಕುಂಭ ಕಳಸ ಹೊತ್ತ ಮಹಿಳೆಯರು, ಮಹನೀಯರ ವೇಷಭೂಷಣಗಳ ಧರಿಸಿದ ಶಾಲಾ ಮಕ್ಕಳು,‌ ಕಾರ್ಯಕ್ರಮಕ್ಕೆ ಮೆರಗು ತಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಕಂದಾಯ ಇಲಾಖೆ, ತಾಲೂಕಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇನ್ನಿತರ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘಟನೆಗಳು ಪ್ರಮುಖರು ಭಾಗಿಯಾಗಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?