Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಮನರಂಜನೆ ಸುದ್ದಿ

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ; ಶುಭ ಕೋರಿದ ಸೆಲೆಬ್ರಿಟಿಗಳು, ಅಭಿಮಾನಿಗಳು

ನಟಿ ಅದಿತಿ ಪ್ರಭುದೇವ ಅವರಿಗೆ 2024ರ ವರ್ಷ ತುಂಬ ಸ್ಪೆಷಲ್​. ಯಾಕೆಂದ್ರೆ, ಸದ್ಯದಲ್ಲೇ ಅವರು ತಾಯಿ ಆಗಲಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ ನೆರವೇರಿಸಲಾಗಿದೆ. ಗುರುಕಿರಣ್​, ಶರಣ್​ ಮುಂತಾದ ಸೆಲೆಬ್ರಿಟಿಗಳು ಬಂದು ಅದಿತಿ ಪ್ರಭುದೇವ ಹಾಗೂ ಯಶಸ್​ ದಂಪತಿಗೆ ಶುಭ ಹಾರೈಸಿದ್ದಾರೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ.

ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ಜನವರಿ 1ರಂದು ಅವರು ಪ್ರೆಗ್ನೆನ್ಸಿ ಸುದ್ದಿ ನೀಡಿದ್ದರು. ಈಗ ಅವರ ಮನೆಯಲ್ಲಿ ಸಂಭ್ರಮದಿಂದ ಸೀಮಂತ ಶಾಸ್ತ್ರ ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ (Aditi Prabhudeva Baby Shower) ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ ಅವರಿಗೆ ವಿಶ್​ ಮಾಡಿದ್ದಾರೆ. ಶೀಘ್ರದಲ್ಲೇ ಅದಿತಿ ಪ್ರಭುದೇವ ಹಾಗೂ ಯಶಸ್​ ಪಾಟ್ಲಾ (Yashas Patla) ದಂಪತಿಯ ಮನೆಗೆ ಮಗುವಿನ ಆಗಮನ ಆಗಲಿದೆ.

ಸ್ಯಾಂಡಲ್​​ವುಡ್​ನಲ್ಲಿ ಬ್ಯುಸಿ ಆಗಿರುವ ಅದಿತಿ ಪ್ರಭುದೇವ ಅವರು ಮದುವೆ ಬಗ್ಗೆ ಅನೌನ್ಸ್​ ಮಾಡಿದ್ದಾಗ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಕೈತುಂಬ ಸಿನಿಮಾಗಳು ಇರುವಾಗಲೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದರು. 2022ರ ನವೆಂಬರ್​ನಲ್ಲಿ ಉದ್ಯಮಿ ಯಶಸ್​ ಜೊತೆ ಅವರ ವಿವಾಹ ನೆರವೇರಿತ್ತು. ಈಗ ತಾಯಿ ಆಗುತ್ತಿರುವ ಸಂಭ್ರಮದಲ್ಲಿ ಅದಿತಿ ಪ್ರಭುದೇವ ಇದ್ದಾರೆ.

ಮದುವೆ ಬಳಿಕ ಅದಿತಿ ಪ್ರಭುದೇವ ಅವರು ಸಿನಿಮಾ ಒಪ್ಪಿಕೊಳ್ಳುವುದು ಕಡಿಮೆ ಆಯಿತು. ಪ್ರಗ್ನೆಂಟ್​ ಆದ ನಂತರ ಅವರು ಸಂಪೂರ್ಣವಾಗಿ ಆರೋಗ್ಯದ ಕಡೆಗೆ ಗಮನ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಅಂತರ ಕಾಯ್ದಕೊಂಡಿದ್ದಾರೆ. ಅವರ ಸೀಮಂತ ಶಾಸ್ತ್ರಕ್ಕೆ ನಟ ಶರಣ್​, ಸಂಗೀತ ನಿರ್ದೇಶಕ ಗುರುಕಿರಣ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ.

ಅದಿತಿ ಪ್ರಭುದೇವ ಅವರು ಮೂಲತಃ ದಾವಣಗೆರೆಯವರು. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ‘ಗುಂಡ್ಯಾನ್​ ಹೆಂಡ್ತಿ’ ಸೀರಿಯಲ್​ನಲ್ಲಿ ನಟಿಸಿರು. ಬಳಿಕ ‘ನಾಗ ಕನ್ನಿಕೆ’ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಈ ಸಂದರ್ಭದಲ್ಲಿ ಅವರಿಗೆ ಸ್ಯಾಂಡಲ್​ವುಡ್​ಗೆ ಎಂಟ್ರಿ ಸಿಕ್ಕಿತು. ಅಜಯ್​ ರಾವ್​ ನಟನೆಯ ‘ಧೈರ್ಯಂ’ ಸಿನಿಮಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅವರು ಚಂದನವನಕ್ಕೆ ಕಾಲಿಟ್ಟರು. ಆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವರು ಅಭಿನಯಿಸಿದರು. ಬಜಾರ್​, ಸಿಂಗ, ರಂಗನಾಯಕಿ, ಓಲ್ಡ್​ ಮಾಂಕ್​, ತೋತಾಪುರಿ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅದಿತಿ ಪ್ರಭುದೇವ ಅವರು ಪ್ರಸಿದ್ಧಿ ಪಡೆದಿದ್ದಾರೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಬಿಡುಗಡೆಯಾದ ‘ಲವ್​ ಯೂ ಅಭಿ’ ವೆಬ್​ ಸರಣಿಯಲ್ಲೂ ಅವರು ಅಭಿನಯಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?