Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳ ಪಾವತಿ ಸಮಸ್ಯೆಗಳ ಜಾಗೃತಿ ಶಿಬಿರ

ಬಳ್ಳಾರಿ, ಫೆ. 27: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ ಹಾಗೂ ಬಳ್ಳಾರಿ ಬ್ರಾಂಚ್ ಆಫ್ ಎಸ್ಐಆರ್ಸಿ ಆಫ್ ಐಸಿಎಐ ಇವರ ಸಂಯುಕ್ತಾಶ್ರಯದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ (ಎಂಎಸ್ಎAಇ) ಸಮಸ್ಯೆಗಳ ಪರಿಹಾರದ ಜಾಗೃತಿ ಶಿಬಿರ ಮಂಗಳವಾರ ನಡೆಯಿತು

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಬಿ.ಮಹಾರುದ್ರಗೌಡ ಅವರು ಮುಖ್ಯ ಅತಿಥಿಗಳನ್ನು ಸ್ವಾಗತಿಸಿ, ಉದ್ಯಮಿಗಳು ಪಾವತಿ ಮಾಡುವಲ್ಲಿ ಎದುರಾಗುವ ಸಮಸ್ಯೆಗಳು, 43ಬಿ.ಹೆಚ್ ಹಾಗೂ ಆದಾಯ ತೆರಿಗೆ ಮಾಸಿಕ ಲೆಕ್ಕಪತ್ರಗಳ ಇತ್ಯರ್ಥ, ಚುನಾವಣಾ ಸಂದರ್ಭದಲ್ಲಿ ನಗದು ಹಣ ನಿರ್ವಹಣೆ-ಸಾಗಾಣಿಕೆ ಸೇರಿ ಇನ್ನಿತರೆ ವಿಷಯಗಳ ಕುರಿತು ತಜ್ಞರು ಮಾಹಿತಿ ನೀಡುತ್ತಾರೆ ಎಂದರು.

ಯಶವAತರಾಜ್ ನಾಗಿರೆಡ್ಡಿ, ಹಿರಿಯ ಉಪಾಧ್ಯಕ್ಷರು, ಮಾತನಾಡಿ, ಸಿಡ್ಜಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕಾಸಿಯಾದ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಮಾರ್ಚ 1 ಸೋಮವಾರ ರಾಯಲ್ ಪೊರ್ಟ್ ಸಭಾಂಗಣದಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು - ರಫ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸಿಎ ರಾಜೇಶ ಬಾಗ್ರೇಚ್ ಇವರು 43ಬಿಹೆಚ್ ಬಗ್ಗೆ ಉಪನ್ಯಾಸ ನೀಡಿದರು, ಎಂ.ಎಸ್.ಎA.ಸಿ ಪಾವತಿ ಮಾಡುವುದು ವಿಳಂಬವಾದರೆ ಯಾವ ಪದ್ದತಿಗಳನ್ನು ಅನುಸರಿಸಬೇಕು ಎಂದು ಉಪನ್ಯಸ ನೀಡಿದರು.

ಸಿ. ಶ್ರೀಧರ ಪಾರ್ಥಸಾರದಿ ಇವರು ಖಾತೆಗಳ ಪುಸ್ತಕಗಳನ್ನು ಮಾರ್ಚ ತಿಂಗಳ ಅಂತ್ಯಕ್ಕೆ ಯಾವ ರೀತಿ ಖಾತೆಗಳನ್ನು ಮುಚ್ಚವುದರಲ್ಲಿ ಅನುಸರಿಸಬೇಕಾದ ಪದ್ದತಿಗಳನ್ನು ಮನಮುಟ್ಟುವಂತೆ ಉಪನ್ಯಾಸವನ್ನು ನೀಡಿದರು.

ಸಿಎ ಕೆ ರಾಜಶೇಖರ ಇವರು ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಅವಧಿಯಲ್ಲಿ ತೆಗದುಕೊಳ್ಳುವ ಮುನ್ನೆಚ್ಚರಿಕೆಗಳು ಹಾಗೂ ಯಾವ ಪದ್ದತಿಯನ್ನು ಅನುಸರಿಸಬೇಕು ಹಾಗೂ ಯಾವ ಪದ್ದತಿಯನ್ನು ಅನುಸರಿಸಬಾರದು ಎನ್ನವ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು. ಕೆ.ಸಿ.ಸುರೇಶಬಾಬು, ಗೌರವ ಕಾರ್ಯದರ್ಶಿಗಳು ವಂದನಾರ್ಪಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಗಳಾದ ಎಸ್.ದೊಡ್ಡನಗೌಡ, ಸೊಂತಗಿರಿಧರ, ಜಂಟಿಕಾರ್ಯದರ್ಶಿಗಳಾದ, ಡಾ ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ.ರಾಮಚಂದ್ರ, ನಮ್ಮ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಉಪ ಕಮಟಿಗಳ ಚೇರ್ಮನ್ಗಳು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು, ರೈಸ್ಮಿಲ್ ಅಸೋಸಿಯೇಷನ್, ಕಾಟನ್ ಅಸೋಸಿಯೇಷನ್, ಎಪಿಎಂಸಿ ವರ್ತಕರು, ಇಂಡಸ್ಟ್ರಿಯಲ್ ಅಸೋಸಿಯೇಷನ್, ಸ್ಪಾಂಜ್ ಐರನ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಕೋಲ್ಡ್ ಸ್ಟೊರೇಜ್ ಅಸೋಸಿಯೇಷನ್ನ ಹಾಗೂ ಇತರೆ ಸಂಘ-ಸAಸ್ಥೆಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?