Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ತ್ಯಾಗ ಬಲಿದಾನದ ಪ್ರತೀಕವೇ  ‘ಬಕ್ರೀದ್ ‘

ಬಳ್ಳಾರಿ,ಜೂ.16 : ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಕೂಡ ಒಂದು. ಈ ಹಬ್ಬವನ್ನು ಈದ್-ಉಲ್-ಅಜಾ ಎಂದೂ ಕರೆಯುತ್ತಾರೆ. ರಂಜಾನ್ ಮುಗಿದ 70 ದಿನಗಳ ನಂತರ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ ಈ ಹಬ್ಬವನ್ನು ಇಸ್ಲಾಮಿಕ್ ಕ್ಯಾಲೆಂಡರ್‌ನ ಕೊನೆಯ ತಿಂಗಳ ಜು-ಅಲ್-ಹಿಜ್‌ನಲ್ಲಿ ಆಚರಿಸಲಾಗುತ್ತದೆ. ಆದರೆ ಈ ಈದ್-ಉಲ್-ಅದಾ ಆಚರಣೆಗೆ ನಿರ್ದಿಷ್ಟ ದಿನಾಂಕ ಎಂಬುದಿಲ್ಲ ಚಂದ್ರನು ಗೋಚರಿಸಿದ ನಂತರವೇ ಬಕ್ರೀದ್ ಆಚರಿಸುವ ಸಂಪ್ರದಾಯವಿದೆ. ಈ ಬಾರಿ ಬಕ್ರೀದ್ ಹಬ್ಬವನ್ನು ಜೂನ್ 17ರ ಸೋಮವಾರದಂದು ಆಚರಿಸಲಾಗುತ್ತಿದೆ.

ಬಕ್ರೀದ್ ಹಬ್ಬದ ಇತಿಹಾಸ:

ಬಕ್ರೀದ್ ಆಚರಣೆಯ ಹಿಂದೆ ಹಜರತ್ ಇಬ್ರಾಹಿಂ ಅವರ ತ್ಯಾಗ ಬಲಿದಾನದ ಕಥೆಯಿದೆ. ಹಜರತ್ ಇಬ್ರಾಹಿಂ ಎನ್ನುವವರು ದೇವರ ಮೇಲೆ ಅಪಾರ ನಂಬಿಕೆಯನ್ನು ಹೊಂದಿದ್ದ ವ್ಯಕ್ತಿಯಾಗಿದ್ದರು. ಹೀಗಿರುವಾಗ ಒಂದೊಮ್ಮೆ ಹಜರತ್ ಇಬ್ರಾಹಿಂ ತನ್ನ ಮಗನನ್ನು ತ್ಯಾಗ ಮಾಡುತ್ತಿದ್ದಾನೆ ಎಂದು ಕನಸು ಕಾಣುತ್ತಾನೆ. ಕನಸನ್ನು ಸಂದೇಶವೆಂದು ಭಾವಿಸಿ, ತನ್ನ ಮಗನನ್ನು ಬಲಿ ಕೊಡಲು ಮುಂದಾಗುತ್ತಾನೆ. ಆದರೆ ದೇವರು ಮಗನ ಬದಲು ಪ್ರಾಣಿಯನ್ನು ಬಲಿ ಕೊಡುವ ಸಂದೇಶವನ್ನು ನೀಡುತ್ತಿದ್ದಂತೆ, ಮಗನ ಬದಲಿಗೆ ತನ್ನ ಪ್ರೀತಿಯ ಕುರಿ ಮರಿಯನ್ನು ಬಲಿ ನೀಡುತ್ತಾನೆ. ಇದನ್ನು ಬಕ್ರಾ-ಈದ್’ ಅಂದರೆ ಬಕ್ರೀದ್ ಎಂದು ಕರೆಯಲಾಗುತ್ತದೆ. ಈ ಕಾರಣದಿಂದಲೇ ಈದ್-ಉಲ್-ಅಜಾ ದಿನದಂದು ಮೇಕೆಯನ್ನು ಬಲಿಕೊಡುವ ಸಂಪ್ರದಾಯವು ಪ್ರಾರಂಭವಾಯಿತು ಎನ್ನಬಹುದು.

ಬಕ್ರೀದ್ ಹಬ್ಬದ ಸಂಪ್ರದಾಯ ಹಾಗೂ ಆಚರಣೆ ಹೇಗೆ?

ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಈ ದಿನದಂದು ಮುಸ್ಲಿಂ ಬಾಂಧವರು ಬೆಳಿಗ್ಗೆ ಎದ್ದು ನಮಾಜ್ ಮಾಡಲು ಹೋಗುತ್ತಾರೆ. ಮುಸ್ಲಿಂರ ಈ ಹಬ್ಬದಂದು ತಮ್ಮ ಮನೆಗಳಲ್ಲಿ ಸಾಕಿರುವ ಅಥವಾ ಹಬ್ಬಕ್ಕೆ ಕೆಲವೇ ದಿನವಿರುವಾಗಲೇ ತಂದ ಮೇಕೆಗಳನ್ನು ಬಲಿ ಕೊಡುವ ಪದ್ಧತಿಯಿದೆ. ಮೇಕೆಯನ್ನು ಬಲಿ ಕೊಟ್ಟ ಬಳಿಕ, ಈ ಮಾಂಸವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗುತ್ತದೆ. ಮೊದಲ ಭಾಗವನ್ನು ಸಂಬಂಧಿಕರು, ಸ್ನೇಹಿತರು ಮತ್ತು ನೆರೆಹೊರೆಯವರಿಗೆ ನೀಡಲಾಗುತ್ತದೆ. ಎರಡನೆಯ ಭಾಗವನ್ನು ಬಡವರು ಮತ್ತು ನಿರ್ಗತಿಕರಿಗೆ ಹಾಗೂ ಮೂರನೇ ಭಾಗವನ್ನು ಕುಟುಂಬದವರು ಇಟ್ಟುಕೊಳ್ಳುತ್ತಾರೆ. ಈ ದೇವರ ಪ್ರಸಾದವನ್ನು ಅಡುಗೆ ಮಾಡಿ ಕುಟುಂಬ ಸದಸ್ಯರು ಸವಿದು ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?