Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಭೋವಿ ನಿಗಮ ಬಹುಕೋಟಿ ಹಗರಣ​: ಅಕ್ರಮ ಹಣ ವರ್ಗಾವಣೆ ಪತ್ತೆ, ಮಹತ್ವದ ದಾಖಲೆ ಕಲೆಹಾಕಿದ ED

ಬೆಂಗಳೂರು, ಏಪ್ರಿಲ್​ 07: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ (Karnataka Bhovi Development Corporation) ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿಕೆ‌ ನಾಗರಾಜಪ್ಪರನ್ನು ಬಂಧಿಸಿದ್ದು, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ಇ.ಡಿ ತನಿಖೆ ವೇಳೆ ಭೋವಿ ಸಮುದಾಯದ ಏಜೆಂಟರ ಮೂಲಕ ಅಕ್ರಮ ಹಣ  ವರ್ಗಾವಣೆ ನಡೆದಿದ್ದು ಪತ್ತೆ ಆಗಿದೆ. ಹೀಗಾಗಿ ಬಿಕೆ‌ ನಾಗರಾಜಪ್ಪರನ್ನು ಬಂಧಿಸಿ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ.

ಏಪ್ರಿಲ್​ 4ರಂದು ನಗರದ ಅಂಬೇಡ್ಕರ್ ರಸ್ತೆಯ ವಿವಿ ಟವರ್‌ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು ಮತ್ತು ಅನುಮಾನ ಇರುವವರಿಗೆ ಸಂಬಂಧಿಸಿದ ಸ್ಥಳಗಳಲ್ಲ ದಾಳಿ ಮಾಡಿ ಇಡಿ ಅಧಿಕಾರಿಗಳು ಶೋಧ ಮಾಡಿದ್ದರು. ಈ ವೇಳೆ ನಾಗರಾಜಪ್ಪ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದು ಪತ್ತೆ‌ ಆಗಿದೆ.

ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು ಕೆಬಿಡಿಸಿಯಿಂದ ಹಣವನ್ನು ಫ್ರೆಂಡ್ಸ್, ಕುಟುಂಬ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದಡಿ ಬಂಧಿಸಲಾಗಿದೆ. ಬಳಿಕ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಇ.ಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಏನು ಹಗರಣ?

2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂ. ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು.

ಬಳಿಕ ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿತ್ತು.

ಇತ್ತೀಚೆಗೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿತ್ತು. ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ, ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?