Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್, ಶಾಸಕ ಸ್ಥಾನದಿಂದ ಅನರ್ಹ

ಬೆಂಗಳೂರು, ಮೇ.09: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದ್ರೆ, ಕೋರ್ಟ್ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಗಂಗಾವತಿ ಕ್ಷೇತ್ರಕ್ಕೆ ಬೈ ಎಲೆಕ್ಷನ್
ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್, ಜನಾರ್ದನ ರೆಡ್ಡಿ ಅನುಮತಿ ಕೊಟ್ಟಿರಲಿಲ್ಲ. ಹೀಗಾಗಿ ರೆಡ್ಡಿ ಕೆಆರ್ಎಸ್ ಪಕ್ಷವನ್ನು ಕಟ್ಟಿ ಅದರಿಂದಲೇ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್ನ ಇಕ್ಬಾಲ್ ಅನ್ಸಾರಿ ಅವರನ್ನು ಸೋಲಿಸಿ ಮತ್ತೆ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದರು. ಆದರೆ, ಇದೀಗ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಂಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?