Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ಫೆ. ೧೬ರಂದು ಬಜೆಟ್ ಮಂಡನೆ ಫೆ.೧೨ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ

ಬೆಂಗಳೂರು, ಜ, ೧೮: ಮುಂದಿನ ತಿಂಗಳು ಅಂದರೆ ಫೆಬ್ರವರಿ ೧೨ರಿಂದ ಫೆಬ್ರವರಿ ೨೩ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ ೧೬ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇನ್ನು ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ (ಫೆ.೧೨) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಈ ಸಂಬAಧ ನಿನ್ನೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್‌ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.
ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯನವರು ಏನೆಲ್ಲಾ ಹೊಸ-ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಾರೆ ಎನ್ನುವುದು ಒಂದೆಡೆ ಕುತೂಹಲ ಇದೆ. ಆದ್ರೆ, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಲು ಸರ್ಕಾರದಲ್ಲಿ ಅನುದಾನದ ಕೊರೆತ ಎದುರಾಗಿದೆ. ಇದ್ದ ಅನುದಾನ ಐದು ಗ್ಯಾರಂಟಿ ಯೋಜನೆಗಳಿಗೆ ಸಾಲುತ್ತಿಲ್ಲ. ಹೀಗಾಗಿ ಹೊಸ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆಗಳು ಕಡಿಮೆ. ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಂದಿದ್ದ ಕೆಲ ಯೋಜನೆಗಳಿಗೆ ಮತ್ತೆ ಜೀವ ತುಂಬಲಿದ್ದಾರೆ. ಹಾಗೇ ಸದ್ಯದ ಕಾರ್ಯಕ್ರಮಗಳನ್ನೇ ಮುಂದುವರಿಸುವ ಸಾಧ್ಯತೆಗಳಿದೆ. ಒಟ್ಟಿನಲ್ಲಿ ಮುಂದೆ ಚುನಾವಣೆ ಇರುವುದರಿಂದ ಈ ಬಾರಿ ಸಿದ್ದರಾಮಯ್ಯನವರ ಬಜೆಟ್ ತೀವ್ರ ಕುತೂಹಲ ಮೂಡಿಸಿದೆ.

ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಅಸ್ತು
ಪರಿಶಿಷ್ಟ ಜಾತಿಗೆ(ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಜ.೧೮ ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಸಂಪುಟ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರಾದ ಎಚ್‌ಕೆ ಪಾಟೀಲ್ ಹಾಗೂ ಎಚ್‌ಸಿ ಮಹಾದೇವಪ್ಪ ಅವರು, ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಗ್ಗೆ ವಿವರಿಸಿದರು.
ವರದಿ ಕುರಿತು ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಹೊಸ ಜನಗಣತಿ ಪ್ರಕಾರ ಮೀಸಲಾತಿ ಪರಿಷ್ಕರಿಸಲು ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ನೀಡುವಂತೆ ಮತ್ತು ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ ೩೪೧ಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದರು.
ಇದರೊAದಿಗೆ ಒಳ ಮೀಸಲಾತಿ ವಿವಾದ ಈಗ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಈ ಹಿಂದೆ ಬಿಜೆಪಿ ಸರ್ಕಾರ ವರ್ಗೀಕರಣ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಈ ವಿಚಾರ ಸುಪ್ರೀಂನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಸಿದ್ದರಾಮಯ್ಯನವರ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿ ಕೈತೊಳೆದುಕೊಂಡಿದೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?