Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಶಿಕ್ಷಣ ಸುದ್ದಿ

ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

ಬಳ್ಳಾರಿ,ಫೆ.21 :    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಶಾರೀರಿಕ, ಮಾನಸಿಕವಾಗಿ ಸದೃಢರಾಗುವ ಮೂಲಕ ಸತತ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ತಿಳಿಸಿದರು.
ವಿದ್ಯಾರ್ಥಿ ಜೀವನದಲ್ಲಿ ಸಮಯ ಅಮೂಲ್ಯವಾಗಿದ್ದು, ಶಾಲಾ-ಕಾಲೇಜು ಮುಗಿದ ನಂತರವೇ ನಿಜವಾದ ಜೀವನ ಆರಂಭಗೊಳ್ಳುತ್ತದೆ. ಸಾಧಕರ ಜೀವನ ಶೈಲಿಗಳ ಮೂಲಕ ಪ್ರೇರಿತರಾಗಿ, ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಾಧಕರಾಗಬೇಕು ಎಂದು ಕಿವಿಮಾತು ಹೇಳಿದರು.

ನಿಲಯ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯಾವಕಾಶ ಸಿಗಲಿದೆ. ಪಠ್ಯದ ಜೊತೆಗೆ ಸರ್ಕಾರಿ ಹುದ್ದೆಗಳ ನಿರ್ದಿಷ್ಟ ಪಠ್ಯಕ್ರಮಗಳ ಅಧ್ಯಯನ, ಗುಂಪು ಚರ್ಚೆ ಹಾಗೂ ಇತರೆ ಅಧ್ಯಯನ ನಡೆಸಬೇಕು ಎಂದರು.
ಪದವಿ ನಂತರ ಸಾಕಷ್ಟು ಅವಕಾಶದ ಬಾಗಿಲು ತೆರೆಯುತ್ತವೆ. ಒಳ್ಳೆಯದ್ದನ್ನೇ ಆಯ್ಕೆ ಮಾಡಿಕೊಂಡು ಅವಕಾಶ ಉಪಯೋಗಿಸಿಕೊಳ್ಳಬೇಕು. ಕೇವಲ ಹಣ ಮಾಡಲು ಸರ್ಕಾರಿ ಹುದ್ದೆ ಪಡೆಯಬಾರದು ಸಾಮಾಜಿಕ ಸೇವೆ, ದೇಶಕ್ಕೆ ಕೊಡುಗೆ ನೀಡಬೇಕೆಂಬ ಪ್ರಾಮಾಣಿಕತೆ, ಸ್ಥಿರತೆ ಹೊಂದಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಮಾತನಾಡಿ, ಜೀವನವೇ ಒಂದು ಸ್ಪರ್ಧೆ. ಆ ಸ್ಪರ್ಧೆಯಲ್ಲಿ ನಾವೆಲ್ಲಾ ಸ್ಪರ್ಧಾ ಆಕಾಂಕ್ಷಿಗಳು. ಜೀವನದಲ್ಲಿ ನಾವು ಏನಾಗಬೇಕು ಎಂಬುದನ್ನು ನಮ್ಮ ಸಾಮರ್ಥ್ಯದ ಮೂಲಕ ದೃಢ ನಿರ್ಧಾರದೊಂದಿಗೆ ಶ್ರದ್ಧೆಯಿಂದ ಅಭ್ಯಾಸ ಮಾಡಿದಾಗ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮದ ಮೂಲಕ ಕಷ್ಟದ ದಿನಗಳನ್ನು ಎದುರಿಸಿದಾಗ ಮಾತ್ರ ಮುಂದೆ ಒಳ್ಳೆಯ ಸುಖದ ದಿನಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಶ್ರೀ ಮೇಧಾ ಡಿಗ್ರಿ ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಹಾಗೂ ಜೆಸಿಐ ಇಂಡಿಯಾದ ರಾಷ್ಟಿçÃಯ ತರಬೇತುದಾರ, ಮಕ್ಕಳ ಸಲಹೆಗಾರ ಜೆ.ಸಿ.ಮಂಜುನಾಥ ಬಳ್ಳೂಳ್ಳಿ, ಬಳ್ಳಾರಿಯ ಭೀಮರಾವ್ ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಟಡಿ ಸರ್ಕಲ್ ನ ನಿರ್ದೇಶಕ ಶೇಖರಪ್ಪ ಮತ್ತು ಸಂಡೂರು ಎಸ್.ಇ.ಎಸ್ ಶಿಕ್ಷಣ ಸಂಸ್ಥೆಯ ಡಾ.ಜಗದೀಶ್ ಬಸಾಪುರ ಅವರು ಸ್ಪರ್ಧಾತ್ಮಕ ಪರೀಕ್ಷೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವಿನೋದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ- ಸಿಬ್ಬಂದಿ, ನಿಲಯ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?