Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ

ಹೊಸಪೇಟೆ(ವಿಜಯನಗರ).ಫೆಬ್ರವರಿ.02: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ ಸಸಿಗಳನ್ನು ನೆಟ್ಟರು.
ಒಟ್ಟು ರೂ‌ 4.6 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಿಸಲಾಗಿದೆ. 27 ಸೆಪ್ಟೆಂಬರ್ 2022 ರಂದು ಕಾಮಗಾರಿ ಪ್ರಾರಂಭಿಸಿ, 28 ಆಗಸ್ಟ್ 2023 ಕ್ಕೆ ಪೂರ್ಣಗೊಳಿಸಲಾಗಿದೆ. ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣಕ್ಕೆ ಒಟ್ಟು 3 ಎಕರೆ ಜಮೀನು ಮಂಜೂರು ಮಾಡಲಾಗಿದೆ. 1255 ಚದರ ಮೀಟರ್ ಜಾಗದಲ್ಲಿ ಕಚೇರಿ ಕಟ್ಟಡ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಹೊಸಪೇಟೆ ಶಾಸಕ ಹೆಚ್‌.ಆರ್.ಗವಿಯಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್, ಬಳ್ಳಾರಿ ವಲಯದ ಐಜಿಪಿ ಲೋಕೇಶ್‌ಕುಮಾರ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ,ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು.ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು.ಬಿ.ಎಲ್ ಸೇರಿದಂತೆ ಇತರೆ ಮುಖಂಡರು ಇದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?