Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಆನ್ಲೈನ್ನಲ್ಲಿ ಆಸ್ತಿ ತೆರಿಗೆ ಪಾವತಿ ಸುಲಭ ; ನಾಗರೀಕರು ಆನ್ಲೈನ್ ಸೌಲಭ್ಯ ಬಳಸಿಕೊಳ್ಳಿರಿ

ಬಳ್ಳಾರಿ, ಫೆ. 02: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯ ಆಸ್ತಿಗಳಿಗೆ ನಾಗರೀಕರು ಆನ್ಲೈನ್ ಮೂಲಕ ಆಸ್ತಿ ತೆರಿಗೆಯನ್ನು ಪಾವತಿ ಮಾಡಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ. ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು `ಅಸ್ತಿ ತೆರಿಗೆ ನಿಗಧಿ ಮತ್ತು ಪಾವತಿ' ಕುರಿತು ವಿವಿಧ ಸಂಘಗಳ ಪದಾಧಿಕಾರಿಗಳು, ಸದ್ಯರು ಮತ್ತು ವಾಣಿಜ್ಯೊದ್ಯಮಿಗಳು - ಕೈಗಾರಿಕೋದ್ಯಮಿಗಳಿಗೆ ಮಾಹಿತಿ ನೀಡಿದರು.

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಶ್ವೇತ. ಬಿ. ಸೋಮು ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಮಹಾರುದ್ರಗೌಡ ಅವರು ಸ್ವಾಗತಿಸಿ, ಸನ್ಮಾನಿಸಿ ಅಭಿನಂದಿಸಿ, ಬಳ್ಳಾರಿ ಎಪಿಎಂಸಿಯು 1966 ರಿಂದ ಪ್ರಾರಂಭವಾಗಿದ್ದೂ ವ್ಯಾಪಾರಿಗಳು ಬಾಡಿಗೆಯನ್ನು ಪಾವತಿಸುತ್ತಿದ್ದು. ಕಳೆದ 2 - 3 ವರ್ಷಗಳಿಂದ ಎಪಿಎಂಸಿಯ ಅಂಗಡಿಗಳು ವ್ಯಾಪಾರಿಗಳಿಗೆ ಮಾರಾಟವಾಗಿವೆ. ಕಾರಣ ಪ್ರಸ್ತುತ ಸಾಲಿನಿಂದ ಆಸ್ತಿ ತೆರಿಗೆಯನ್ನು ಬಡ್ಡಿ - ದಂಡರಹಿತವಾಗಿ ಪಾವತಿ ಮಾಡಲು ಸಿದ್ದವಾಗಿದ್ದೇವೆ ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆಸ್ತಿ ತೆರಿಗೆಯನ್ನು ನಿಗಧಿ ಮಾಡುವ ಕುರಿತು ಸಬ್ ರಿಜಿಸ್ಟಾçರ್ ಕಚೇರಿ ಜೊತೆ ಆಸ್ತಿ ಮೌಲ್ಯವನ್ನು ನಿಗಧಿ ಮಾಡಬೇಕು ಎಂದು ಸಲಹೆ ನೀಡಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿ ನೂರ್ ಅಹ್ಮದ್ ಅವರು, ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ಆನ್ಲೈನ್ನಲ್ಲಿ `ಆಸ್ತಿ ತೆರಿಗೆಯನ್ನು ನಿಗದಿ ಮಾಡುವ ಮತ್ತು ತೆರಿಗೆ ಪಾವತಿಸುವ ಕುರಿತು ವಿವರಿಸಿದರು. ಸಕಾಲದಲ್ಲಿ ತೆರಿಗೆ ಪಾವತಿಸದಿದ್ದಲ್ಲಿ ಶೇ. 2 ರಷ್ಟು ದಂಡ, ಸಕಾಲದಲ್ಲಿ ಆಸ್ತಿ ತೆರಿಗೆಯನ್ನು ಪಾವತಿ ಮಾಡಿ ಒಟ್ಟು ಮೊತ್ತದಲ್ಲಿ ಶೇ. 5ರ ರಿಯಾಯಿತಿ ಪಡೆಯುವ ಕುರಿತು ಸಭೆಗೆ ಮಾಹಿತಿ ನೀಡಿದರು.

ಗೌರವಾಧ್ಯಕ್ಷರಾದ ಸಿ. ಶ್ರೀನಿವಾಸರಾವ್ ಅವರು, ಬಳ್ಳಾರಿ ಮಹಾನಗರ ಪಾಲಿಕೆ, ವಾಡಾ ಮತ್ತು ಬುಡಾ ವ್ಯಾಪ್ತಿಯಲ್ಲಿ ಅನಧಿಕೃತ ಲೇಔಟ್ಗಳ ರಚನೆ, ಕಟ್ಟಡಗಳ ನಿರ್ಮಾಣ ವ್ಯಾಪಕವಾಗಿ ನಡೆದಿದೆ. ಇದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು. ಹಿರಿಯರಾದ ವಾಸುದೇವರಾವ್, ಎ. ಸುಧಾಕರ್ ಅವರು ಪ್ರಶ್ನೆಗಳನ್ನು ಕೇಳಿದರು.

ಮೇಯರ್ ಶ್ವೇತ ಬಿ. ಸೋಮು ಅವರು, ಮಹಾನಗರ ಪಾಲಿಕೆಯ ಅಭಿವೃದ್ಧಿಯು ಆಸ್ತಿ ತೆರಿಗೆಯ ಶೇ. 80 ರಿಂದ 90 ರಷ್ಟನ್ನು ಆಧರಿಸಿರುತ್ತದೆ. ಕಾರಣ ಸಾರ್ವಜನಿಕರು ತಪ್ಪದೇ ತಮ್ಮ ಆಸ್ತಿಯ ತೆರಿಗೆಯನ್ನು ಪಾವತಿ ಮಾಡಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಪೊರೇಟರ್ ನೂರ್ ಅಹ್ಮದ್ ಇನ್ನಿತರರು ಸಭೆಯಲ್ಲಿದ್ದರು. ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.

ಉಪಾಧ್ಯಕ್ಷರಗಳಾದ ಎಸ್ ದೊಡ್ಡನಗೌಡ, ಗಿರಿಧರ ಸೂಂತ್ ,ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನ ಗೌಡ ಮತ್ತು ವಿ. ರಾಮಚಂದ್ರ, ಹಿರಿಯ ಸದಸ್ಯರಾದ ವಿ. ರವಿಕುಮಾರ್, ಚೇರ್ಮನ್ಗಳಾದ, ಟಿ.ಶ್ರೀನಿವಾಸ್ ರಾವ್, ನೇಕಾರ ನಾಗರಾಜ್, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು, ಇತರೇ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?