Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನ ಮಾಡಲು ಸಿಎಂ ಸೂಚನೆ

ಬೆಂಗಳೂರು,ಜ,೦೯: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿದರು. ಮಂಡಳಿಯಲ್ಲಿ ಪ್ರಸ್ತುತ ೨೧೦೬ ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ ೭೫೭.೬೬ ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ.
ಇದಕ್ಕಾಗಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ, ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ. ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡುವಂತೆ ಸೂಚಿಸಿದರು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಲು ಸೂಚಿಸಿದರು.
ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್ ಅಂತ್ಯದ ಒಳಗೆ ರೂಪಿಸುವಂತೆ ಸೂಚಿಸಿದರು. ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. ೫೦ ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಸೂಚಿಸಿದರು. ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸಚಿವರುಗಳಾದ ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಬೋಸ್ ರಾಜು, ರಹೀಂ ಖಾನ್, ಡಿ.ಸುಧಾಕರ್ ಜತೆಗೆ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಆರ್ಥಿಕ ಸಲಹೆಗಾರ ಬಸವರಾಜ ರಾಯ ರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸಭೆಯಲ್ಲಿ ಭಾಗಿಯಾದರು. ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?