Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಹಣಕಾಸು ಸಮಿತಿಯಿಂದ ಕರ್ನಾಟಕಕ್ಕೆ ಭಾರಿ ನಷ್ಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜ,೨೧: ಈ ಹಿಂದೆ ಹಣಕಾಸು ಆಯೋಗದ ಶಿಫಾರಸುಗಳಿಂದ ಕರ್ನಾಟಕ ರಾಜ್ಯವು ಭಾರಿ ಆದಾಯ ನಷ್ಟವನ್ನು ಅನುಭವಿಸಿದ್ದು, ಇದನ್ನು ೧೬ ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಪಾಲು ೧೪ ನೇ ಹಣಕಾಸು ಆಯೋಗದ ಅಡಿಯಲ್ಲಿ ಶೇಕಡಾ ೪.೭೧೩ ರಿಂದ ೧೫ ನೇ ಹಣಕಾಸು ಆಯೋಗದ ಅಡಿಯಲ್ಲಿ ಶೇಕಡಾ ೩.೬೪೭ ಕ್ಕೆ ಕಡಿಮೆಯಾಗಿದೆ. ಈ ಕಾರಣದಿಂದಾಗಿ, ರಾಜ್ಯಕ್ಕೆ ಸಾಕಷ್ಟು ಸಂಪನ್ಮೂಲಗಳನ್ನು ನೀಡಲಾಗಿಲ್ಲ ಎಂದು ಸಿಎಂ ಹೇಳಿದ್ದಾರೆ.
೧೬ನೇ ಹಣಕಾಸು ಆಯೋಗ ರಚನೆಯಾಗಿರುವ ಸಂದರ್ಭದಲ್ಲಿ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯ, ವಿತ್ತೀಯ ನೀತಿ ಸಂಸ್ಥೆ ಹಾಗೂ ಆರ್ಥಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಆರ್ಥಿಕ ಸಂಯುಕ್ತ ತತ್ವ, ೧೬ ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ರಾಜ್ಯಗಳ ಪೈಕಿ ಕರ್ನಾಟಕವು ಶೇ ೧.೦೬೬ ರಷ್ಟು ಕಡಿತವನ್ನು ಅನುಭವಿಸಿದೆ ಎಂದರು. ಪ್ರಸ್ತುತ ವಿಧಾನವು ಆದಾಯದ ಅಂತರವನ್ನು ಪರಿಗಣಿಸುತ್ತದೆ, ಅದರ ಪ್ರಕಾರ, ಅತಿ ಹೆಚ್ಚು ತಲಾ ಆದಾಯದ ರಾಜ್ಯದಿಂದ ಕಡಿಮೆ ಅಂತರದಿAದಾಗಿ ಕರ್ನಾಟಕವು ಕಳೆದುಕೊಳ್ಳುತ್ತದೆ.
ಸಂಯುಕ್ತ ಆರ್ಥಿಕ ವರ್ಗಾವಣೆಯಲ್ಲಿನ ವೈಪರೀತ್ಯಗಳನ್ನು ಪರಿಶೀಲಿಸಲು ಕರ್ನಾಟಕ ದೃಢವಾಗಿ ಪ್ರಾತಿನಿಧ್ಯವನ್ನು ವಹಿಸಬೇಕಿದೆ. ದಕ್ಷತೆಯ ಜೊತೆಗೆ ನೀತಿಗೆ ಸಂಬAಧಿಸಿದAತೆ ವರ್ಗಾವಣೆಯ ಅರ್ಹತೆಗಳ ಬಗ್ಗೆ ಸಾಕಷ್ಟು ಒಟ್ಟು ನೀಡಲು ಇದು ಸುಸಂದರ್ಭ ಎಂದರು.
ಹೆಚ್ಚಿನ ತಲಾ ಆದಾಯದ ಮಟ್ಟಗಳು ಮುಖ್ಯವಾಗಿ ಬೆಂಗಳೂರು ನಗರ ಜಿಲ್ಲೆಯಿಂದ ೬,೨೧,೧೩೧ ರೂಪಾಯಿಗಳಿವೆ. ಈ ವಿಧಾನವು ೧,೨೪,೯೯೮ ರೂಪಾಯಿಗಳ ತಲಾ ಆದಾಯವನ್ನು ಹೊಂದಿರುವ ಬೆಳಗಾವಿಯಂತಹ ಕೆಲವು ಜಿಲ್ಲೆಗಳ ಕಡಿಮೆ ತಲಾ ಆದಾಯವನ್ನು ಪರಿಹರಿಸಲು ಕರ್ನಾಟಕವು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿದೆ. ಹಣಕಾಸು ಆಯೋಗಕ್ಕೆ ಅಗತ್ಯ ಹೊಂದಾಣಿಕೆ ಮಾಡಬೇಕು ಎಂದರು
ತೆರಿಗೆಯಲ್ಲಿ ಬೆಂಗಳೂರಿನ ಕೊಡುಗೆ ಬಗ್ಗೆ ಮಾತನಾಡಿದ ಸಿಎಂ, ದೇಶದಲ್ಲಿ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯವು ಅದರ ಕೊಡುಗೆಗೆ ಸಾಕಷ್ಟು ಪ್ರತಿಫಲ ಪಡೆಯದಿರುವುದು ವಿಪರ್ಯಾಸ. ರಾಜ್ಯದ ದಕ್ಷತೆ ಮತ್ತು ಹಣಕಾಸಿನ ಕಾರ್ಯಕ್ಷಮತೆಗಾಗಿರಾಜ್ಯವನ್ನು ಪ್ರೋತ್ಸಾಹಿಸಬೇಕು. ಹಣಕಾಸು ಆಯೋಗವು ರಾಜ್ಯಗಳ ಇಕ್ವಿಟಿ ಕಾಳಜಿಗಳ ಮೇಲೆ ಕೇಂದ್ರೀಕರಿಸಬೇಕು ಎಂದರು. ಎಚ್‌ಡಿಐ ಮೌಲ್ಯ ಶೇಕಡಾ ೦.೭೩೮ ರಲ್ಲಿ ಬೆಂಗಳೂರು ನಗರವು ಮೊದಲ ಸ್ಥಾನವನ್ನು ಹಂಚಿಕೊAಡಿರುವ ಮೂಲಕ ಮಾನವ ಅಭಿವೃದ್ಧಿಯಲ್ಲಿನ ಅಸಮತೋಲನದ ಬಗ್ಗೆ ಸಿಎಂ ಮಾತನಾಡಿದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?