Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಂವಿಧಾನ ನಮಗೆ ಧರ್ಮಗ್ರಂಥ ಇದ್ದ ಹಾಗೆ: ಸಿ.ಎಂ.ಸಿದ್ದರಾಮಯ್ಯ

ತುಮಕೂರು, ಜ ೨೧: ಶಿವಕುಮಾರಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ" ವನ್ನು ಉದ್ಘಾಟಿಸಿ, ಶ್ರೀಗಳ ೫ ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶ್ರೀ ಶಿವಕುಮಾರಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
೧೨ ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತಾ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ವಿವರಿಸಿದರು.
ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು. ಇಂದು ೧೦ ಸಾವಿರ ಮಕ್ಕಳಿಗೆ ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ಮುಖ್ಯಮಂತ್ರಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
ನಂಜುAಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ನಾನು ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.
ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಶ್ರಮಿಸಿದರು. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದರು.
ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ ೫೮ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದು ವಿವರಿಸಿದರು.
ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಸಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂ ಏಖIಆಐ ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?