Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಅರ್ಥಪೂರ್ಣ-ಅದ್ದೂರಿಯಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್

ಬಳ್ಳಾರಿ,ಏ.15 : ಸಮಾಜಕ್ಕೆ ತಮ್ಮ ಆಚಾರ-ವಿಚಾರ ಸಂದೇಶಗಳನ್ನು ತಲುಪಿಸಿದ ಬಸವಣ್ಣನವರ ಕೊಡುಗೆ ಅಪಾರ. ಅಂತಹ ಭಕ್ತಿ ಭಂಡಾರಿ ಬಸವಣ್ಣನವರ ಜಯಂತಿಯನ್ನು  ಏ. 30 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ  ಬಸವಣ್ಣನವರ ಜಯಂತಿ ಆಚರಣೆ ಸಂಬAಧ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾನುಭಾವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಬಸವಣ್ಣನವರನ್ನು ರಾಜ್ಯ ಸರ್ಕಾರವು ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.

ಏ.30 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ  ಮಾಡಲಾಗುವುದು. ನಂತರ ಸಂಜೆ 07.30 ಗಂಟೆಗೆ ಬಸವಣ್ಣನವರ ಜಯಂತಿಯನ್ನು ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್‌ಪೇಟೆ ಪೊಲೀಸ್ ಠಾಣೆ-ಜೈನ್ ಮಾರ್ಕೆಟ್ ರಸ್ತೆ-ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದ ವರೆಗೆ ನಡೆಯಲಿದೆ ಎಂದರು.

ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿನ ಬಸವೇಶ್ವರರ ಪ್ರತಿಮೆಯ ಸ್ಥಳದ ಆವರಣದಲ್ಲಿ ಸ್ವಚ್ಚತೆ ಹಾಗೂ ಜಯಂತಿ ನಡೆಯುವ ಸ್ಥಳದಲ್ಲಿ ಆಸನದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಸೂಚನೆ ನೀಡಿದರು.

ಜಯಂತಿ ಆಚರಣೆಗೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ರಂಗಮAದಿರದಲ್ಲಿ ವಚನ ಗಾಯನ ಏರ್ಪಡಿಸಲಾಗುವುದು. ಜಯಂತಿ ಮೆರವಣಿಗೆಗಳಲ್ಲಿ ಜಾನಪದ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯೊಬ್ಬರನ್ನು ನಿಯೋಜಿಸಲಾಗುವುದು. ಸಮುದಾಯದಲ್ಲಿ ವಿಶೇಷ ಸಾಧನೆಗೈದವರನ್ನು ಸನ್ಮಾನಿಸಲು ಸಾಧಕರ ಹೆಸರು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು ತಮ್ಮ ಸಲಹೆ-ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಮಹಾನಗರ ಪಾಲಿಕೆಯ ರೆಹಮಾನ್ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಹಾಗೂ ಮತ್ತೀತರರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?