Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ರಾಜಕೀಯಕ್ಕೆ ಇಳಿದ ದಳಪತಿ ವಿಜಯ್, 'ತಮಿಳಗ ವೆಟ್ರಿ ಕಳಗಂ' ಪಕ್ಷ ಘೋಷಣೆ!

ಚೆನ್ನೈ (ಫೆ.2):  ತಮಿಳು ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರು ಪ್ರಮುಖ ಲೋಕಸಭೆ ಚುನಾವಣೆಗೆ ಕೆಲ ತಿಂಗಳು ಮೊದಲು 'ತಮಿಳಗ ವೆಟ್ರಿ ಕಳಗಂ' ಎಂಬ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ನಂತರ ದಳಪತಿ ವಿಜಯ್‌ ಈ ಘೋಷಣೆ ಮಾಡಿದ್ದಾರೆ. ಈ ಕುರಿತಾದ ಹೇಳಿಕೆ ಪ್ರಕಟ ಮಾಡಿರುವ ನಟ,  "ನಾವು ನಮ್ಮ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ, ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ. ಇದನ್ನೇ ಜನರು ಬಯಸಿದ್ದಾರೆ' ಎಂದು ತಿಳಿಸಿದ್ದಾರೆ.

ರಾಜಕಾರಣ ಎನ್ನುವುದು ನನ್ನ ಇನ್ನೊಂದು ವೃತ್ತಿಯಲ್ಲ. ಇದು ಜನರ ಪವಿತ್ರ ಕೆಲಸ ಎಂದು ಭಾವಿಸಿದ್ದೇನೆ. ನಾನು ಬಹಳ ಸಮಯದಲ್ಲಿ ರಾಜಕೀಯಕ್ಕೆ ಇಳಿಯುವ ನಿಟ್ಟಿನಲ್ಲಿ ಸಿದ್ಧತೆ ನಡೆಸುತ್ತಿದ್ದೆ. ರಾಜಕೀಯ ಎಂದಿಗೂ ನನಗೆ ಹವ್ಯಾಸವಲ್ಲ. ಇದು ನನ್ನಲ್ಲಿದ್ದ ಆಳವಾದ ಆಸೆಯಾಗಿದೆ. ನಾನು ನನ್ನನ್ನು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಬಯಸುತ್ತೇನೆ ಎಂದು ದಳಪತಿ ವಿಜಯ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಮ್ಮ ರಾಜಕೀಯ ನಡೆಯ ಬಗ್ಗೆ ಮತ್ತಷ್ಟು ವಿವರಣೆ ನೀಡಿದ ವಿಜಯ್‌, "ಸದ್ಯದ ರಾಜಕೀಯ ವಾತಾವರಣದ ಬಗ್ಗೆ ನಿಮಗೆಲ್ಲರಿಗೂ ತಿಳಿದಿದೆ. ಆಡಳಿತದ ದುಷ್ಕೃತ್ಯಗಳು ಮತ್ತು ಭ್ರಷ್ಟ ರಾಜಕೀಯ ಸಂಸ್ಕೃತಿ ಒಂದೆಡೆಯಾಗಿದ್ದರೆ, ಇನ್ನೊಂದೆಡೆ, ನಮ್ಮ ಜನರನ್ನು ಧರ್ಮ ಹಾಗೂ ಜಾತಿಯ ಆಧಾರದ ಮೇಲೆ ವಿಭಜಿಸುವ ರಾಜಕೀಯ ಸಂಸ್ಕೃತಿ ಇದೆ. ಪ್ರತಿಯೊಬ್ಬರೂ, ವಿಶೇಷವಾಗಿ, ತಮಿಳುನಾಡಿನಲ್ಲಿ ನಿಸ್ವಾರ್ಥ, ಪಾರದರ್ಶಕ, ಜಾತಿ ಮುಕ್ತ, ದೂರದೃಷ್ಟಿ, ಭ್ರಷ್ಟಾಚಾರ ಮುಕ್ತ ಮತ್ತು ಸಮರ್ಥ ಆಡಳಿತಕ್ಕೆ ಕಾರಣವಾಗುವ ಮೂಲಭೂತ ರಾಜಕೀಯ ಬದಲಾವಣೆಗಾಗಿ ಹಂಬಲಿಸುತ್ತಿದ್ದಾರೆ' ಎಂದು ತಿಳಿಸಿದ್ದಾರೆ.

ಚುನಾವಣಾ ಆಯೋಗದ ಅನುಮೋದನೆ ಪಡೆದ ನಂತರ, ಪಕ್ಷವು ಸಾರ್ವಜನಿಕ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ನಡೆಸಲು ಯೋಜಿಸುತ್ತಿದೆ, ಅಲ್ಲಿ ಅವರು ಪಕ್ಷದ ನೀತಿಗಳು, ತತ್ವಗಳು ಮತ್ತು ಕ್ರಿಯಾ ಯೋಜನೆಗಳನ್ನು ಪ್ರಸ್ತುತಪಡಿಸಲಿದ್ದೇನೆ ಮತ್ತು ಧ್ವಜ ಮತ್ತು ಪಕ್ಷದ ಚಿಹ್ನೆಯನ್ನು ಜನರಿಗೆ ತಿಳಿಸುವುದಾಗಿ ಹೇಳಿದ್ದಾರೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?