Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ನಿರ್ಧಾರ - ಮಹನೀಯರ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಮಾ.19 : ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಈ ಇಬ್ಬರು ಮಹನೀಯರ ಜಯಂತೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಡಾ.ಬಾಬು ಜಗಜೀವನ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮ ಆಚರಿಸುವ ಕುರಿತು ನಗರದ ಜಿಲ್ಲಾ ಪಂಚಾಯತ್ ನ ನೂತನ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಅವರ 118 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಏ.05 ರಂದು ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮವನ್ನು ಏ.14 ರಂದು ಅದ್ದೂರಿಯಾಗಿ ಆಚರಿಸಲು ಇದಕ್ಕೆ ಬೇಕಾದ ಸಕಲ-ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಳೆದ ಎರಡು ವರ್ಷಗಳಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ವಿಜೃಂಭಣೆಯಿAದ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಆಯಾ ಸಮಿತಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಶಿಷ್ಠಾಚಾರನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಎಲ್ಲಾ ಗಣ್ಯರಿಗೆ ಆಹ್ವಾನಿಸಬೇಕು. ಮಹನೀಯರ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಲು ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಅಭಿನಂದಿಸಲು ಸನ್ಮಾನ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದ ಅವರು, ಜಯಂತಿ ಕಾರ್ಯಕ್ರಮಗಳಂದು ನಡೆಯುವ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸಹಕಾರದಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ.ಬಾಬು ಜಗನ್‌ಜೀವನ್‌ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ನಾವೆಲ್ಲರೂ ಆಳವಡಿಸಿಕೊಳ್ಳುವ ಮೂಲಕ ಎಲ್ಲರೂ ಸಂಘಟಿತರಾಗಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರೂ ತಪ್ಪದೇ ಭಾಗವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಮಾತನಾಡಿ, ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಣಾಮಕಾರಿಯಾಗಿ, ಅಚ್ಚುಕಟ್ಟಾಗಿ ಆಯೋಜಿಸುವಂತೆ ನಿರ್ದೇಶನ ನೀಡಲಾಗುವುದು ಎಂದು ಸಭೆಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಮಾತನಾಡಿ, ಮಹನೀಯರ ಜಯಂತಿ ಅಂಗವಾಗಿ ನಗರದಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಮತ್ತು ಕಲಾವಿದರ ತಂಡಗಳನ್ನೊಳಗೊAಡು ಅದ್ದೂರಿ ಮೆರವಣಿಗೆ ಆಯೋಜಿಸಲಾಗುವುದು ಎಂದರು.

*ಡಾ.ಬಾಬು ಜಗನ್‌ಜೀವನ್ ರಾಂ ಜಯಂತಿ:*
ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಅವರ ಜಯಂತಿ ಕಾರ್ಯಕ್ರಮವನ್ನು ಏ.05 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಏರ್ಪಡಿಸಲಾಗುವುದು. ಅಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ-ಜೈನ್ ಮಾರ್ಕೆಟ್ ರಸ್ತೆ-ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ.

*ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ:*
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಏ.14 ರಂದು ಸಂಜೆ 06 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗುವುದು. ಅಂದು ಸಂಜೆ 04 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಗೊAಡು ಹೆಚ್.ಆರ್.ಗವಿಯಪ್ಪ ವೃತ್ತ-ಜೈನ್ ಮಾರ್ಕೆಟ್ ರಸ್ತೆ-ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ-ಬೆAಗಳೂರು ರಸ್ತೆ-ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ವರೆಗೆ ನಡೆಯಲಿದೆ.
ಮೆರವಣಿಗೆಯಲ್ಲಿ ಎಲ್ಲಾ ಸಂಘ-ಸAಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಳಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಮುಖಂಡರು ಮಾತನಾಡಿ, ನಗರದ ನಲ್ಲಚೇರುವು ಪ್ರದೇಶದಲ್ಲಿರುವ ಡಾ.ಬಾಬು ಜಗನ್ ಜೀವನ್ ರಾಮ್ ಭವನದ ಮೇಲ್ಛಾವಣಿ ತಗಡಿನ ಶೀಟ್ ನಿಂದ ಕೂಡಿದ್ದು, ಸೂಕ್ತವಾಗಿರದ ಕಾರಣ ಕೂಡಲೇ ಬದಲಾಯಿಸಿ ಸಿಮೆಂಟ್ ನಿಂದ ಮೇಲ್ಛಾವಣಿ ನಿರ್ಮಿಸಬೇಕು. ಅದರಂತೆ ನಗರದ ಮೊದಲನೇ ಗೇಟ್ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ದುರಸ್ತಿ ಕಾರ್ಯವು ವೇಗ ನೀಡಬೇಕು ಎಂದು ಸಭೆಗೆ ತಿಳಿಸಿದರು.

ಮಹನೀಯರ ಜಯಂತಿಯ ಕಾರ್ಯಕ್ರಮ ಗ್ರಾಮಮಟ್ಟದಲ್ಲಿ ಸರಿಯಾಗಿ ಆಯೋಜಿಸುತ್ತಿಲ್ಲ. ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಯುವ ಸಮುದಾಯ ಮತ್ತು ಮಕ್ಕಳಿಗೆ ತಲುಪಿಸುವ ವಿಚಾರ ಸಂಕಿರಣದAತಹ ಕಾರ್ಯಕ್ರಮ ಆಯೋಜಿಸಿ ಮಾಹಿತಿ ತಲುಪಿಸುವ ಕೆಲಸವಾಗಬೇಕು ಎಂದು ಸಭೆಗೆ ಪ್ರಸ್ತಾಪಿಸಿದರು.
ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮಗಳ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು ಎಂದು ಮಂಡಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಒಂದನ್ನು ಗುರುತಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗೆ ಕ್ರಮವಹಿಸಬೇಕು. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಡಾ.ಬಾಬು ಜಗನ್ ಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಸಭೆಗೆ ಮುಖಂಡರು ತಿಳಿಸಿದರು.   

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಆಹಾರ ಇಲಾಖೆಯ ಉಪನಿರ್ದೇಶಕಿ ಸಕೀನಾ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?