Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಶಿಕ್ಷಣದಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ: ಡಾ.ಎಡ್ರಿಸ್ ಉಮ್ರಿ

ಬಳ್ಳಾರಿ,ಫೆ.03 : ಸಂವಿಧಾನ ಶಿಲ್ಪಿ  ಡಾ.ಬಿ.ಆರ್.ಅಂಬೇಡ್ಕರ್ ಅವರು ಅಸ್ಪøಶ್ಯತೆ, ಅಸಮಾನತೆ ವಿರುದ್ಧ ಹೋರಾಡಿದವರು. ಶಿಕ್ಷಣದಿಂದ ಎಲ್ಲವನ್ನು ಸಾಧಿಸಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮೊಹಮ್ಮದಿಯ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ಎಡ್ರಿಸ್ ಉಮ್ರಿ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಮೊಹಮ್ಮದಿಯ ಮಹಿಳಾ ಬಿ.ಎಡ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಳಾದೇವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಬಿ.ಶ್ರೀನಿವಾಸ ಮೂರ್ತಿ ಅವರು ಮಾತನಾಡಿ, ಪ್ರಪಂಚದಲ್ಲೇ ಶ್ರೇಷ್ಠ ಸಂವಿಧಾನ ಗ್ರಂಥವನ್ನು ರಚಿಸಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರು. ಬಡತನದಿಂದ ಅಸ್ಪøಶ್ಯತೆ, ಅಸಮಾನತೆ ಹಾಗೂ ಹಲವು ಸಮಸ್ಯೆಗೆ ಗುರಿಯಾಗಿದ್ದರಿಂದ ಮುಂದೊಂದು ದಿನ ಬೇರೆ ಯಾರು ಸಹ ಇಂತಹ ಸಮಸ್ಯೆಗೆ ತುತ್ತಾಗಬಾರದೆಂದು ಸಂವಿಧಾನದ ರಚಿಸಿ ಸಮಾನತೆ ರೂಪಿಸಿಕೊಟ್ಟರು ಎಂದು ವಿವರಿಸಿದರು.

ಅಪ್ರತಿಮ ಚಿಂತಕ, ಪ್ರಜಾಪ್ರಭುತ್ವವಾದಿ, ಸಾಮಾಜಿಕ ಚಿಂತಕರಾಗಿದ್ದರು. ವಿದ್ಯಾರ್ಥಿಗಳು ಅಂಬೇಡ್ಕರ್ ರೀತಿ ಜ್ಞಾನ ಗ್ರಹಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತಲುಪಲು ಶಿಕ್ಷಣ ಮಹತ್ತರವಾಗಿದೆ ಎಂದು ಹೇಳಿದರು.

ಅಂಬೇಡ್ಕರ್ ಬಗ್ಗೆ ತಿಳಿದುಕೊಳ್ಳಲು ಅವರ ಬದುಕು ಮತ್ತು ಬರಹ ಪುಸ್ತಕ ಓದಬೇಕು. ಗೌತಮ ಬುದ್ಧನ ತತ್ವಗಳಿಂದ ಪ್ರಭಾವಿತರಾದ ನಂತರ ಅವರು ದೃಷ್ಠಿಕೋನವೇ ಬದಲಾಯಿತು. ವಿದ್ಯಾರ್ಥಿ ಜೀವನದಲ್ಲಿ ದಿನದ 18 ಗಂಟೆಗಳ ಸಮಯವನ್ನು ವಿದ್ಯಾಭ್ಯಾಸಕ್ಕೆ ಮೀಸಲಿಟ್ಟಿದ್ದರು. ಈಗಿನ ವಿದ್ಯಾರ್ಥಿಗಳು ಸಹ ಸಮಯ ಮೀಸಲಿಟ್ಟು ಅಭ್ಯಾಸ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ಮೊಹಮ್ಮದಿಯ ಮಹಿಳಾ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮೈಮೂದ ಎಸ್ ಸೇರಿದಂತೆ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?