Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮಾಧ್ಯಮದಲ್ಲಿ ನೈಜ ಸಮಸ್ಯೆಗೆ ಆದ್ಯತೆ ಸಿಗಲಿ: ಡಾ.ನರಸಿಂಹ

ಗಂಗಾವತಿ,ಫೆ.5: ಮಾಧ್ಯಮದಲ್ಲಿ ನೈಜ, ಜ್ವಲಂತ ಸಮಸ್ಯೆಗೆ ಆದ್ಯತೆ ಸಿಗಬೇಕು, ಈ ನಿಟ್ಟಿನಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಈ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಹಾಯಕ ಪ್ರಾಧ್ಯಾಪಕ ಡಾ.ನರಸಿಂಹ ಅವರು ತಿಳಿಸಿದರು.

ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಆಂತರಿಕ ಗುಣಮಟ್ಟ ಭರವಸೆ ಕೋಶ(ಐಕ್ಯೂಎಸಿ) ಪಠ್ಯೇತರ ಚಟುವಟಿಕೆ ಭಾಗವಾಗಿ ಸೋಮವಾರ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಡಿಜಿಟಲ್ ಯುಗದಲ್ಲಿ ಮಾಧ್ಯಮ ವಿಷಯಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡುತ್ತಾ ಕೊಪ್ಪಳ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನರಸಿಂಹ ಅವರು ಮಾತನಾಡಿದರು.

ಪ್ರಸ್ತುತ ಮಾಧ್ಯಮದಲ್ಲಿ ಏಕಸ್ವಾಮ್ಯ ಹೆಚ್ಚಾಗಿದ್ದು, ಇದು ಪತ್ರಿಕೋದ್ಯಮದ ಆಶಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಚೌಕಟ್ಟನ್ನು ಮೀರಿ ಸುದ್ದಿಗಳು, ವರದಿಗಳು ಬರಬೇಕಿದೆ, ಮುಂಚಿನಂತೆ ಸ್ವತಂತ್ರ ಬರವಣಿಗೆಗೆ ಅವಕಾಶ ಕ್ಷೀಣಿಸುತ್ತಿದೆ, ಇದರಿಂದ ಪತ್ರಿಕಾ ಸ್ವಾತಂತ್ರ್ಯ ಸಹ ಕೆಳಮಟ್ಟಕ್ಕೆ ಕುಸಿದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಡಿಜಿಟಲ್ ಮಾಧ್ಯಮದಲ್ಲಿ ಸಹ ಹೆಚ್ಚಿರುವ ಅವಕಾಶಗಳ ಜೊತೆಗೆ ಮಾಧ್ಯಮ ಕೇಂದ್ರಿಕೃತವಾಗಿ ಡಿಜಿಟಲ್ ಯುಗದ ಸದ್ಬಳಕೆ ಮಾಡಿಕೊಳ್ಳಲು ಪತ್ರಿಕೋದ್ಯಮ ವಿದ್ಯಾರ್ಥಿಗಳು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಾಜಿ ದೇವೇಂದ್ರಪ್ಪ ಅವರು ಮಾತನಾಡಿ ಡಿಜಿಟಲ್ ಮಾಧ್ಯಮ ಯುಗದಲ್ಲಿ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿದ್ದು, ಇದರ ಜೊತೆಗೆ ಸಾಮಾಜಿಕ ಜಾಲತಾಣದ ಮೂಲಕ ಧರ್ಮವನ್ನು ಒಗ್ಗೂಡಿಸುವಲ್ಲಿ, ಬೇರ್ಪಡಿಸುವಲ್ಲಿ ತನ್ನದೇ ಆದ ಜಾಡಿನ ಕಾರ್ಯ ನಿರ್ವಹಿಸುತ್ತಿದ್ದು, ಪತ್ರಿಕಾ ರಂಗದಲ್ಲಿ ನೈತಿಕತೆ ಮೂಲಕ ವಿಶ್ವಾಸಾರ್ಹ ಸುದ್ದಿಗಳು ಬರಬೇಕು. ಈ ನಿಟ್ಟಿನಲ್ಲಿ ಮಾಧ್ಯಮ ಎಂದಿಗೂ ವಿರೋಧ ಪಕ್ಷದ ಸ್ಥಾನವನ್ನು ಜತನವಾಗಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪತ್ರಿಕೋದ್ಯಮ ವಿಭಾಗದ ಮುಖ್ಯರಾದ ಕರಿಗೂಳಿ ಅವರು ವಿಭಾಗದ ಏಳಿಗೆಗಾಗಿ ಪಠ್ಯೇತರ ಚಟುವಟಿಕೆ ಮೂಲಕ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮಗಳ ಮೂಲಕ ಮಾಧ್ಯಮದ ಪೂರಕ ಸಂಪನ್ಮೂಲ ಒದಗಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಸಂಪನ್ಮೂಲ ವ್ಯಕ್ತಿ ಡಾ.ನರಸಿಂಹ ಅವರಿಗೆ ಪತ್ರಿಕೋದ್ಯಮ ವಿಭಾಗದ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಡಾ.ವೈ.ಎಸ್.ವಗ್ಗಿ, ಸಹ-ಸಂಯೋಜಕ ಅಕ್ಕಿ ಮಾರುತಿ, ಅತಿಥಿ ಉಪನ್ಯಾಸಕರಾದ ಹುಲಿಗೆಮ್ಮ, ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ತಾಯಪ್ಪ ಮರ್ಚೇಡ್ ನಿರ್ವಹಿಸಿದರು. ರಾಘವೇಂದ್ರ ಸ್ವಾಗತಿಸಿದರು. ಸಿ.ಅಭಿಷೇಕ್ ವಂದಿಸಿದರು. ಖಾಜಾ ಸಾಬ್ ನಿರೂಪಿಸಿದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?