Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಪ್ರತಿಯೊಬ್ಬರು ಗ್ರಾಹಕರಿಗಿರುವ ಹಕ್ಕುಗಳ ಮಾಹಿತಿ ಹೊಂದÀಬೇಕು: ನ್ಯಾ.ರಾಜೇಶ್ ಹೊಸಮನೆ


ಬಳ್ಳಾರಿ,ಮಾ.20 :ವ್ಯವಹರಿಸುವವರು ಪ್ರತಿಯೊಬ್ಬರೂ ಗ್ರಾಹಕರು. ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಮಾಹಿತಿ ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಶ್ರೀಮೇದಾ ಪದವಿಪೂರ್ವ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ “ಗ್ರಾಹಕರಿಗೋಸ್ಕರ ಗುಣಮಟ್ಟದ ಹಾಗೂ ಜವಾಬ್ದಾರಿಯುತ ಕೃತಕ ಬುದ್ಧಿ ಮತ್ತೆ” ಎಂಬ ಘೋಷವಾಕ್ಯದಡಿ ನಗರದ ಕೋಟೆ ಮುಖ್ಯ ರಸ್ತೆಯ ಶ್ರೀಮೇದಾ ಪದವಿಪೂರ್ವ ಕಾಲೇಜಿನ ಆಡಿಟೋರಿಯಂ ಹಾಲ್‍ನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಅದರ ಅನುಗುಣವಾಗಿ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ಆನ್‍ಲೈನ್ ಅಥವಾ ಆಫ್‍ಲೈನ್‍ನಲ್ಲಿ ಗ್ರಾಹಕರು ತಾವು ಖರೀದಿಸುವ ವಸ್ತುಗಳ ಗುಣಮಟ್ಟ, ಪ್ರಮಾಣದ ಬಗ್ಗೆ ಗಮನಹರಿಸಬೇಕು ಎಂದರು.
ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆಯು ವರ್ತಕರ ಹಾಗೂ ಗ್ರಾಹಕರ ಮಧ್ಯೆ ವಂಚನೆಯಾಗದಂತೆ ಕಾರ್ಯ ನಿರ್ವಹಿಸಲು ಅಭಿವೃದ್ಧಿ ಪಡಿಸುತ್ತಿದ್ದು, ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ತಂತ್ರಜ್ಞಾನ ಅಭಿವೃದ್ಧಿಯಾದಂತೆ, ಮಾನವ ರಹಿತ ಯಂತ್ರಗಳೂ ಕಾರ್ಯ ನಿರ್ವಹಿಸಬಹುದಾದಂತಹ ವಾತಾವರಣವು ಸೃಷ್ಟಿಯಾಗಲಿದೆ. ಇವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲ್ಲದಿದ್ದಲ್ಲಿ ಮಾರಕವಾಗಬಹುದು ಎಂದು ಅಭಿಪ್ರಾಯ ಪಟ್ಟರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಹಕರು ತಾವು ಕೊಂಡುಕೊಳ್ಳುವ ವಸ್ತುಗಳಲ್ಲಿ ಯಾವುದೇ ರೀತಿಯ ಮೋಸವಾದಾಗ ಮತ್ತು ತಮಗಾದ ಅನ್ಯಾಯದ ವಿರುದ್ಧ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಂಡು, ತಮಗಿರುವ ಗ್ರಾಹಕರ ಹಕ್ಕುಗಳ ಪರವಾಗಿ ಧ್ವನಿಯೆತ್ತಿ ಕಾನೂನಾತ್ಮಕವಾಗಿ ನ್ಯಾಯ ಪಡೆದುಕೊಳ್ಳಬೇಕು ಎಂದರು.
ಅಭಿವೃದ್ಧಿ ಹೊಂದಿದ ತಂತ್ರಜ್ಞಾನದಲ್ಲಿ ಗ್ರಾಹಕರ ಹಕ್ಕುಗಳಿಗೆ ಚ್ಯುತಿ ಉಂಟಾದಾಗ ಇರುವ ಗ್ರಾಹಕರ ಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ, ಸಾರ್ವಜನಿಕರಿಗೆ, ಗ್ರಾಹಕರಿಗೆ ಮಾಹಿತಿ ಒದಗಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ, ವರ್ತಕರಿಗೆ ತಿಳಿಸಿದರು.
ರಾವ್ ಬಹದ್ದೂರ್ ವೈ ಮಹಾಬಲೇಶ್ವರ ತಾಂತ್ರಿಕ ಇಂಜಿನಿಯರಿಂಗ್ ಮಹಾವಿದ್ಯಾಲಯದ ವಿಜ್ಞಾನ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ.ಶಿವಪ್ರಸಾದ.ಕೆ.ಎಂ ಅವರು “ಗ್ರಾಹಕರಿಗೋಸ್ಕರ ಗುಣಮಟ್ಟದ ಹಾಗೂ ಜವಾಬ್ದಾರಿಯುತ ಕೃತಕ ಬುದ್ಧಿ ಮತ್ತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಜಗತ್ತು ತಂತ್ರಜ್ಞಾನದ ಅಭಿವೃದ್ಧಿಯಿಂದ ಕೃತಕ ಬುದ್ಧಿಮತ್ತೆಯು ಅವಲಂಬನೆಗೊಳ್ಳುತ್ತಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಉಪಯೋಗಿಸುವುದರಿಂದ ನಿಖರ ತೂಕದ ಜೊತೆಗೆ ನಿಗದಿತ ಸಮಯವನ್ನು ಉಳಿಸಬಹುದು ಎಂದು ತಿಳಿಸಿದರು.
ಹಿರಿಯ ವಕೀಲರಾದ ಎನ್.ಪ್ರಕಾಶ್ ಅವರು, “ಪ್ರಸ್ತುತ ದಿನಗಳಲ್ಲಿ ಗ್ರಾಹಕರ ಹಕ್ಕುಗಳ ಹಾಗೂ ಜವಾಬ್ದಾರಿಗಳು” ಎಂಬ ವಿಷಯದ ಕುರಿತು ಉಪನ್ಯಾಸದಲ್ಲಿ ಮಾತನಾಡಿ, ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಸುರಕ್ಷಿತ ಹಕ್ಕು, ಮಾಹಿತಿ ಹಕ್ಕು, ಆಯ್ಕೆಯ ಹಕ್ಕು, ಕೊಂಡುಕೊಳ್ಳುವ ಹಕ್ಕು, ಗ್ರಾಹಕರ ಶಿಕ್ಷಣದ ಹಕ್ಕುಗಳ ಕುರಿತು ಮಾಹಿತಿ ತಿಳಿದುಕೊಳ್ಳುವುದು ಅಗತ್ಯವಾಗಿದೆ. ಗ್ರಾಹಕರ ಕುಂದು ಕೊರತೆಯ ಸಮಸ್ಯೆಗಳನ್ನು ನಿಖರವಾದ ಮಾಹಿತಿಯೊಂದಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕೇಂದ್ರದಲ್ಲಿ ಕಾನೂನಾತ್ಮಕವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆಯಾದ ಮಾರ್ಲಾ ಶಶಿಕಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎರ್ರಿಗೌಡ,  ಹಿರಿಯ ವಕೀಲರಾದ ಅಂಕಲಯ್ಯ, ಶ್ರೀಮೇದಾ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ರಾಮಕಿರಣ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಅಮೃತಾ.ಪಿ.ಚವ್ಹಾಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಮತ್ತೀತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೂಕ ಮತ್ತು ಅಳತೆ ಕುರಿತ ವಂಚನೆಯ ಜಾಗೃತಿ ಅರಿವು ಮೂಡಿಸಲಾಯಿತು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?