Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಆರೋಗ್ಯ ಮತ್ತು ಫಿಟ್ನೆಸ್

ಹೆಚ್‌ಐವಿ ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ: ರಾಜೇಶ್.ಎನ್ ಹೊಸಮನೆ

ಬಳ್ಳಾರಿ,ಡಿ.17 : ಸದಾಯದಲ್ಲಿ ಹೆಚ್‌ಐವಿ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ರಾಜೇಶ್.ಎನ್ ಹೊಸಮನೆ ಅವರು ಹೇಳಿದರು.

ವಿಮುಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಇವರ  ಸಂಯುಕ್ತಾಶ್ರಯದಲ್ಲಿ ನಗರದ ಬಿಡಿಎಎ ಪುಟ್ಬಾಲ್ ಸಭಾಂಗಣದಲ್ಲಿ ಅಖಂಡ ಜಿಲ್ಲೆಯ ಧಮನಿತ ಮಹಿಳೆಯರಿಗೆ ಸೋಮವಾರ ಏರ್ಪಡಿಸಿದ್ದ ಹೆಚ್‌ಐವಿ ಮತ್ತು ಏಡ್ಸ್ ಕುರಿತ ವಿಶೇಷÀ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ 40 ವರ್ಷಗಳಿಂದ ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟçಗಳಲ್ಲಿ ಕಾಡುತ್ತಿರುವ ಹೆಚ್‌ಐವಿ ಏಡ್ಸ್ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಭಾಗಿಯಾಗುವ ಮೂಲಕ  ತಳಮಟ್ಟದಿಂದಲೇ ಹೆಚ್‌ಐವಿ ನಿರ್ಮೂಲನೆಗೆ ಪಣತೊಡಬೇಕಿದೆ ಎಂದರು.

ಜೀವನದ ಆಕಸ್ಮಿಕ ಘಟನೆಗಳಿಂದ ಅಥವಾ ಹೆಚ್‌ಐವಿ ಹರಡುವ ಮಾರ್ಗಗಳಲ್ಲಿ ನಿರ್ಲಕ್ಷö್ಯವಹಿಸಿದರೆ ಯಾರಿಗಾದರೂ ಹೆಚ್‌ಐವಿ ಹರಡುವ ಸಾಧ್ಯತೆಗಳಿವೆ. ಒಮ್ಮೆ ಹೆಚ್‌ಐವಿ ವೈರಸ್ ದೇಹದಲ್ಲಿ ಕಂಡುಬAದರೆ ಜೀವನ ಪರ್ಯಂತ ಹೆಚ್‌ಐವಿ ಭಾದಿತರಾಗಿ ಇರುವ ಸನ್ನಿವೇಶ ಉಂಟಾಗುವುದಿರಿAದ ಸಮುದಾಯದಲ್ಲಿ ಹೆಚ್ಚಿನ ಜಾಗೃತಿಯನ್ನು ಮೂಡಿಸುವ ಮೂಲಕ ಹೆಚ್‌ಐವಿ ಮುಕ್ತ ಸಮಾಜ ನಿರ್ಮಿಸಬೇಕೆಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಯುವ ಜನತೆಯಲ್ಲಿ ಹೆಚ್‌ಐವಿಯಿಂದಾಗುವ ಪರಿಣಾಮ ಹಾಗೂ ಹರಡುವಿಕೆಯ ಮತ್ತು ಏಡ್ಸ್ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಮುಖಾಂತರ ಸ್ವಾಸ್ತö್ಯ ಸಮಾಜ ನಿರ್ಮಾಸಲು ಶ್ರಮಿಸೋಣ ಎಂದು ಹೇಳಿದರು.

ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಹೆಚ್‌ಐವಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ವಿಮುಕ್ತಿ ಸಂಘವು  ನಿರಂತರವಾಗಿ ಜಾಗೃತಿ ನೀಡುವುದರ ಜೊತೆಗೆ ಸರಿಯಾದ ಸಮಯದಲ್ಲಿ ಧಮನಿತ ಮಹಿಳೆಯರ ಆರೋಗ್ಯ ತಪಾಸಣೆ ಕೈಗೊಳ್ಳುವುದು.
ಸÀರ್ಕಾರದ ವಸತಿ ಯೋಜನೆಗಳಲ್ಲಿ ಮನೆ ಒದಗಿಸುವುದು, ಆರ್ಥಿಕ ಸೌಲಭ್ಯಗಳನ್ನು ಒದಗಿಸಲು ವಿವಿಧ ಇಲಾಖೆಗಳ ಸಹಾಯ ಧನಗಳ ಯೋಜನೆಗಳ ಪರಿಚಯಿಸುವುದು, ಪಡಿತರ ಚೀಟಿಗಳ ಒದಗಿಸುವಿಕೆಯಂತಹ ಸಾಮಾಜಿಕ ಸೇವಾ ಸೌಲಭ್ಯಗಳನ್ನು ನೀಡುವ ಜೊತೆಗೆ ಹೆಚ್‌ಐವಿ ಕುರಿತ ಕಳಂಕ ತಾರತಮ್ಯಗಳನ್ನು ದೂರ ಮಾಡುವ ದಿಶೆಯಲ್ಲಿ ಸಮುದಾಯದಲ್ಲಿ ಜಾಗೃತಿ ನೀಡುತ್ತಿರುವುದು ಶ್ಲಾಘನೀಯ. ಪ್ರಸ್ತುತ ಸಂಘದ ಸದಸ್ಯರ ಸಂಖ್ಯೆ 3166 ಕ್ಕೆ ತಲುಪಿರುವುದೇ ಸಾಕ್ಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಇಂದ್ರಾಣಿ.ವಿ., ವಿವಿಯ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಗೌರಿ ಎಮ್.ಎಮ್, ವಿಮುಕ್ತಿ ಸಂಘದ ದುರುಗಮ್ಮ, ಡಾ.ರಾಘವೇಂದ್ರ, ಡಾ.ದಿನೇಶ್ ಗುಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ.ಹೆಚ್ ದಾಸಪ್ಪನವರ ಸೇರಿದಂತೆ ಇತರರು ಇದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?