ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್ ಸ್ಫೋಟವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ.
ಬೆಂಗಳೂರು, ಮಾರ್ಚ್ 02: ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ (ಮಾ.02) ಬಾಂಬ್ ಸ್ಫೋಟವಾದ (
Bengaluru Rameshwaram Cafe Bomb Blast) ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (
Kempegowda International Airport) ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ. ವಿಐಪಿ ಲೈನ್ನಲ್ಲಿ ಪಾರ್ಕಿಂಗ್ ಅವಧಿಯನ್ನು ಅರ್ಧ ಗಂಟೆಯಿಂದ 5 ರಿಂದ 10 ನಿಮಿಷಕ್ಕೆ ಇಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚಳ ಮಾಡಿದ್ದಾರೆ. ರಾತ್ರ-ಹಗಲು ಮೂರು ಪಾಳಯದಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.