Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಮನರಂಜನೆ ಸುದ್ದಿ

ದರ್ಶನ್​ ವಿರುದ್ಧ ಗೌಡತಿಯರ ಸೇನೆ ಗರಂ; ನಟನ ಮೇಲೆ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗಕ್ಕೆ ಪತ್ರ

ಇವತ್ತು ಇವಳು ಇರ್ತಾಳೆ, ನಾಳೆ ಅವಳು ಇರ್ತಾಳೆ. ನಿಮ್​ ಅಜ್ಜಿನಾ ಬಡಿಯಾ. ನಿಮಗೆಲ್ಲ ತಲೆ ಕೆಡಿಸಿಕೊಂಡು ನಾನೇಕೆ ಕುಳಿತುಕೊಳ್ಳಲಿ’ ಎಂದು ದರ್ಶನ್​ ಹೇಳಿದ್ದಕ್ಕೆ ಆಕ್ಷೇಪ ಎದುರಾಗಿದೆ. ದರ್ಶನ್​ ಅವರು ಆಡಿದ ಮಾತುಗಳನ್ನು ಖಂಡಿಸಿ, ಮಹಿಳಾ ಆಯೋಗಕ್ಕೆ ‘ಗೌಡತಿಯರ ಸೇನೆ’ ಪತ್ರ ಬರೆದಿದೆ. ವಿಚಾರಣೆ ನಡೆಸಿ, ನಟನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಗಿದೆ.

ಸ್ಯಾಂಡಲ್​ವುಡ್​ ನಟ ದರ್ಶನ್ (Darshan)​ ಅವರ ಕೊರಳಿಗೆ ಹಲವು ವಿವಾದಗಳು ಸುತ್ತಿಕೊಳ್ಳುತ್ತಿವೆ. ವೇದಿಕೆ ಮೇಲೆ ಅವರು ಆಡಿದ ಮಾತುಗಳಿಗೆ ಅನೇಕರಿಂದ ಖಂಡನೆ ವ್ಯಕ್ತವಾಗುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ (Umapathy Srinivas Gowda) ಅವರಿಗೆ ‘ತಗಡು’ ಎಂಬ ಪದ ಬಳಕೆ ಮಾಡಿದ್ದನ್ನು ರಾಜ್ಯ ಒಕ್ಕಲಿಗರ ಸಂಘ ಖಂಡಿಸಿದೆ. ಅದೇ ರೀತಿ, ‘ಬೆಳ್ಳಿ ಪರ್ವ ಡಿ-25’ ಸಮಾರಂಭದಲ್ಲಿ ದರ್ಶನ್​ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳಿಗೆ ಗೌಡತಿಯರ ಸೇನೆ (Gowdathiyara Sene) ಕೂಡ ಆಕ್ಷೇಪ ವ್ಯಕ್ತಪಡಿಸಿದೆ. ದರ್ಶನ್​ ಅವರ ಹೇಳಿಕೆಯನ್ನು ಖಂಡಿಸಿ, ಮಹಿಳಾ ಆಯೋಗದ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ‘ದರ್ಶನ್​ ವಿರುದ್ಧ ಮಹಿಳಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲು ಸಿದ್ಧರಿದ್ದೇವೆ’ ಎಂದು ಗೌಡತಿಯರ ಸೇನೆದವರು ಪತ್ರದಲ್ಲಿ ತಿಳಿಸಿದ್ದಾರೆ.

ಯುವ ಜನರಿಗೆ ಮಾದರಿ ಆಗಬೇಕಿದ್ದ ಒಬ್ಬ ನಾಯಕ ನಟ ಅಸಹಜ ಹೇಳಿಕೆಗಳನ್ನು ಕೊಡುತ್ತಿರುವುದು. 25ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಕೀಳು ಭಾವನೆಯಿಂದ ಒಬ್ಬಳು ಹೋಗುತ್ತಾಳೆ ಒಬ್ಬಳು ಬರುತ್ತಾಳೆ ಅವಳ ಅಜ್ಜಿನಾ ಬಡಿಯ ಎಂದು ಉಡಾಫೆಯಾಗಿ ಮಾತನಾಡಿರುತ್ತಾರೆ. ಈ ಸಭೆಯಲ್ಲಿ ಆದಿಚುಂಚನಗಿರಿ ಗುರುಗಳು, ಸಂಸದೆ ಸುಮಲತಾ, ಹಲವಾರು ಗಣ್ಯಾತಿಗಣ್ಯರು, ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಸಮಾಜಕ್ಕೆ ಮಾದರಿ ಆಗಬೇಕಾದ ನಟನೊಬ್ಬ ಸಾರ್ವಜನಿಕವಾಗಿ ಹೀಗೆ ಮಾತನಾಡುವುದು ಅಕ್ಷಮ್ಯ ಅಪರಾಧವಾಗಿದ್ದು, ವಿಚಾರಣೆ ನಡೆಸಿ, ಆತ ಉಪಯೋಗಿಸಿರುವ ಪದಗಳು ಯಾವ ಭಾವನೆಯಿಂದ ಹೇಳಿದ್ದಾರೆಂದು ವಿವರಣೆ ಕೇಳಬೇಕಾಗಿ ವಿನಂತಿ. ಈ ಹಿಂದೆಯೂ ಈ ನಟ ಹೆಂಡತಿಗೆ ಸಿಗರೇಟ್​ನಿಂದ ಸುಟ್ಟು ಮಾನಸಿಕವಾಗಿ ಕಿರುಕುಳ ಕೊಟ್ಟು ಜೈಲು ಪಾಲಾಗಿದ್ದು ಇತಿಹಾಸ. ಇನ್ನೊಂದು ಸಂದರ್ಭದಲ್ಲಿ ಅದೃಷ್ಟ ದೇವತೆ ನಿಮ್ಮ ಮನೆಗೆ ಬಂದರೆ ಬಟ್ಟೆ ಬಿಚ್ಚಿ ರೂಮಿನಲ್ಲಿ ಕೂಡಿಹಾಕಿ ಎಂಬ ಹೇಳಿಕೆ ನೀಡಿ ಹೆಣ್ಣು ಮಕ್ಕಳು ಮುಜುಗರಗೊಳ್ಳುವಂತೆ ಮಾಡಿರುತ್ತಾನೆ. ಮಾದರಿ ನಾಯಕ ಯುವ ಜನತೆಗೆ ನೀಡುತ್ತಿರುವ ಸಂದೇಶ ಏನು ಎನ್ನುವುದರ ಸ್ಪಷ್ಟನೆ ನೀಡಿ ಕ್ಷಮೆ ಕೇಳಬೇಕು’ ಎಂದು ಗೌಡತಿಯರ ಸೇನೆಯವರು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಈ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಸಲೀಸಾಗಿ ಹರಿದಾಡುತ್ತಿದ್ದು ಯುವ ಜನತೆ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು? ಹೆಣ್ಣು ಮಕ್ಕಳ ಬಗೆಗಿನ ಅವರ ದೃಷ್ಟಿಕೋನ ಬದಲಾಗಬಹುದು. ದರ್ಶನ್​ ಸಂಪೂರ್ಣ ಬದಲಾಗಬೇಕು. ಬದಲಾವಣೆ ಆಗದಿದ್ದರೆ ಹೆಣ್ಣು ಮಕ್ಕಳನ್ನು ತೆರೆಯಮೇಲೆ ಗೌರವಿಸಿದಂತೆ ತೆರೆಯ ಹಿಂದೆಯೂ ಗೌರವಿಸಬೇಕು. ಈ ನಿಟ್ಟಿನಲ್ಲಿ ಮಹಿಳಾ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಎಚ್ಚೆತ್ತುಕೊಳ್ಳದಿದ್ದರೆ ಹೋರಾಟ ಮಾಡಲು ಸಿದ್ಧ ಇದ್ದೇವೆ. ಮುಂದೆ ಸಾರ್ವಜನಿಕವಾಗಿ ಈ ರೀತಿ ಮಾತನಾಡದಂತೆ ಎಚ್ಚರಿಕೆ ವಹಿಸಬೇಕು’ ಎಂದು ಪತ್ರದಲ್ಲಿ ಗೌಡತಿಯರ ಸೇನೆಯವರು ಒತ್ತಾಯಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?