Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಯಲಲಿತಾರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ

ಬೆಂಗಳೂರು,ರಿ,೨೩: ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರಿಗೆ ಸೇರಿದ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶ ನೀಡಿದೆ.ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬAಧ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಲು ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಚ್ ಎ ಮೋಹನ್ ಅವರು ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ. ವಸ್ತುಗಳನ್ನು ಪರಿಶೀಲಿಸಿ ಪಡೆಯಲು ಕಾರ್ಯದರ್ಶಿ ಮಟ್ಟದಲ್ಲಿ ಸೂಕ್ತ ವ್ಯಕ್ತಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರ್ಕಾರದ ಗೃಹ ಇಲಾಖೆಗೆ ನ್ಯಾಯಾಲಯ ನಿರ್ದೇಶಿಸಿದ್ದು, ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ವೆಚ್ಚವಾಗಿರುವ ಐದು ಕೋಟಿ ಹಣವನ್ನು ಡಿಡಿ ರೂಪದಲ್ಲಿ ಕರ್ನಾಟಕ ಸರ್ಕಾರಕ್ಕೆ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ನ್ಯಾಯಾಲಯ ಈ ಮೂಲಕ ನಿರ್ದೇಶಿಸಿದೆ.
ರಾಜ್ಯ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವ ಕಿರಣ್ ಎಸ್. ಜವಳಿ ಅವರು ಜಪ್ತಿಯಾದ ಜಯಲಲಿತಾ ಅವರ ಆಸ್ತಿ-ವಸ್ತುಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬAಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು ೧೦೦ ಕೋಟಿ ರೂಪಾಯಿ ದಂಡ ವಿಧಿಸಿ ೨೦೧೪ರ ಸೆಪ್ಟೆಂಬರ್ ೨೭ರಂದು ಆದೇಶಿಸಿತ್ತು. ಜೊತೆಗೆ ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.ಇದರಿಂದ ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮದ ಮಾಹಿತಿ ನೀಡುವ ಸಂಬAಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಏನೆಲ್ಲಾ ವಸ್ತುಗಳಿವೆ: ೭,೦೪೦ ಗ್ರಾಂ ತೂಕದ ೪೬೮ ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, ೭೦೦ ಕೆ ಜಿ ತೂಕದ ಬೆಳ್ಳಿ ಆಭರಣಗಳು, ೭೪೦ ದುಬಾರಿ ಚಪ್ಪಲಿಗಳು, ೧೧,೩೪೪ ರೇಷ್ಮೆ ಸೀರೆಗಳು, ೨೫೦ ಶಾಲು, ೧೨ ರೆಫ್ರಿಜೆರೇಟರ್, ೧೦ ಟಿ ವಿ ಸೆಟ್ , ೮ ವಿಸಿಆರ್, ೧ ವಿಡಿಯೊ ಕ್ಯಾಮೆರಾ, ೪ ಸಿಡಿ ಪ್ಲೇಯರ್, ೨ ಆಡಿಯೋ ಡೆಕ್, ೨೪ ಟೂ-ಇನ್ ಒನ್ ಟೇಪ್ ರೇಕಾರ್ಡರ್, ೧,೦೪೦ ವಿಡಿಯೋ ಕ್ಯಾಸೆಟ್, ೩ ಐರನ್ ಲಾಕರ್, ೧,೯೩,೨೦೨ ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?