Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಐದು ವರ್ಷದೊಳಗಿನ ಲಸಿಕೆ ವಂಚಿತ ಮಕ್ಕಳಿಗೆ 12 ಮಾರಕ ರೋಗಗಳ ತಡೆಗೆ ತಪ್ಪದೇ ಲಸಿಕೆ ಹಾಕಿಸಲು ತಿಳಿಸಿ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್‌ ಸುಮೈರ್‌

ಬಳ್ಳಾರಿ,ಏ.22 : ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ 12 ಮಾರಕ ರೋಗಗಳ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗುವ ಲಸಿಕೆಗಳನ್ನು ತಪ್ಪದೇ ಪೋಷಕರು ಹಾಕಿಸಲು ತಿಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಹೇಳಿದರು.

ಜಿಪಂ ನ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಸಿಕೆಗಳ ಕುರಿತು ತಪ್ಪು ನಂಬಿಕೆ ಹೊಂದಿದ ಪಾಲಕರಿಗೆ ಸರಿಯಾದ ಮಾಹಿತಿ ನೀಡಿ ಲಸಿಕೆ ಹಾಕಿಸುವಂತೆ ಲಸಿಕೆಗಳ ಕುರಿತು ಮಾಹಿತಿ ನೀಡಬೇಕು. ಜಾಗತಿಕ ಲಸಿಕಾ ಸಪ್ತಾಹದ ಅಂಗವಾಗಿ ಏಪ್ರಿಲ್‌, ಮೇ, ಜೂನ್ ತಿಂಗಳಲ್ಲಿ ಆಯೋಜಿಸುವ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಲಸಿಕೆ ಹಾಕಿಸಲು ಅರಿವು ಮೂಡಿಸುವುದರ ಮೂಲಕ ಜಿಲ್ಲೆಯಾದ್ಯಂತ ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದರು.

ಬಾಲ್ಯ ಚೈತನ್ಯ ಮಕ್ಕಳ ಆರೈಕೆ: ಬೇಸಿಗೆಯಲ್ಲಿ ಲಭ್ಯವಾಗುವ ಸರಕಾರಿ ಹಾಸ್ಟೆಲ್‌ಗಳಲ್ಲಿ ಈ ಹಿಂದಿನಂತೆ ಅಪೌಷ್ಟಿಕತೆಯುಳ್ಳ ಮಕ್ಕಳಿಗೆ ವೈದ್ಯರಿಂದ ಚಿಕಿತ್ಸೆ ಹಾಗೂ ಐಸಿಡಿಎಸ್‌ನಿಂದ ಊಟ ವಸತಿಯೊಂದಿಗೆ 14 ದಿನಗಳ ಕಾಲ ತಾಯಿಯೊಂದಿಗೆ  ಮಗುವನ್ನು ಆರೈಕೆಗೆ ಸಿದ್ದತೆ ಮಾಡಲು ಸೂಚಿಸಿದರು.  ಸೀಳು ತುಟಿ, ತಿರುಚಿದ ಪಾದಗಳ ಶಸ್ತ್ರಚಿಕಿತ್ಸೆಯನ್ನು ಬಿಎಮ್‌ಸಿ‌ಆರ್‌ಸಿ ಯಲ್ಲಿ ಸಹ ಮಾಡಿಸುವಂತೆ ಸೂಚಿಸಿದರು.

ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನ: ಹೆರಿಗೆ ನಂತರದಲ್ಲಿ ಜನನದ ಮಧ್ಯ ಅಂತರಕ್ಕಾಗಿ ಪಿಪಿಐಯುಸಿಡಿ ತಕ್ಷಣವೇ ಅಳವಡಿಕೆಗೆ ಒತ್ತು ನೀಡಲು ತಿಳಿಸಿದರು. ಅಲ್ಲದೆ ಪುರುಷರಿಗೆ ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ ಬಗ್ಗೆ ಹೆಚ್ಚಿನ ಜಾಗೃತಿ ನೀಡಿ ಶಸ್ತ್ರಚಿಕಿತ್ಸೆ ಮಾಡಿಸಲು ತಿಳಿಸಿದರು.

 ಅಗ್ನಿ ಸುರಕ್ಷತೆ ಸಪ್ತಾಹ ಎಲ್ಲ ಆಸ್ಪತ್ರೆಗಳಲ್ಲಿ ಆಚರಣೆಗೆ ಸೂಚನೆ: ಆಸ್ಪತ್ರೆಗಳಲ್ಲಿ  ನವಜಾತ ಶಿಶುಗಳು, ಬಾಣಂತಿಯರು ಸೇರಿದಂತೆ ರೋಗಿಗಳ ಸುರಕ್ಷತೆ ಎಲ್ಲ ಅಗ್ನಿ ಸುರಕ್ಷಾ ಪರಿಕರಗಳನ್ನು ಪರಿಶೀಲಿಸಲು ಸೂಚಿಸಿದರು. ಪ್ರತಿ ಮಂಗಳವಾರ ಆಯುಷ್ಮಾನ ಆರೋಗ್ಯ ಶಿಬಿರಗಳನ್ನು ತಪ್ಪದೆ ಹಮ್ಮಿಕೊಂಡು ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಇತರೆ ಪರೀಕ್ಷೆ ಹಾಗೂ ಅಗತ್ಯ ಚಿಕಿತ್ಸೆ ನೀಡಲು ಸೂಚಿಸಿದರು.

ಕ್ಷಯರೋಗ: ಕ್ಷಯರೋಗ ಪತ್ತೆಗೆ ಇರುವ 23 ಟ್ರುನಾಟ್‌ ಹಾಗೂ 5 ಸಿಬಿನಾಟ್‌ ಕೇಂದ್ರಗಳಲ್ಲಿ ಹೆಚ್ಚಿನ ಪರೀಕ್ಷೆ ಕೈಗೊಳ್ಳಲು ತಿಳಿಸಿದರು. ಅಸಾಂಕ್ರಾಮಿಕ ರೋಗ ತಡೆ: ಹಾವು ಕಡಿತ, ನಾಯಿ ಕಡಿತ ಲಸಿಕೆಯನ್ನು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ  ದಾಸ್ತಾನು ಇಡಲು ಸೂಚನೆ ನೀಡಿದರು.

ಡೆಂಗ್ಯು ರೋಗ ನಿಯಂತ್ರಣ: ಡೆಂಗ್ಯು ರೋಗ ನಿಯಂತ್ರಣಕ್ಕಾಗಿ ಇನ್ನೂ ಹೆಚ್ಚಿನ ಜಾಗೃತಿ ನೀಡಲು ಹಾಗೂ ಮಲೇರಿಯಾ, ಜೆಇ ಪ್ರಕರಣಗಳ ನಿಯಂತ್ರಣಕ್ಕೆ ಸೂಚಿಸಿದರು. ರಕ್ತದಾನ: ಪ್ರಸ್ತುತ ವರ್ಷ ದಾಖಲೆ ಪ್ರಮಾಣದಲ್ಲಿ 20278 ಯುನಿಟ್‌ ರಕ್ತ ಸಂಗ್ರಹಿಸಿದ್ದು, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರಕ್ತ ಕೊರತೆಯಾಗದಂತೆ ತಿಳಿಸಿದರು.

ಕುಷ್ಠರೋಗ: ನರ ಮತ್ತು ಚರ್ಮದ ಖಾಯಿಲೆಯಾಗಿರುವ ಕುಷ್ಠರೋಗವನ್ನು ಹೆಚ್ಚು ಜಾಗೃತಿ ನೀಡಿ ಆರಂಭದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸೂಚಿಸಿದರು. ಅಂಗಾಂಗ ದಾನ ನೋಂದಣಿ: 8379 ಜನರ ನೋಂದಣಿಯೊಂದಿಗೆ ಬಳ್ಳಾರಿ ಜಿಲ್ಲೆ ರಾಷ್ಟ್ರ ಮಟ್ಟದಲ್ಲಿ ಎರಡನೆ ಜಿಲ್ಲೆಯ ಸ್ಥಾನದಿಂದ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್‌.ಬಸಾರೆಡ್ಡಿ, ಬಿಮ್ಸ್ ವೈದ್ಯಕೀಯ ಅಧೀಕ್ಷಕರಾದ ಡಾ.ಇಂದುಮತಿ, ಎಸ್‌ಎಮ್‌ಓ ಡಾ.ಆರ್‌.ಎಸ್‌ ಶ್ರೀಧರ್, ಆರ್‌ಸಿಹೆಚ್‌ಓ ಡಾ.ಹನುಮಂತಪ್ಪ, ಡಿಎಮ್‌ಓ ಡಾ.ಆರ್ ಅಬ್ದುಲ್ಲಾ, ಡಿಎಸ್‌ಓ ಡಾ.ಮರಿಯಂಬಿ ವಿ.ಕೆ., ಡಿಎಫ್‌ಡಬ್ಲ್ಯುಓ ಡಾ.ಪೂರ್ಣಿಮಾ ಕಟ್ಟಿಮನಿ, ಡಿಟಿಓ ಡಾ.ಇಂದ್ರಾಣಿ.ವಿ., ಡಿಎಲ್‌ಓ ಡಾ.ವಿರೇಂದ್ರಕುಮಾರ್‌, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ.ಅರುಣ್‌ಕುಮಾರ್‌, ಡಾ.ಭರತ್‌ಕುಮಾರ್‌, ಡಾ.ಸುನೀಲ್‌, ಡಾ.ಮಂಜುನಾಥ ಜವಳಿ, ಡಿಹೆಚ್‌ಇಓ ಈಶ್ವರ ಹೆಚ್‌ ದಾಸಪ್ಪನವರ, ಡಾ.ಸುರೇಶ ಕುಮಾರ್, ಡಾ.ಜಬೀನ್‌ ತಾಜ್‌, ಡಿಎನ್‌ಓ ಗಿರೀಶ್‌, ಡಿಪಿಎಮ್‌ ವೆಂಕೋಬ್‌ ನಾಯ್ಕ್‌, ಡಿಎಓ ಬಸವರಾಜ್, ಫಾರ್ಮಸಿ ಅಧಿಕಾರಿ ತಮನ್ನಾ, ಆರ್‌ಕೆ‌ಎಸ್‌ಕೆ ಸಲಹೆಗಾರ ಮನೋಹರ್‌ ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?