Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಆರೋಗ್ಯ ಮತ್ತು ಫಿಟ್ನೆಸ್

ವಿಕಲಚೇತನರ ಆರೋಗ್ಯ ಮತ್ತು ವಿಮಾ ಯೋಜನೆಗಳು ‌ಅರ್ಹರಿಗೆ ತಲುಪಲಿ : ವಿಧಾನಪರಿಷತ್ ಸದಸ್ಯ.ವೈ.ಎಂ. ಸತೀಶ್

ಬೆಂಗಳೂರು, ಮಾ. 14: ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಮತ್ತು ನಿರಾಮಯ ಆರೋಗ್ಯ ವಿಮಾ ಯೋಜನೆಯು  ಕರ್ನಾಟಕ ಸರ್ಕಾರದಲ್ಲಿ ಜಾರಿಯಲ್ಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ. ವೈ.ಎಂ. ಸತೀಶ್ ಅವರು, ಕರ್ನಾಟಕದಲ್ಲಿ ಅಂಗವಿಕಲರಿಗೆ ಸರ್ಕಾರ ನೀಡುವ ಆರೋಗ್ಯ ಮತ್ತು ವಿಮಾ ಯೋಜನೆಗಳ ಕುರಿತು ಶುಕ್ರವಾರ ಕೇಳಿದ ಪ್ರಶ್ನೆಗೆ  ಸಚಿವರು ಉತ್ತರ ನೀಡಿದರು.

ಅಂಗವಿಕಲತೆ ನಿವಾರಣ ವೈದ್ಯಕೀಯ ಪರಿಹಾರ ನಿಧಿ ಯೋಜನೆ ಅಡಿ ಶಸ್ತ್ರಚಿಕಿತ್ಸೆಯಿಂದ ವಿಕಲಚೇತನತೆಯನ್ನು ನಿವಾರಣೆ ಮಾಡಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ನಗಳೀರಿನ ಸಂಜಯಗಾಂಧಿ ಅಪಘಾತ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು  ₹ 1.00 ಲಕ್ಷಗಳವರೆಗೆ ಸಹಾಯಧನವನ್ನು ನೀಡಲಾಗುತ್ತದೆ ಎಂದರು.

ಈ ಯೋಜನೆಯು ಏಪ್ರಿಲ್ ೨೦೦೦ರಲ್ಲಿ ಜಾರಿಯಾಗಿದೆ. ಪ್ರಥಮವಾಗಿ  ₹ 15000/-ಗಳ ಸಹಾಯಧನವನ್ನು ನೀಡಲಾಗುತ್ತಿದ್ದು 2008 ರಲ್ಲಿ ಈ ಮೊತ್ತವನ್ನು  ₹ 35000/-ಗಳವರೆಗೆ, 2014 ರಲ್ಲಿ  ಈ ಮೊತ್ತವನ್ನು ₹  100.000/- ಗಳಿಗೆ ಹೆಚ್ಚಿಸಿ ವಿಕಲಚೇತನರಿಗೆ  ₹ 100.000ಗಳವರೆಗೆ ಹೆಚ್ಚಿಸಿ,
ಶಸ್ತ್ರ  ಚಿಕಿತ್ಸಾ ವೆಚ್ಚವನ್ನು ಬರಿಸಲಾಗುತ್ತಿದೆ ಎಂದರು.

ನಿರಾಮಯ ಆರೋಗ್ಯ ವಿಮಾ ಯೋಜನೆ ಅಡಿಯಲ್ಲಿ
ನ್ಯಾಷನಲ್ ಟ್ರಸ್ಟ್ ಆಕ್ಟ್ 1999 ರಡಿ  04 ಬಗೆಯ ವಿಕಲಚೇತನರಿಗೆ ( ಆಟಿಸಂ ಸೆರಬ್ರಲ್  ಪಾಲ್ಸಿ ಬುದ್ಧಿಮಾಂದ್ಯ ಮತ್ತು ಬಹುವಿಧ ಅಂಗವಿಕಲರು) ನಿರಾಮಾಯ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು ಕರ್ನಾಟಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ 04 ಬಗೆಯ ವಿಕಲಚೇತನರಿಗೆ ಒಂದು ಬಾರಿ ವಾರ್ಷಿಕ ₹ 250/- ಗಳನ್ನು ಸರ್ಕಾರದ ವಿಮಾಕಂತು ಪಾವತಿಸುತ್ತಿದೆ.
ಪ್ರತಿ ವರ್ಷ ₹ 1.00 ಲಕ್ಷಗಳವರೆಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ ಸಿಗಲಿದೆ. ಈ ಮೊತ್ತದಲ್ಲಿ ₹4000/-  ಶಸ್ತ್ರ ಚಿಕಿತ್ಸೆ ₹ 15000/- ಶಸ್ತ್ರಚಿಕಿತ್ಸೆ ರಹಿತ ಕಾಯಿಲೆಗಳ ವೆಚ್ಚ  ₹ 15000/-   ಹೊರರೋಗಿ ವಿಭಾಗದ ವೆಚ್ಚ, ಆರೋಗ್ಯ ತಪಾಸಣೆ ಪರೀಕ್ಷೆಗಳು, ಔಷಧಿಗಳು,  ₹ 4000/- ಹಲ್ಲುಗಳಿಗೆ ಸಂಬಂಧಿಸಿದ ವೆಚ್ಚ, ₹20,000/-ಗಳ ಚಾಲ್ತಿಯಲ್ಲಿರುವ ಥೆರಪಿ  ₹ 4000/-,  ಪರ್ಯಾಯ ಔಷಧಿಗಳು ₹2000/-, ಪ್ರಯಾಣ ವೆಚ್ಚಗಳನ್ನು ಒಳಗೊಂಡಿರುತ್ತದೆ. ಬಡತನ ರೇಖೆಗಿಂತ ಮೇಲ್ಪಟ್ಟ ಕುಟುಂಬದ ವಿಕಲಚೇತನ ವ್ಯಕ್ತಿಗಳು ವಾರ್ಷಿಕ  ₹ 500/- ಗಳನ್ನು ಪಾವತಿಸಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಯ ಕಾಕ್ಲಿಯಾರ್  ಇಂಪ್ಲಾಂಟ್ ಯೋಜನೆ ಅಡಿಯಲ್ಲಿ   ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಸಿ ಗುರುತು ಹಚ್ಚಿದ ತೀವ್ರತರವಾದ / ಗಂಭೀರ ಸ್ವರೂಪದ ಶ್ರವಣೋಷವುಳ್ಳ 6 ವರ್ಷದ ಕೆಳಗಿನ ಮಕ್ಕಳಿಗೆ ಶ್ರವಣ ಸಾಧನೆಗಳನ್ನು ನೀಡಿ ಟ್ರಯಲ್ ಆಡಿಟರಿ ವರ್ಬಲ್  ಥೆರಪಿಯನ್ನು ಒದಗಿಸಲಾಗುವುದು.
ಶ್ರವಣದೋಷವುಳ್ಳವರಿಗೆ ಸಾಧನಗಳಿಂದ ಸರಿಪಡಿಸಲಾಗದಿದ್ದಲ್ಲಿ ಕಾಕ್ಲಿಯಾರ್  ಇಂಪ್ಯಾಂಟ್  ಶಸ್ತ್ರಚಿಕಿತ್ಸೆ ಸೌಲಭ್ಯ ನೀಡಿ, ಶಸ್ತ್ರಚಿಕಿತ್ಸೆಯ ನಂತರದ 2 ಆಡಿಟರಿವರ್ಬಲ್  ಥೆರಪಿ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಲಾಗುತ್ತಿದೆ. 2016-17 ನೇ ಸಾಲಿನಿಂದ ಇಲ್ಲಿಯವರೆಗೆ 665 ಫಲಾನುಭವಿಗಳಿಗೆ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ ಎಂದರು.

ದೇಶದಲ್ಲೇ ಪ್ರಪ್ರಥಮಬಾರಿಗೆ ವಿಕಲಚೇತನ ಮಕ್ಕಳ ಪೋಷಕರಿಗೆ ತಲಾ ೧೦೦೦ ರೂಪಾಯಿ ಗೌರವ ಧನವನ್ನು ಕರ್ನಾಟಕ ಸರ್ಕಾರ ಪಾವತಿಸುತ್ತಿರುವುದು ಶ್ಲಾಘನೀಯ. ಸ್ವಾಗತಾರ್ಹ. ಈ ಮೊತ್ತವನ್ನು ಹೆಚ್ಚಿಸಬೇಕು. ವಿಮಾ ಸೌಲಭ್ಯವು ೧ ಲಕ್ಷ ರೂಪಾಯದ ೫ ಲಕ್ಷ ರೂಪಾಯಿಗೆ ಹೆಚ್ಚಿಸಬೇಕು ಎಂದು ವೈ.ಎಂ‌. ಸತೀಶ್ ಅವರು ಮನವಿ ಮಾಡಿದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?