Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ: ಸಿ.ಎಂ

ವಿಜಯಪುರ ಫೆ 2: ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು ಎಂದು ವಿವರಿಸಿದರು.

ಆದರೆ, ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ "ಇವ ನಮ್ಮವ ಇವ ನಮ್ಮವ" ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು , ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ.  ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರ್ಚ್ 20 ರಂದು ನಾನು ಮುದ್ಸೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇ ಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ಸೇವೆ. ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದು ವಿವರಿಸಿದರು.

ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು

ಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಕೃಷಿ ಸಚಿವರಾದ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರುಗಳಾದ ಯಶವಂತರಾಯಗೌಡ ವ್ಹಿ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನಿಲಗೌಡ ಬಿ ಪಾಟೀಲ, ಪೊ.ಹೆಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ ಪಾಟೀಲ, KPCC ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಲ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?