Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ನಗರದ ಹೃದಯಭಾಗ ರಾಯಲ್ ಸರ್ಕಲ್‌ನಲ್ಲಿ ಚರಂಡಿ ನೀರು ರಸ್ತೆಗೆ ...ಕಣ್ಣು ಮುಚ್ಚಿ ಕುಳಿತ ಪಾಲಿಕೆ ಅಧಿಕಾರಿಗಳು

ಬಳ್ಳಾರಿ,ಮೇ. 27 : ನಗರದ ಹೃದಯಭಾಗದಲ್ಲಿರುವ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಕಳೆದು ಎರಡು ದಿನಗಳಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ಇದರಿಂದ ಪಾದಚಾರಿಗಳು ಓಡುತ್ತಾ ಎಗರುತ್ತಾ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಹೌದು ರಾಯಲ್ ಸರ್ಕಲ್‌ನಲ್ಲಿ ರಸ್ತೆ ಅಗಲೀಕರಣದ ಮಾಡಲು ಮಹಾನಗರ ಪಾಲಿಕೆಯ ಮುಂದೆ ಇದ್ದ ವಾಣಿಜ್ಯ ಕಟ್ಟಡವನ್ನು ತೆರವುಗೊಳಿಸಲಾಗುತ್ತಿದೆ, ಈ ಕಾಮಗಾರಿ ನಡೆಯುವ ವೇಳೆ ಒಳಚರಂಡಿ ಡ್ಯಾಮೇಜ್ ಆಗಿ ಅದರಿಂದ ಕೊಚ್ಚೆ ನೀರು ಸರ್ಕಲ್ ನಲ್ಲಿರುವ ರಸ್ತೆಯ ಮೇಲೆಲ್ಲಾ ಹರಿಯುತ್ತಿದೆ, ಇದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಗಟಾರ್ ನೀರಿನ ದುರ್ನಾತದಿಂದ ಮೂಗು ಮುಚ್ಚಿಕೊಂಡು ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಾ ಓಡಾಡುತ್ತಿದ್ದಾರೆ.
ಕೂಗಳತೆಯಲ್ಲೇ ಪಾಲಿಕೆ ಕಛೇರಿಯಿದ್ದು ಅದರ ಅಧಿಕಾರಿಗಳು ಸಹ ಇದೇ ಕೊಚ್ಚೆ ನೀರಿನಲ್ಲಿ ತಮ್ಮ ದ್ವಿಚಕ್ರ ವಾಹನ ಮತ್ತು ಕಾರಿನಲ್ಲಿ ನೋಡುತ್ತಲೇ ಕಣ್ಣಿದ್ದು ಕುರುಡರಂತೆ, ಮೂಗಿದ್ದು ಮೂಗಿಲ್ಲದಂತೆ ಓಡಾಡುತ್ತಿದ್ದಾರೆ ವಿನಃ ದುರಸ್ಥಿಗೆ ಮುಂದಾಗುತ್ತಿಲ್ಲ. ಸಂಬಧಿಸಿದ ಅಧಿಕಾರಿಗಳು ತಕ್ಷಣ ಈ ಓಪನ್ ಡ್ರೆನೇಜ್‌ನ್ನು ರಿಪೇರಿ ಮಾಡಿಸಿ ರಸ್ತೆಗೆ ಚರಂಡಿ ನೀರು ಹರಿಯುವುದನ್ನು ನಿಲ್ಲಸಬೇಕೆಂದು ಸಾರ್ವಜನಿಕರು ಪಾಲಿಕೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?