Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಬಾಲ್ಯ ವಿವಾಹ; ಪೋಕ್ಸೋ ಕೇಸ್, ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚಳ! 

ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ.

ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ ಎಲ್ಲಾ ಸರ್ಕಾರಗಳು ಈ ಸಂಬಂಧ ಕಠಿಣ ಕಾನೂನು ಪಾಲನೆ ಮಾಡುತ್ತಿದ್ದರೂ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಜನಜಾಗೃತಿ ಜೊತೆಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದರೂ ಈ ಸಾಮಾಜಿಕ ಪಿಡುಗು ದೂರವಾಗಿಲ್ಲ.

ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಪ್ರಮಾಣ ಅಧಿಕ ಪ್ರಮಾಣದಲ್ಲಿರುವುದು ಆತಂಕಕಾರಿ ವಿಚಾರವಾಗಿದೆ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ಕಡಿಮೆಗೊಳಿಸಲು ಸಿಎಂ ಸಿದ್ದರಾಮಯ್ಯ ಕೂಡ ಎರಡು ದಿನಗಳ ಕಾಲ‌ ನಡೆದ ಡಿಸಿಗಳು ಹಾಗೂ ಸಿಇಒಗಳ ಸಭೆಯಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಬಾಲ್ಯ ವಿವಾಹ 700: 2024-25ರ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹಗಳು ನಡೆದಿವೆ. ಒಟ್ಟು 3,049 ಬಾಲ್ಯ ವಿವಾಹ ದೂರುಗಳು ಸ್ವೀಕೃತವಾಗಿವೆ. ಈ ಪೈಕಿ 2,349 ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಿನ ವಿಚಾರವಾಗಿದೆ. ಎರಡು ದಿನ ಸಿಎಂ ನೇತೃತ್ವದಲ್ಲಿ ನಡೆದ ಡಿಸಿ ಹಾಗೂ ಸಿಇಒಗಳ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ 2024-25ರಲ್ಲಿ 700 ಬಾಲ್ಯ ವಿವಾಹಗಳು ನಡೆದಿವೆ.

ಇದರಲ್ಲಿ, ಶಿವಮೊಗ್ಗದಲ್ಲಿ ಅತೀ ಹೆಚ್ಚು 79 ಬಾಲ್ಯ ವಿವಾಹಗಳು ನಡೆದಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ 78 ಬಾಲ್ಯ ವಿವಾಹ ನಡೆದಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಚಿತ್ರದುರ್ಗದಲ್ಲಿ 74 ಬಾಲ್ಯ ವಿವಾಹ ನಡೆದರೆ, ಬಾಗಲಕೋಟೆ ಜಿಲ್ಲೆಯಲ್ಲಿ 60, ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ 60, ಮಂಡ್ಯದಲ್ಲಿ 57 ಹಾಗೂ ಹಾವೇರಿ ಜಿಲ್ಲೆಯಲ್ಲಿ 42 ಬಾಲ್ಯ ವಿವಾಹಗಳು ನಡೆದಿವೆ.

ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಅತೀ ಹೆಚ್ಚು ದೂರು: ಬಾಲ್ಯ ವಿವಾಹ ಸಂಬಂಧ ಅತಿ ಹೆಚ್ಚು ದೂರು ಸ್ವೀಕೃತವಾಗಿರುವುದು ಮೈಸೂರು ಜಿಲ್ಲೆಯಲ್ಲಾಗಿದೆ. ಜಿಲ್ಲೆಯಲ್ಲಿ ಸುಮಾರು 284 ದೂರುಗಳು ಸ್ವೀಕೃತವಾಗಿದ್ದು, ಆ ಪೈಕಿ 224 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಉಳಿದಂತೆ ಮಂಡ್ಯದಲ್ಲಿ 180 ದೂರುಗಳು ಸ್ವೀಕೃತವಾಗಿದ್ದು, ಆ ಪೈಕಿ 129 ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಅಧಿಕಾರಿಗಳು ಸಫಲರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಬಾಲ್ಯ ವಿವಾಹಗಳ ಬಗ್ಗೆ 83 ದೂರುಗಳು ಸ್ವೀಕೃತವಾಗಿದ್ದು, ಈ ಪೈಕಿ 53 ವಿವಾಹಗಳನ್ನು ತಡೆಯಲಾಗಿದೆ. ಆದರೆ, 30 ಬಾಲ್ಯ ವಿವಾಹಗಳು ನಡೆದಿವೆ. ಇನ್ನುಳಿದಂತೆ, ರಾಮನಗರ ಜಿಲ್ಲೆಯಲ್ಲಿ 28, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 24, ಯಾದಗಿರಿಯಲ್ಲಿ 16, ಹಾಸನದಲ್ಲಿ 15 ಹಾಗೂ ಕೋಲಾರದಲ್ಲಿ 14 ಬಾಲ್ಯ ವಿವಾಹಗಳು ನಡೆದಿವೆ.

ದಕ್ಷಿಣ ಕನ್ನಡ, ಕೊಡಗು, ಉಡುಪಿಯಲ್ಲಿ ಅತೀ ಕಡಿಮೆ ಬಾಲ್ಯ ವಿವಾಹಗಳ ದೂರುಗಳು ಸ್ವೀಕೃತವಾಗಿವೆ. ದ.ಕನ್ನಡ ಹಾಗೂ ಕೊಡಗು ತಲಾ 7, ಉಡುಪಿಯಲ್ಲಿ 6 ಬಾಲ್ಯ ವಿವಾಹಗಳು ನಡೆದಿವೆ. ದಾವಣಗೆರೆಯಲ್ಲೂ 7 ಬಾಲ್ಯ ವಿವಾಹಗಳು ನಡೆದಿವೆ. ರಾಯಚೂರಲ್ಲಿ 118 ಬಾಲ್ಯ ವಿವಾಹ ದೂರು ಸ್ವೀಕಾರವಾಗಿದ್ದು, 114 ತಡೆಯಲಾಗಿದೆ. ಕೇವಲ 4 ಬಾಲ್ಯ ವಿವಾಹಗಳು ನಡೆದಿವೆ. ಇನ್ನು ಬೀದರ್, ತುಮಕೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ 3 ಬಾಲ್ಯ ವಿವಾಹಗಳು ನಡೆದಿವೆ. ಚಾಮರಾಜನಗರ, ಗದಗದಲ್ಲಿ ತಲಾ 2 ಮತ್ತು ಧಾರವಾಡದಲ್ಲಿ 1 ಬಾಲ್ಯ ವಿವಾಹ ನಡೆದಿದೆ.

ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 2,165 ಬಾಲ್ಯ ವಿವಾಹ: ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಅಂದರೆ 2021-22 ರಿಂದ 2024-25ವರೆಗೆ 2,165 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 2021-22ರಲ್ಲಿ 418, 2022-23ರಲ್ಲಿ 328 ನಡೆದಿವೆ. ಆದರೆ ಕಾಂಗ್ರೆಸ್ ಸರ್ಕಾರದ ಆಡಳಿತ ಆರಂಭವಾದ 2023-24ರಲ್ಲಿ ಬಾಲ್ಯ ವಿವಾಹ ಪ್ರಕರಣ 719ಕ್ಕೆ ಏರಿಕೆಯಾಗಿದೆ. ಬಳಿಕ 2024-25ರಲ್ಲಿ 700 ಬಾಲ್ಯ ವಿವಾಹಗಳು ನಡೆದಿವೆ. ಕಳೆದ ಎರಡು ವರ್ಷಗಳಲ್ಲೇ 1,416 ಬಾಲ್ಯ ವಿವಾಹಗಳು ಜರುಗಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಭೆಯಲ್ಲಿ ಬಾಲ್ಯ ವಿವಾಹ ನಿಯಂತ್ರಿಸದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದಲ್ಲಿ 3,489 ಪೋಕ್ಸೋ ಪ್ರಕರಣ, 685 ಬಾಲ ಗರ್ಭಿಣಿಯರು ಪತ್ತೆ: ರಾಜ್ಯದಲ್ಲಿ 2024-25 ಸಾಲಿನಲ್ಲಿ 685 ಬಾಲ ಗರ್ಭಿಣಿ ಪ್ರಕರಣಗಳು ವರದಿಯಾಗಿವೆ. ಪೋಕ್ಸೋ ಪ್ರಕರಣಗಳ ಪೈಕಿ 685 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿರುವುದು ಮತ್ತೊಂದು ಆತಂಕಕಾರಿ ವಿಚಾರವಾಗಿದೆ. ರಾಜ್ಯದಲ್ಲಿ 2024-25 ಸಾಲಿನಲ್ಲಿ 3,489 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 685 ಬಾಲ ಗರ್ಭಿಣಿಯರಾಗಿದ್ದಾರೆ ಎಂದು ಸಿಎಂ ನೇತೃತ್ವದ ಸಭೆಯಲ್ಲಿ ಇಲಾಖೆ ಅಧಿಕಾರಿಗಳು ಅಂಕಿ-ಅಂಶ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 343 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 28 ಬಾಲ ಗರ್ಭಿಣಿಯರಾಗಿದ್ದಾರೆ. ಶಿವಮೊಗ್ಗದಲ್ಲಿ 231 ಪೋಕ್ಸೋ ಪ್ರಕರಣಗಳಾಗಿದ್ದು, ಈ ಪೈಕಿ 55 ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ಬೆಳಗಾವಿಯಲ್ಲಿ 179 ಪೋಕ್ಸೋ ಪ್ರಕರಣಗಳಲ್ಲಿ, 20 ಬಾಲ ಗರ್ಭಿಣಿಯಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 170 ಪೋಕ್ಸೋ ಪ್ರಕರಣ ದಾಖಲಾಗಿದ್ದು, 32 ಗರ್ಭವತಿಯರಾಗಿದ್ದಾರೆ. ಮಂಡ್ಯದಲ್ಲಿ 160 ಪೋಕ್ಸೋ ಪ್ರಕರಣ ದಾಖಲಾಗಿದ್ದು, 8 ಮಂದಿ ಬಾಲ ಗರ್ಭಿಣಿಯರಾಗಿದ್ದಾರೆ.

ಜಿಲ್ಲೆ ಪೋಕ್ಸೋ ಪ್ರಕರಣ ಬಾಲ ಗರ್ಭಿಣಿಯರು
1 ಬೆಂಗಳೂರು ನಗರ 343 28
2 ಶಿವಮೊಗ್ಗ 231 55
3 ಬೆಳಗಾವಿ 179 20
4 ಚಿಕ್ಕಬಳ್ಳಾಪುರ 170 32
5 ಮಂಡ್ಯ 160 8
6 ಚಿಕ್ಕಮಗಳೂರು 162 40
7 ಮೈಸೂರು 162 53
8 ಹಾಸನ 154 1
9 ದಕ್ಷಿಣ ಕನ್ನಡ 146 20
10 ಚಿತ್ರದುರ್ಗ 143 30
11 ಹಾವೇರಿ 129 58
12 ಕೋಲಾರ 126 25
13 ವಿಜಯಪುರ 111 11
14 ದಾವಣಗೆರೆ 104 15
15 ರಾಮನಗರ 102 32
16 ಕೊಡಗು 95 43
17 ಚಾಮರಾಜನಗರ 91 35
18 ಧಾರವಾಡ 87 9
19 ರಾಯಚೂರು 84 6
20 ವಿಜಯನಗರ 83 28
21 ಬಾಗಲಕೋಟೆ 71 12
22 ಕಲಬುರಗಿ 68 2
23 ಕೊಪ್ಪಳ 68 5
24 ಬಳ್ಳಾರಿ 65 18
25 ಬೀದರ್ 64 12
26 ಉಡುಪಿ 62 18
27 ಬೆಂಗಳೂರು ಗ್ರಾಮಾಂತರ 59 17
28 ಯಾದಗಿರಿ 56 6
29 ತುಮಕೂರು 49 23
30 ಗದಗ 34 13
31 ಉತ್ತರ ಕನ್ನಡ 28 10

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?