Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಜಮೀರ್ ಅಹ್ಮದ್ ಖಾನ್ ಅವರಿಂದ ಜನತಾ ದರ್ಶನ ಯಶಸ್ವಿ

ಸುವರ್ಣವಾಹಿನಿ ಸುದ್ದಿ
ಹೊಸಪೇಟೆ ವಿಜಯನಗರ,ಜ,೨೪: ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಂದ ಜನವರಿ ೨೪ರಂದು ಜನತಾ ದರ್ಶನ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ ಹಾಗೂ ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ ಅವರ ಸಮ್ಮುಖದಲ್ಲಿ ಸಚಿವರು ಸಾರ್ವಜನಿಕರ ಅಹವಾಲು ಆಲಿಸಿದ್ದು ವಿಶೇಷವಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹೊಸಪೇಟೆ ತಾಲೂಕಾಡಳಿತದಿಂದ ಕಮಲಾಪುರದ ಹೊಟೆಲ್ ಮಯೂರ ಭುವನೇಶ್ವರಿ ಆವರಣದಲ್ಲಿ ನಡೆದ ಕಮಲಾಪುರ ಪಟ್ಟಣದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಮಲಾಪುರ ಸೇರಿದಂತೆ ಸೀತಾರಾಮ ತಾಂಡ, ಬುಕ್ಕಸಾಗರ, ವೆಂಕಟಾಪುರ, ಕಡ್ಡಿರಾಂಪುರ, ಮಲಪನಗುಡಿ ಸೇರಿದಂತೆ ವಿವಿಧ ಗ್ರಾಮಗಳಿಂದ ಅಹವಾಲುಗಳನ್ನು ಹೊತ್ತು ಜನರು ಸಾಲಾಗಿ ವೇದಿಕೆಗೆ ಬಂದು ಸಚಿವರಿಗೆ ತಮ್ಮ ಬೇಡಿಕೆಗಳ ಬಗ್ಗೆ ತಿಳಿಸಿದರು. ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಸಚಿವರು ಸಾವಧಾನದಿಂದ ಪ್ರತಿಯೊಬ್ಬರ ಅಹವಾಲು ಆಲಿಸಿ ಸ್ಪಂದನೆ ನೀಡಿದರು. ಕೆಲವು ಅಹವಾಲುಗಳ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿ ಪರಿಹಾರ ಕಲ್ಪಿಸಿದರು. ಇನ್ನು ಕೆಲವು ಅರ್ಜಿಗಳ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕಾಗಿ ಸಂಬAಧಿಸಿದ ಇಲಾಖೆಗಳಿಗೆ ವರ್ಗಾಯಿಸಿದರು.
ಸ್ಥಳದಲ್ಲಿಯೇ ಆದೇಶ ಪತ್ರ ವಿತರಣೆ: ಜನತಾ ದರ್ಶನದಲ್ಲಿ ಸಾರ್ವಜನಿಕರು ತಮ್ಮ ಅಹವಾಲು ಅರ್ಜಿಗಳನ್ನು ಸಲ್ಲಿಸುವ ಮುನ್ನ ಕೌಂಟರನಲ್ಲಿ ನೋಂದಾಯಿಸಲು ವ್ಯವಸ್ಥೆ ಮಾಡಿಸಲಾಗಿತ್ತು. ಬೆಳಗ್ಗೆ ಅರ್ಜಿ ಸಲ್ಲಿಸಿದ ಗೋಸಮ್ಮ ಅವರು ವಿದವಾ ವೇತನ ಮಾಸಾಶನ ಆದೇಶ, ಅಶ್ವತ್ಥಮ್ಮ ಅವರು ಸಂದ್ಯಾ ಸುರಕ್ಷಾ ಮಾಸಾಶನ, ವಿಕಲಚೇತನ ಹುಲಗಪ್ಪ ಅವರು ಅಂಗವೀಕಲ ಪೋಷಣಾ ಮಾಸಾಶನ ಆದೇಶ ಪತ್ರಗಳನ್ನು ಸಚಿವರಿಂದ ಪಡೆದು ಸಂತಸ ವ್ಯಕ್ತಪಡಿಸಿದರು.

ಜನರ ಮಧ್ಯೆ ತೆರಳಿ ಅಹವಾಲು ಆಲಿಕೆ: ಕಾರ್ಯಕ್ರಮದ ಕೊನೆಯಲ್ಲಿ ಸಚಿವರು ವೇದಿಕೆಯಿಂದ ಕೆಳಗಿಳಿದು ಜನರ ಮಧ್ಯೆ ನಡೆದು ಸಾರ್ವಜನಿಕರ ಅಹವಾಲು ಆಲಿಸಿದರು.
ಪೊಲೀಸ್ ಇಲಾಖೆಯಿಂದ ಬಂದೋಬಸ್ತ್: ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆಯುವಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ಪೊಲೀಸ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ನಿವಾಸಿಗಳಿಂದ ಜೈಕಾರ: ಬೈಪಾಸ್ ರಸ್ತೆಯಲ್ಲಿನ ಜಂಬುನಾಥಹಳ್ಳಿಯ ಆಶ್ರಯ ಕಾಲೋನಿಯ ನಿವಾಸಿಗಳು ತಂಡವಾಗಿ ವೇದಿಕೆಗೆ ಬಂದು ಸಚಿವರಿಗೆ ತಮ್ಮ ಅಹವಾಲನ್ನು ಸಲ್ಲಿಸಿದರು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ನಿವಾಸಿಗಳನ್ನುದ್ದೇಶಿಸಿ ಮಾತನಾಡಿದ ಸಚಿವರು, ಈ ನಿವಾಸಿಗಳ ಎಲ್ಲ ಮನೆಗಳಿಗೆ ಹಾಕಿರುವ ದಂಡವನ್ನು ರದ್ದು ಮಾಡಿ ಮೀಟರ್ ಅಳವಡಿಸಲು ಕ್ರಮ ವಹಿಸಬೇಕು. ಪಟ್ಟಾ ಇಲ್ಲದ ಮನೆಗಳಿಗೆ ಪಟ್ಟಾ ಒದಗಿಸಲು ಪರಿಶೀಲಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಚಿವರ ಸ್ಪಂದನೆಗೆ ನಿವಾಸಿಗಳು ವೇದಿಕೆಯಲ್ಲಿಯೇ ಜೈಕಾರ ಕೂಗಿ ಸಚಿವರಿಗೆ ಧನ್ಯವಾದಗಳನ್ನು ತಿಳಿಸಿದರು.
ಅರ್ಜಿಗಳ ನೋಂದಣಿ: ಕಂದಾಯ ಇಲಾಖೆಗೆ ಹೆಚ್ಚಿನ ಅರ್ಜಿಗಳು ಸ್ವೀಕೃತವಾದವು. ಇನ್ನುಳಿದಂತೆ ಜಿಲ್ಲಾ ಪಂಚಾಯತ್‌ಗೆ ೪೧, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ೧೧, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆಗೆ ತಲಾ ೧, ಆರೋಗ್ಯ ಇಲಾಖೆಗೆ ೬ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬAಧಿಸಿದ ಅರ್ಜಿಗಳ ನೋಂದಣಿಗೆ ವ್ಯವಸ್ಥೆ ಮಾಡಲಾಗಿತ್ತು.
ಜನರೊಂದಿಗಿರುವೆ: ಈ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಸಚಿವರು, ಜನತಾ ದರ್ಶನ ಕಾರ್ಯಕ್ರಮವು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ಮಹತ್ವದ ಕಾರ್ಯಕ್ರಮವಾಗಿದೆ. ಆಡಳಿತವು ಜನರ ಮನೆಬಾಗಿಲಿಗೆ ಹೋಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನಾವು ನಿಯಮಿತವಾಗಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಅರ್ಜಿ ಸಲ್ಲಿಸಲು ಬಂದ ಎಲ್ಲ ಅಹವಾಲುದಾರರ ಮನವಿಗಳನ್ನು ಸ್ವೀಕರಿಸಿ ಅವುಗಳ ಬಗ್ಗೆ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿ ಸ್ಪಂದನೆ ನೀಡುವುದಾಗಿ ಹೇಳಿದರು.
ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಮಾತನಾಡಿ, ಜನರಿಗೆ ಅನುಕೂಲವಾಗುವಂತೆ ನಾವು ಜನತಾ ದರ್ಶನ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡುವಲ್ಲಿ ಮುತುವರ್ಜಿ ವಹಿಸುತ್ತಿದ್ದೇವೆ. ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಲ್ಪಿಸಿ ಬದುಕುವ ವಿಶ್ವಾಸ ತುಂಬುತ್ತೇವೆ ಎಂದು ತಿಳಿಸಿದರು. ಹಂಪಿ ಉತ್ಸವದಲ್ಲಿ ನಮ್ಮ ಜಿಲ್ಲೆಯ ಹೆಚ್ಚಿನ ಕಲಾವಿದರಿಗೆ ಕಾರ್ಯಕ್ರಮ ಕೊಡಲು ಅವಕಾಶ ನೀಡಿದ್ದೇವೆ. ಹಂಪಿ ಉತ್ಸವ ಯಶಸ್ವಿಯಾಗಿ ನಡೆಯಲು ಎಲ್ಲರೂ ಸಹಕಾರ ಕೊಡಬೇಕು ಎಂದು ತಿಳಿಸಿದರು.
ಶಾಸಕರಾದ ಎಂ.ಪಿ.ಲತಾ ಅವರು ಮಾತನಾಡಿ, ಹಂಪಿ ಉತ್ಸವವನ್ನು ಜನೋತ್ಸವ ಎಂದು ಎಂ.ಪಿ.ಪ್ರಕಾಶ ಅವರು ಕರೆಯುತ್ತಿದ್ದರು. ಅವರ ಆಶಯದಂತೆ ಹಂಪಿ ಉತ್ಸವವು ನಿರಂತರವಾಗಿ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ.
ಜಿಲ್ಲಾಡಳಿತವು ಎಲ್ಲರ ಸಹಕಾರ ಪಡೆದು ಉತ್ಸವ ಆಯೋಜನೆ ಮಾಡುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್ ಅವರು ಮಾತನಾಡಿ, ಜನತಾ ದರ್ಶನ ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದೆ. ಬಹುತೇಕ ಜನರಿಗೆ ಸ್ಥಳದಲ್ಲಿಯೇ ಪರಿಹಾರ ದೊರೆತು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದಂತೆ, ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತಗೊಂಡ ಅರ್ಜಿಗಳ ಬಗ್ಗೆ ಹಂತಹAತವಾಗಿ ಪರಿಶೀಲಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು. ಅಗತ್ಯವಿದ್ದಲ್ಲಿ ಮುಖ್ಯಮಂತ್ರಿಗಳ ಕಚೇರಿಗೆ ಸಹ ಅರ್ಜಿಗಳನ್ನು ಸಲ್ಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.
ಸಾರ್ವಜನಿಕರಲ್ಲಿ ಮನವಿ: ಹಂಪಿ ಉತ್ಸವ ಜನರ ಉತ್ಸವವಾಗಿದೆ. ರಾಜ್ಯದ ಉತ್ಸವವಾಗಿದೆ. ಫೆ.೨, ಫೆ.೩ ಮತ್ತು ಫೆ.೪ರಂದು ನಡೆಯುವ ಉತ್ಸವಕ್ಕೆ ಸಾರ್ವಜನಿಕರು ಆಗಮಿಸಲು ೧೦೦ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ೬೦ ಎಕರೆ ಪ್ರದೇಶವನ್ನು ತಾತ್ಕಾಲಿಕ ಪಾರ್ಕಿಂಗ್ ಮಾಡಲು ಸಹಕರಿಸಿದ ಜಮೀನುದಾರರಿಗೆ ಅಭಿನಂದನೆ ಹೇಳುವೆ. ಹಂಪಿ ಉತ್ಸವಕ್ಕೆ ಪ್ರತಿಯೊಬ್ಬರು ಸಹ ಸಹಕಾರ ನೀಡುತ್ತಿದ್ದಾರೆ. ಜಿಲ್ಲಾಡಳಿತವು ಈ ಬಾರಿ ಹಂಪಿ ಉತ್ಸವವನ್ನು ಜನೋತ್ಸವವನ್ನಾಗಿ ಮಾಡುವ ಸದಾಶಯ ಹೊಂದಿದೆ. ಈ ದಿಶೆಯಲ್ಲಿ ಈ ವರ್ಷ ಕೆಲವು ಹೊಸ ಹೊಸ ಕಾರ್ಯಕ್ರಮ ರೂಪಿಸಿದ್ದೇವೆ. ಮೊದಲನೇ ದಿನ ಎತ್ತುಗಳ ಪ್ರದರ್ಶನ, ೨ನೇ ದಿನ ಕುರಿಗಳ ಪ್ರದರ್ಶನ, ೩ನೇ ದಿನ ಶ್ವಾನಗಳ ಪ್ರದರ್ಶನ, ಸಿರಿಧಾನ್ಯ ಪಾಕ ಸ್ಪರ್ಧೆ, ಮಕ್ಕಳ ಕಾರ್ಯಕ್ರಮಗಳು ಸಹ ನಡೆಯಲಿವೆ. ಎಲ್ಲರೂ ಭಾಗಿಯಾಗಿ ಕಾರ್ಯಕ್ರಮ ಯಶಗೊಳಿಸಬೇಕು ಎಂದು ಕೋರಿದರು. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನರಾಜ್ ಸಿಂಗ್, ಜಿಲ್ಲಾ ಪಂಚಾಯತ್ ಸಿಇಓ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು, ಸಚಿವರ ಮಾಧ್ಯಮ ಸಲಹೆಗಾರರಾದ ಲಕ್ಷಿö್ಮನಾರಾಯಣ, ಹೊಸಪೇಟೆ ಸಹಾಯಕ ಆಯುಕ್ತರಾದ ಮಹದ್ ಅಲಿ ಅಕ್ರಮ ಷಾಹ, ಹರಪನಹಳ್ಳಿ ಸಹಾಯಕ ಆಯುಕ್ತರಾದ ಪ್ರಕಾಶ, ತಹಸೀಲ್ದಾರರಾದ ಅಜಿತ್ ಮೆಹತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಶಿಕ್ಷಕರಾದ ಬಸವರಾಜ ಅಕ್ಕಿ ನಿರೂಪಿಸಿದರು. ಬಿಇಓ ಎಂ.ಚನ್ನಬಸಪ್ಪ ವಂದಿಸಿದರು. ಕಮಲಾಪುರ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?