Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಕನಕದುರ್ಗಮ್ಮ ಸಿಡಿಬಂಡಿ ಉತ್ಸವ: ರಸ್ತೆ ಸಂಚಾರ ಬದಲಾವಣೆ

ಬಳ್ಳಾರಿ,ಮಾ.10 : ಮಾ.11 ರಂದು ನಡೆಯುವ ಶ್ರೀ ಕನಕ ದುರ್ಗಮ್ಮ ಸಿಡಿ ಬಂಡಿ ಉತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಹಿತದೃಷ್ಠಿಯಿಂದ ಕನಕ ದುರ್ಗಮ್ಮ ದೇವಸ್ಥಾನದ ಕಡೆಯಿಂದ, ಎಸ್.ಪಿ ವೃತ್ತದ ಕಡೆಯಿಂದ, ರಾಯಲ್ ವೃತ್ತದ ಕಡೆಯಿಂದ, ಕೂಲ್ ಕಾರ್ನರ್ ವೃತ್ತದ ಕಡೆಯಿಂದ, ಕಪ್ಪಗಲ್ಲು ರಸ್ತೆ ಕಡೆಯಿಂದ ಹಾಗೂ ಮೋಕ ರಸ್ತೆ ಕಡೆಯಿಂದ ದೇವಸ್ಥಾನಕ್ಕೆ ಬರುವ ವಾಹನಗಳಿಗೆ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಪರ್ಯಾಯ ಮಾರ್ಗಗಳಲ್ಲಿ ರಸ್ತೆ ಸಂಚಾರ ಮಾಡಬೇಕು ಎಂದು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಮೋಟರ್ ವಾಹನ ಕಾಯ್ದೆ 1988 ರ ಅಧಿನಿಯಮ 115 ಹಾಗೂ ಕರ್ನಾಟಕ ಮೋಟರ್ ವಾಹನ ನಿಯಮಗಳು 1989 ರ ನಿಯಮ 221 ಎ (5) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಕೆಳಗಿನಂತೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ.
ಮಾ.11 ರಂದು ಮಧ್ಯಾಹ್ನ 02 ಗಂಟೆಯಿAದ ಮಾ.12 ರ ಬೆಳಿಗ್ಗೆ 06 ಗಂಟೆಯವರೆಗೆ ಬೆಂಗಳೂರು ಕಡೆಯಿಂದ ಸಿರುಗುಪ್ಪ ಕಡೆಗೆ ಹೋಗುವ ಮತ್ತು ಬರುವ ಮಧ್ಯಮ ಹಾಗೂ ಭಾರಿ ವಾಹನಗಳು ಬೆಂಗಳೂರು ರಸ್ತೆ ಬೈಪಾಸ್ ರೈಲ್ವೇಗೇಟ್, ಹೊಸಪೇಟೆ ರಸ್ತೆ ಬೈಪಾಸ್, ವಿನಾಯಕ ನಗರ, ಸುಧಾ ಕ್ರಾಸ್, ಎಸ್.ಪಿ ಸರ್ಕಲ್ ಮುಖಾಂತರ ಸಂಚರಿಸುವುದು.

ಮಾ.11 ರಂದು ಬೆಳಿಗ್ಗೆ 10 ಗಂಟೆಯಿAದ ಮಾ.12 ರಂದು ಬೆಳಿಗ್ಗೆ 06 ಗಂಟೆಯವರೆಗೆ ಸಿರುಗುಪ್ಪ ಕಡೆಯಿಂದ ಮೋಕ ಕಡೆಗೆ ಹೋಗುವ ಮತ್ತು ಬರುವ ದ್ವಿಚಕ್ರ, ತ್ರಿಚಕ್ರ ಹಾಗೂ ಇನ್ನಿತರ ಲಘು ವಾಹನಗಳು ಎಸ್.ಪಿ ಸರ್ಕಲ್, ಮೋತಿ ಸರ್ಕಲ್, ಡಿ.ಸಿ ಸರ್ಕಲ್, ರಾಯಲ್ ಸರ್ಕಲ್, ಇಂದಿರಾ ಸರ್ಕಲ್, ಕೂಲ್ ಕಾರ್ನರ್, ಕೆ.ಇ.ಬಿ ಮುಖಾಂತರ ಸಂಚರಿಸುವುದು.

ಮಾ.11 ರಂದು ಬೆಳಿಗ್ಗೆ 10 ಗಂಟೆಯಿAದ ಮಾ.12 ರಂದು ಬೆಳಿಗ್ಗೆ 06 ಗಂಟೆಯವರೆಗೆ ಬೆಂಗಳೂರು ಹಾಗೂ ಹೊಸಪೇಟೆ ಕಡೆಯಿಂದ ಮೋಕ ಕಡೆಗೆ ಹೋಗುವ ಮತ್ತು ಬರುವ ದ್ವಿಚಕ್ರ, ತ್ರಿಚಕ್ರ ಹಾಗೂ ಇನ್ನಿತರ ಲಘು ವಾಹನಗಳು ಮೋತಿ ಸರ್ಕಲ್, ಡಿ.ಸಿ ಸರ್ಕಲ್, ರಾಯಲ್ ಸರ್ಕಲ್, ಇಂದಿರಾ ಸರ್ಕಲ್, ಕೂಲ್ ಕಾರ್ನರ್, ಕೆ.ಇ.ಬಿ ಮುಖಾಂತರ ಸಂಚರಿಸುವುದು.

ಮಾ.11 ರಂದು ಬೆಳಿಗ್ಗೆ 10 ಗಂಟೆಯಿAದ ಮಾ.12 ರಂದು ಬೆಳಿಗ್ಗೆ 06 ಗಂಟೆಯವರೆಗೆ ಕಪ್ಪಗಲ್, ತಾಳೂರು ಕಡೆಯಿಂದ ಬಳ್ಳಾರಿ ನಗರದೊಳಗೆ ಹೋಗುವ ಮತ್ತು ಬರುವ ದ್ವಿಚಕ್ರ, ತ್ರಿಚಕ್ರ ಹಾಗೂ ಇನ್ನಿತರ ಲಘು ವಾಹನಗಳು ತಾಳೂರು-ಕಪ್ಪಗಲ್ ರಸ್ತೆಯ ಕಾಲುವೆಯ ಮೇಲೆ ಹವಂಭಾವಿ, ಎಸ್.ಪಿಸರ್ಕಲ್ ಮುಖಾಂತರ ಸಂಚರಿಸುವುದು.

ಮಾ.11 ರಂದು ಬೆಳಿಗ್ಗೆ 10 ಗಂಟೆಯಿAದ ಮಾ.12 ರಂದು ಬೆಳಿಗ್ಗೆ 06 ಗಂಟೆಯವರೆಗೆ ಹೊಸಪೇಟೆ, ಸಿರುಗುಪ್ಪ ಹಾಗೂ ಬೆಂಗಳೂರು ಕಡೆಯಿಂದ ಅನಂತಪುರ ಕಡೆಗೆ ಹೋಗುವ ಮತ್ತು ಬರುವ ಮಧ್ಯಮ ಹಾಗೂ ಭಾರಿ ವಾಹನಗಳು ಅನಂತಪರ ಬೈಪಾಸ್, ಇಂದಿರಾ ಸರ್ಕಲ್, ಎಸ್.ಎನ್.ಪೇಟೆ, ಫ್ಲೆöÊಓವರ್, ಕೆ.ಇ.ಬಿ ಸರ್ಕಲ್ ಮುಖಾಂತರ ಸಂಚರಿಸುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?