Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಆನ್‌ಲೈನ್‌ ವಂಚನೆ ತಡೆಯಲು HSRP ಡೆಡ್ ಲೈನ್ ವಿಸ್ತರಣೆ: ಕರ್ನಾಟಕ ಸರ್ಕಾರ

ಬೆಂಗಳೂರು: HSRP ಹೆಸರಲ್ಲಿ ಆನ್‌ಲೈನ್‌ ವಂಚನೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ HSRP ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಹೌದು.. ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌- HSRP) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದಿರುವಂತೆಯೇ ಈ ಅಂತಿಮ ಗಡುವಿನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ವಿಧಾನ ಮಂಡಲ ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೂ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಪರಿಷತ್‌ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಈವರೆಗೆ ಹೆಚ್ಚಿನ ವಾಹನಗಳು ನೋಂದಣಿ ಮಾಡಿಸಿಕೊಂಡಿಲ್ಲ. 18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಅಲ್ಲದೆ, ಇದರ ಬಗ್ಗೆ ಆನ್‌ಲೈನ್‌ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ ಮಾಡುವುದರ ಜತೆಗೆ ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಆಗ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ನೋಂದಣಿಯನ್ನು ವಿಸ್ತರಣೆ ಮಾಡುವ ಬಗ್ಗೆ ಸರ್ಕಾರವೂ ಚಿಂತನೆ ನಡೆಸಿದ್ದು, ಮತ್ತೆ ಮೂರು ತಿಂಗಳು ಮುಂದಕ್ಕೆ ಹಾಕುತ್ತೇವೆ. ಅಲ್ಲದೆ, ಈ ಸಂಬಂಧ ಆನ್‌ಲೈನ್ ವಂಚನೆ ಬಗ್ಗೆ ಗಮನಹರಿಸುತ್ತೇವೆ ಎಂದು ಹೇಳಿದರು.

ವಂಚನೆ ಕುರಿತು ದೂರು ನೀಡಿ
HSRP ಅಳವಡಿಸಲು ಹೆಚ್ಚುವರಿ ಹಣ ವಸೂಲಿ ವಿಚಾರ ಸರ್ಕಾರದ ಗಮನಕ್ಕೆ ಬರುತ್ತಿದೆ. ಈ ಬಗ್ಗೆ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೆ, ಸರಿಯಾಗಿ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು. ಸಾರಿಗೆ ಇಲಾಖೆಯ ಆಯುಕ್ತರಿಗೆ ದೂರು ನೀಡಿದರೆ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಪದೇ ಪದೆ ಗ್ರಾಹಕರಿಗೆ ಕಿರಿಕಿರಿ ಮಾಡಿದರೆ ಅಂತಹ ಡೀಲರ್‌ಗಳನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಇದೇ ವೇಳೆ ಸರ್ಕಾರ ಮೂರು ತಿಂಗಳು ಗಡುವು ಮುಂದೂಡಿಕೆ ಮಾಡಿದೆ. ಆದರೆ, ದಿನಾಂಕವನ್ನು ಹೇಳಿಲ್ಲ. ಹೀಗಾಗಿ ಈಗಿನ ದಿನಾಂಕಕ್ಕೆ ಸರಿಯಾಗಿ ಮುಂದಕ್ಕೆ ಹಾಕಿದರೆ ಮೇ 17ರವರೆಗೆ ಅವಕಾಶವನ್ನು ನೀಡಿದಂತಾಗಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ನಿಖರ ಮಾಹಿತಿ ಗೊತ್ತಾಗಲಿದೆ. ಈ ಮೊದಲು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ಫೆ. 17 ಕೊನೇ ದಿನ ಎಂದು ತಿಳಿಸಲಾಗಿತ್ತು. ಈಗ ಮುಂದಕ್ಕೆ ಹೋಗಿರುವುದು ವಾಹನ ಸವಾರರು ಅಲ್ಪ ನಿರಾಳವಾಗುವಂತೆ ಮಾಡಿದಂತಾಗಿದೆ.

ಅಂತಿಮ ಗಡುವು ಮತ್ತೆ ವಿಸ್ತರಣೆ
ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಬಳಿಕ ವಿಸ್ತರಣೆ ಮಾಡಲಾಗುತ್ತಾ ಬರುತ್ತಿದೆ.
 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?