Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ ಕುಮಾರ್

ಬಳ್ಳಾರಿ,ಮಾ.13 : ಮಕ್ಕಳ ಪಾಲನಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಪ್ತಸಮಾಲೋಚಕರು, ಗೃಹಪಾಲಕ, ಗೃಹಪಾಲಕಿಯರು ಹಾಗೂ ಸಿಬ್ಬಂದಿಗಳು ಮಕ್ಕಳನ್ನು ಅರ್ಥಮಾಡಿಕೊಂಡು ಅವರ ಉತ್ತಮ ಭವಿಷ್ಯಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ ಕುಮಾರ್  ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ನೋಂದಾಣಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಿ.ಡಿ.ಡಿ.ಎಸ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ‘ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015, ದತ್ತು ಪ್ರಕ್ರಿಯೆ ಮತ್ತು ಮಕ್ಕಳ ರಕ್ಷಣೆ’ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳನ್ನು ಸಕರಾತ್ಮಕ ಕಾರ್ಯಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ತೊಡಗಿಸಬೇಕು. ಮಕ್ಕಳು ಸಂಸ್ಥೆಯಲ್ಲಿ ಇದ್ದಾಗ ಮತ್ತು ಶಾಲೆಗೆ ಹೊದಂತಹ ಸಂದರ್ಭದಲ್ಲಿ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣೆ ಪೋಷಣೆಂiÀiಲ್ಲಿ ಸಿಬ್ಬಂದಿಗಳ ಪಾತ್ರ ಬಹು ಮುಖ್ಯವಾಗಿದೆ. ಮಕ್ಕಳ ಪ್ರತಿಯೊಂದು ವೈಯಕ್ತಿಕ ಕಡತ ನಿರ್ವಹಿಸುವ ಕುರಿತು ಹಾಗೂ ಮಕ್ಕಳೊಂದಿಗೆ ಸಮಲೋಚನೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸÀಬೇಕಾಗಿರುವುದರಿಂದ ತರಬೇತಿ ಹೊಂದಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ಮಾತನಾಡಿ, ತರಬೇತಿಯಲ್ಲಿ ಭಾಗಿದಾರರು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು. ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಂಡುಬರುವ ಸಮಸ್ಯೆಗಳ ಕುರಿತು ಚರ್ಚಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಪಡೆದುಕೊಳ್ಳಬೇಕು. ಈ ಮೂಲಕ ತಮ್ಮ ಸಾಮರ್ಥ್ಯ ವೃದ್ಧಿಸಿಕೊಂಡು ಮಕ್ಕಳ ರಕ್ಷಣೆ ಮತ್ತು ಪೋಷಣೆಯಲ್ಲಿ ಇನ್ನೂ ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಬೇಕೆಂದು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು ಅವರು ಮಾತನಾಡಿ ಬಾಲ್ಯವಿವಾಹ, ಪೋಕ್ಸೋ, ಪ್ರಕರಣಗಳನ್ನು ತಡೆಯುವಲ್ಲಿ ಸಹಭಾಗಿದಾರರ ಪಾತ್ರ ಬಹಳ ಮುಖ್ಯವಾಗಿದೆ ಹಾಗೂ ಸಂಕಷ್ಠದಲ್ಲಿರುವ ಮಕ್ಕಳ ರಕ್ಷಣೆ ಮತ್ತು ಪುರ್ನವಸತಿ ಒದಗಿಸುವ ಕುರಿತು ಪರಿಪೂರ್ಣವಾಗಿ ಅರಿಯಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ಹೆಚ್.ಸಿ.ರಾಘವೇಂದ್ರ ಅವರು ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬAಧಿತ ಕಾನೂನುಗಳ ಕುರಿತು ವಿಷಯ ಮಂಡಿಸಿದರು.
ವಕೀಲರಾದ ಶಿವಲೀಲಾ ಅವರು “ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಥಿಕಾರದ ಯೋಜನೆಗಳ” ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ತರಬೇತಿ ಕಾರ್ಯಕ್ರಮದಲ್ಲಿ ಉಪ ನೋಂದಣಿ ಅಧಿಕಾರಿ ದೇವೆಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮಂಜುನಾಥ, ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್, ಮಂಜುನಾಥ, ಅಂಗನವಾಡಿ ಮೇಲ್ವಿಚಾರಕರಾದ ಕ್ಯಾತ್ಯಾಯಿನಿ, ಮಕ್ಕಳ ಸಹಾಯವಾಣಿ ಯೋಜನಾ ಸಂಯೋಜಕ ಕೆ.ಆನಂದ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ, ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿ ಹಾಗೂ 60 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?