Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ: ಕೆ.ವಿ.ಪ್ರಭಾಕರ್

ಕೊಪ್ಪಳ,ಮಾ.9: ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್, ಡಿವಿಜಿ, ಪಿ.ರಾಮಯ್ಯ, ಪಾಟೀಲ್ ಪುಟಪ್ಪ ಸೇರಿ ಒಟ್ಟು 24 ಮಹನೀಯರ ಹೆಸರಿನಲ್ಲಿ ಇಂದು ದತ್ತಿನಿಧಿ ಪ್ರಶಸ್ತಿಗಳನ್ನು ಕೊಡಲಾಗುತ್ತಿದೆ. ಈ ಎಲ್ಲಾ ಮಹನೀಯರ ಕಾಲದಲ್ಲಿ ಪತ್ರಿಕೋದ್ಯಮ ಅತ್ಯಂತ ಸಣ್ಣ ಪ್ರಮಾಣದಲ್ಲಿತ್ತು. ಆದರೂ ಆ ಹೊತ್ತು ಬಹಳ ದೊಡ್ಡ ದೊಡ್ಡ ಬದಲಾವಣೆಗಳಿಗೆ ಕಾರಣವಾಗಿತ್ತು.

ಈಗ ಈ ಮಹನೀಯರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿರುವ ಈ ಹೊತ್ತಿನಲ್ಲಿ ಪತ್ರಿಕೋದ್ಯಮ ವಿಪರೀತ ದೊಡ್ಡದಾಗಿ ಬೆಳೆದಿದೆ. ಆದರೆ ಸಣ್ಣ ಪ್ರಮಾಣದ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ. ಇದು ಬಹಳ ಬೇಸರದ ಸಂಗತಿ.

ಈ ಮಹನೀಯರ ಹೆಸರುಗಳು ಕೇವಲ ದತ್ತಿನಿಧಿಗೆ ಮಾತ್ರ ಸೀಮಿತವಾಗಿ ಇವರ ನಿಷ್ಠುರ ವೃತ್ತಿಪರತೆ, ರಾಜಿ ರಹಿತ ಕಾಳಜಿಗಳು, ಮೌಲ್ಯಗಳು ನಾಪತ್ತೆಯಾಗಿರುವುದೂ ಬೇಸರ ತರಿಸುವುದಿಲ್ಲವೇ ಎಂದು ಪ್ರಶ್ನಿಸಿದರು.

ಹಿಂದೆಲ್ಲಾ ಪತ್ರಕರ್ತರು ರಾಜಕಾರಣಿಗಳನ್ನು ಬಹಳ ನಿಷ್ಠುರವಾಗಿ, ಬಹಳ ಜವಾಬ್ದಾರಿಯುತವಾಗಿ ಪ್ರಶ್ನಿಸುತ್ತಿದ್ದರು. ಇದರ ಪರಿಣಾಮ ರಾಜಕಾರಣಿಗಳು ಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದರು.

ಆದರೆ, ಈಗ ರಾಜಕಾರಣಿಗಳು ಪತ್ರಕರ್ತರ ಜವಾಬ್ದಾರಿಗಳನ್ನು ಬಹಳ ನಿಷ್ಠುರವಾಗಿ ಪ್ರಶ್ನಿಸುವ ಸ್ಥಿತಿ ಬಂದಿದೆ. ಏಕೆಂದರೆ, ಇಂದಿನ ಮಾಧ್ಯಮ ಕ್ಷೇತ್ರಕ್ಕೆ ಜವಾಬ್ದಾರಿಯುತ ಪತ್ರಿಕೋದ್ಯಮವೇ ಮರೆತು ಹೋದಂತಿದೆ. ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಪತ್ರಕರ್ತರು ಪತ್ರಿಕೋದ್ಯಮವನ್ನೇ ಬಹಳ ಗಂಭೀರವಾಗಿ ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂಕೋರ್ಟ್ ಗಳೂ ಹೆಚ್ಚೂ ಕಡಿಮೆ ಪ್ರತೀ ತಿಂಗಳು ಒಂದಲ್ಲಾ ಒಂದು ಪ್ರಕರಣದಲ್ಲಿ ಪತ್ರಿಕೋದ್ಯಮಕ್ಕೆ ಚಾಟಿ ಬೀಸುತ್ತಲೇ ಇದ್ದಾರೆ. ಇವೆಲ್ಲಾ ಏನನ್ನು ಸೂಚಿಸುತ್ತಿದೆ ಎಂದು ಪ್ರಶ್ನಿಸಿದರು.

ಅವರು ಹೀಗಂದ್ರು, ನೀವೇನು ಹೇಳ್ತೀರ..ಎನ್ನುವ "Easy chair journalism" ನಿಂದ ಪತ್ರಕರ್ತರು ಹೊರಗೆ ಬರದಿದ್ದರೆ ಯಾರ ಹೆಸರಿನಲ್ಲಿ ದತ್ತಿನಿಧಿ ಕೊಡಲಾಗುತ್ತಿದೆಯೋ ಅವರ ಮೌಲ್ಯಗಳು ಉಳಿಯಲು ಸಾಧ್ಯವಿಲ್ಲ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿ ಪತ್ರಿಕೋದ್ಯಮ ಅತ್ಯಂತ ಆರೋಗ್ಯಕರವಾಗಿತ್ತು. ಆದರೆ, ಇಂದು ಕೇವಲ ಹೇಳಿಕೆ ಆಧಾರಿತ ವೃತ್ತಿ ಮಾತ್ರ ವಿಜ್ರಂಭಿಸುತ್ತಿದೆ. ಅಧ್ಯಯನಶೀಲತೆ ಕಡಿಮೆ ಆಗುತ್ತಿರುವುದು ಇದಕ್ಕೆ ಕಾರಣ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಶಿವಾನಂದ ತಗಡೂರು ಅವರು ಅತ್ಯಂತ ಕ್ರಿಯಾಶೀಲರು. ಇದುವರೆಗೂ ನನ್ನ ಕೈಯಲ್ಲೇ ಸಾವಿರಕ್ಕೂ ಅಧಿಕ ಮಂದಿಗೆ ಪ್ರಶಸ್ತಿಗಳನ್ನು ಕೊಡಿಸಿದ್ದಾರೆ. ಪತ್ರಿಕಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಪ್ರಶಸ್ತಿ ಕೊಡಿಸುವ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದಾರೆ. ಪ್ರಶಸ್ತಿ ಪುರಸ್ಕೃತರು ವೃತ್ತಿ ಘನತೆಯನ್ನು ಎತ್ತಿ ಹಿಡಿಯುವ ದಿಕ್ಕಿನಲ್ಲಿ ಮತ್ತಷ್ಟು ಕ್ರಿಯಾಶೀಲರಾಗುತ್ತಾರೆ ಎನ್ನುವ ವಿಶ್ವಾಸ ನನಗಿದೆ‌ ಎಂದರು.

KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ವಿವಿ ಕುಲಪತಿ ಬಿ.ಕೆ.ರವಿ, ಹಿರಿಯ ಪತ್ರಕರ್ತ ಜಿ.ಎನ್.ಮೋಹನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?