Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮೂಲಭೂತ ಸೌಕರ್ಯಗಳನ್ನು ಪೂರೈಸುವಂತೆ ಶಾಸಕ ನಾರಾ ಭರತ್ ರೆಡ್ಡಿ ಸೂಚನೆ

ಬಳ್ಳಾರಿ, ಎ.08: ನಗರದ 10ನೇ ವಾರ್ಡ್ ಪ್ರದೇಶದ ವಿವಿಧೆಡೆ ಒಳ ಚರಂಡಿ, ಹೊರ ಚರಂಡಿ, ರಸ್ತೆ, ಕುಡಿಯುವ ಸಿಹಿ ನೀರು, ಬೋರ್'ವೆಲ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಮಹಾನಗರ ಪಾಲಿಕೆಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶಾಸಕ ನಾರಾ ಭರತ್ ರೆಡ್ಡಿ ಸೂಚನೆ ನೀಡಿದರು.

'ಸಲಾಂ ಬಳ್ಳಾರಿ ಅಭಿಯಾನ'ದ ಅಂಗವಾಗಿ ವಾರ್ಡ್ ಸಂಖ್ಯೆ 10ರ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಮರಿಸ್ವಾಮಿ ಮಠದಲ್ಲಿ ಪೂಜೆಯನ್ನು ಸಲ್ಲಿಸಿ, ವಾರ್ಡ್ ಭೇಟಿ ಆರಂಭಿಸಿದರು.

ಸಲಾಂ ಬಳ್ಳಾರಿ ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ, ಈಗಾಗಲೇ ಭೇಟಿ ನೀಡಲಾಗಿರುವ ವಾರ್ಡ್ ಸಂಖ್ಯೆ 06 ಮತ್ತು 13ರಲ್ಲಿನ ಸಮಸ್ಯೆಗಳನ್ನು ಆಧರಿಸಿ ಅಂದಾಜು 3 ಕೋಟಿ 50 ಲಕ್ಷ ರೂ.ಗಳ ಅನುದಾನದಡಿ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧ ಆಗಿದ್ದು, ಶೀಘ್ರ ಭೂಮಿ ಪೂಜೆ ನೆರವೇರಿಸಲಾಗುವುದು, ಅದೇ ರೀತಿ ವಾರ್ಡ್ ಸಂಖ್ಯೆ 10ರಲ್ಲಿರುವ ಸಮಸ್ಯೆಗಳನ್ನು ಆಧರಿಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.

ಇಡೀ ದಿನ ವಾರ್ಡಿನಾದ್ಯಂತ ಸಂಚಾರ ನಡೆಸಿದ ಶಾಸಕ ನಾರಾ ಭರತ್ ರೆಡ್ಡಿ, ವಾರ್ಡಿನ ಮರಿಸ್ವಾಮಿ ಮಠದ ಸುತ್ತಮುತ್ತ ಪ್ರದೇಶ, ಪಾತಕಂದಕಂ ಬೀದಿ, ರಾಣಿ ತೋಟ, ಚಾಳೇಶ್ವರ ದೇವಸ್ಥಾನ ಪ್ರದೇಶ, ಇಲಾಹಿ ದಾದ್ ಮೊಹಲ್ಲಾ, ಟಿಜಿಬಿ ಮಿಲ್ ಪ್ರದೇಶ, ತುಂಗಭದ್ರಾ ಲೇನ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು.

ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿ ಅಹವಾಲು ಸ್ವೀಕರಿಸಿದರು, ಆರೋಗ್ಯ ತಪಾಸಣೆಗೆ ಆರ್ಥಿಕ ನೆರವು ಕೋರಿದ ಹಲವು ಜನರಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದರು.

ವಾರ್ಡ್ ಭೇಟಿಯ ಆರಂಭದಲ್ಲಿ ಮರಿಸ್ವಾಮಿ ಮಠದ ಆವರಣದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಶಾಸಕ ನಾರಾ ಭರತ್ ರೆಡ್ಡಿಯವರನ್ನು ಸನ್ಮಾನಿಸಿ, ವಾರ್ಡಿಗೆ ಸ್ವಾಗತಿಸಿದರು.

ಪಾತಕಂದಕಂ ಬೀದಿಯ ಇಲಾಹಿ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಶಾಸಕರನ್ನು ಸನ್ಮಾನಿಸಿದರು.

ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ತೆಂಗಿನಕಾಯಿ ರಾಜಣ್ಣ, ತೆಂಗಿನಕಾಯಿ ಬಸವರಾಜ, ಮಡಿವಾಳಪ್ಪ, ತಿಮ್ಮಪ್ಪ, ಪೃಥ್ವಿರಾಜ, ಹರೀಶ್, ಎಂ.ಡಿ.ತೌಸಿಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಸೇನ್ ಪೀರಾಂ, ವೆಂಕಟೇಶ ಹೆಗಡೆ, ರಾಕೇಶ್ ವರ್ಮಾ, ಚಾನಾಳ್ ಶೇಖರ್, ರಜಾಕ್ ಮೊದಲಾದವರು ಹಾಜರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?