Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಡ ಜನರ ಸೇವೆ ಮಾಡಿದವರಿಗೆ ದೇವರ ಆಶೀರ್ವಾದ ಸಿಗುತ್ತದೆ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಫೆ.27: ಬಡ ಜನರಿಗೆ ಸೇವೆ ಮಾಡಿದರೆ ಅದೇ ಕ್ಷಣ ನಮಗೆ ದೇವರ ಆಶೀರ್ವಾದ ಸಿಗುತ್ತದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಅವರು ನಗರದ 2ನೇ ವಾರ್ಡಿನ ಪಾಪಯ್ಯ ಸಭಾಂಗಣ ಬಳಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ವೈದೇಹಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ನಾರಾ ಭರತ್ ರೆಡ್ಡಿ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.

ವೈದ್ಯಕೀಯ ಚಿಕಿತ್ಸೆ ಬಹಳ ದುಬಾರಿ ಆಗಿರುವ ಈ ದಿನಗಳಲ್ಲಿ ಇಂತಹ ಆರೋಗ್ಯ ಶಿಬಿರ ಏರ್ಪಡಿಸಿರುವುದು ಅಭಿನಂದನಾರ್ಹ ಎಂದರು.

ವೈದೇಹಿ ಆಸ್ಪತ್ರೆಯ ಸಂಸ್ಥಾಪಕರು ನಮ್ಮ ಕುಟುಂಬದ ಸ್ನೇಹಿತರು, ಈ ಆಸ್ಪತ್ರೆಯ ಸೇವೆಯನ್ನು ನಾವು ಶ್ಲಾಘಿಸಲೇಬೇಕು ಎಂದು ಹೇಳಿದ ಅವರು ಪ್ರಾಥಮಿಕ ತನಿಖೆಯಲ್ಲಿ ಎಲ್ಲರೂ ಗುಣಮುಖರು ಎಂಬ ವರದಿ ಬರಲಿ, ಯಾರಿಗೂ ಕೂಡ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವ ಸ್ಥಿತಿ ಬಾರದಿರಲಿ ಎಂದೇ ದೇವರಲ್ಲಿ ನಾನು ಕೋರಿಕೊಳ್ಳುವೆ, ಆದರೆ ವಿಧಿ ಬರಹ ತಪ್ಪಿಸಲಾಗದು ಎಂದರು.

ಈ ಆರೋಗ್ಯ ಶಿಬಿರ ಆಯೋಜಿಸಿದವರ ಕಾಳಜಿಯನ್ನು ನೋಡಿ ನಾನೂ ಕೂಡ ಇಂತಹ ಆರೋಗ್ಯ ಶಿಬಿರಗಳನ್ನು ಬಳ್ಳಾರಿ ನಗರದ ಎಲ್ಲ ವಾರ್ಡ್'ಗಳಲ್ಲಿ ಏರ್ಪಡಿಸುವೆ ಎಂದು ಹೇಳಿದರು.

ಸಂಘಟಕ ಅಬ್ದುಲ್ ರಜಾಕ್ ಮಾತನಾಡಿ ಬಳ್ಳಾರಿ ನಗರದ ಯಾವುದೇ ವಾರ್ಡಿನಲ್ಲಿ ಅನಾರೋಗ್ಯ ಪೀಡಿತರಾಗಿರುವ ಬಡವರ ನೆರವಿಗೆ ನಿಲ್ಲುವ ಯೋಜನೆ ಇದೆ, ಉಚಿತವಾಗಿ ಚಿಕಿತ್ಸೆ ಕೊಡಿಸಲಾಗುವುದು, ಈ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡು ಶಸ್ತ್ರ ಚಿಕಿತ್ಸೆಯ ಅಗತ್ಯ ಕಂಡು ಬಂದಲ್ಲಿ, ಅಂಥವರಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಿಸಲಾಗುವುದು, ಶಾಸಕ ನಾರಾ ಭರತ್ ರೆಡ್ಡಿಯವರ ಬೆಂಬಲದೊಂದಿಗೆ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದರು.

ಜಿಲ್ಲಾ ಸರ್ಜನ್ ಡಾ.ಬಸರೆಡ್ಡಿ, ಪಾಪಯ್ಯ, ಶಮೀಮ್ ಜೋಹ್ರಾ, ಲತಾ ಚಾನಾಳ್ ಶೇಖರ್, ವಿಜಯಲಕ್ಷ್ಮೀ, ವೈದೇಹಿ ಆಸ್ಪತ್ರೆಯ ಪ್ರತಿನಿಧಿಗಳು, ಪತ್ರಕರ್ತ ಯಾಳ್ಪಿ ವಲಿಬಾಷ, ಯಶೋಧಾ ಮತ್ತಿತರರು ಹಾಜರಿದ್ದರು.

ವೈದೇಹಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಲ್ಲಿಕಾರ್ಜುನ ಅಚ್ಚೊಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?