Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸೆ.13 ರಂದು ರಾಷ್ಟಿçÃಯ ಲೋಕ್ ಅದಾಲತ್ ಸಾರ್ವಜನಿಕರು ಬಾಕಿ ಇರುವ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಿ: ನ್ಯಾಯಾಧೀಶ ಪ್ರಮೋದ್ ಬಿ.ಜಿ ಕರೆ

ಬಳ್ಳಾರಿ,ಸೆ.06 : ರಾಷ್ಟç ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದೇ ಸೆ.13 ರಂದು ಈ ವರ್ಷದ ಮೂರನೇ ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಮೋದ್ ಬಿ.ಜಿ ಅವರು ಕರೆ ನೀಡಿದರು.

ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇ ಮಹಡಿಯ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಉಭಯ ಕಕ್ಷಿದಾರರ ಪರಸ್ಪರ ಹೊಂದಾಣಿಕೆಗಾಗಿ ಮತ್ತು ತ್ವರಿತ ನ್ಯಾಯಕ್ಕಾಗಿ ರಾಷ್ಟಿçÃಯ ಲೋಕ್ ಅದಾಲತ್ ಸಹಕಾರಿ. ಅಖಂಡ (ಬಳ್ಳಾರಿ ಮತ್ತು ವಿಜಯನಗರ) ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಅಂದು ಬಗೆಹರಿಸಬಹುದಾದ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಯಾಲಯದ ಶುಲ್ಕವನ್ನು ಮರು ಪಾವತಿಸಲಾಗುತ್ತದೆ ಎಂದರು.

ವೈವಾಹಿಕ, ಕೌಟುಂಬಿಕ, ಮೋಟಾರು ಅಪಘಾತ, ಚೆಕ್ ಅಮಾನ್ಯದ, ವಾಣಿಜ್ಯ, ಸೇವಾ ಪ್ರಕರಣಗಳು ಮತ್ತು ರಾಜೀಯಾಗಬಲ್ಲ, ಗ್ರಾಹಕ ವ್ಯಾಜ್ಯ, ಡಿಆರ್ ಟಿ, ಪಾಲುದಾರಿಕೆ, ಸಾರಿಗೆ ಹಾಗೂ ಇತರೇ ಸಿವಿಲ್ ಪ್ರಕರಣಗಳು ಸೇರಿದಂತೆ ಎಲ್ಲಾ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಲೋಕ್ ಅದಾಲತ್ ನಲ್ಲಿ ಜನರಿಗೆ ಸುಲಭವಾಗಿ, ವೇಗವಾಗಿ ಮತ್ತು ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಲಾಗುತ್ತದೆ. ಇದರಿಂದ ನ್ಯಾಯಾಲದ ಮೇಲಿನ ಹೊರೆ ಇಳಿಕೆಯಾಗಲಿದೆ. ನ್ಯಾಯಾಧೀಶರು ಹೆಚ್ಚು ಸಂಕೀರ್ಣವಾದ ಪ್ರಕರಣಗಳ ಮೇಲೆ ಗಮನ ಕೇಂದ್ರೀಕರಿಸಲು ಸಹಾಯವಾಗುತ್ತದೆ ಎಂದು ಹೇಳಿದರು.

*‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ - 90 ದಿನಗಳ ವಿಶೇಷ ಅಭಿಯಾನ:
ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳ ವಿಲೇವಾರಿಗಾಗಿ ಈಗಾಗಲೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಳೆದ ಜುಲೈ 1 ರಿಂದ ಆರಂಭಗೊAಡಿರುವ “ರಾಷ್ಟçಕ್ಕಾಗಿ ಮಧ್ಯಸ್ಥಿಕೆ - 90 ದಿನಗಳ ವಿಶೇಷ ಅಭಿಯಾನ” ಬರುವ ಅಕ್ಟೋಬರ್ 07 ರಂದು ಮುಕ್ತಾಯಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯ ಕಕ್ಷಿದಾರರು ಇದರ ಲಾಭ ಪಡೆಯುವ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಸಹ ಅವರು ಹೇಳಿದರು.
ಇದು ರಾಜ್ಯವ್ಯಾಪಿ ನಡೆಯುತ್ತಿರುವ ಅಭಿಯಾನವಾಗಿದ್ದು, ತರಬೇತಿ ಪಡೆದ ನುರಿತ ಹಿರಿಯ ವಕೀಲರು ಮಧ್ಯಸ್ಥಿಕೆ ವಹಿಸುತ್ತಾರೆ. ಜಿಲ್ಲೆಯಲ್ಲೂ ತರಬೇತಿ ಪಡೆದ ವಕೀಲರಿಂದ ಯಶಸ್ವಿಯಾಗಿ ನಡೆಯುತ್ತಿದೆ. ಇಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ನ್ಯಾಯಾಲಯಗಳ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ರಾಜೀ ಸಂಧಾನ ಮಾಡುವ ಮೂಲಕ ಬಗೆಹರಿಸಲಾಗುತ್ತದೆ. ಇದನ್ನು ಗೌಪ್ಯವಾಗಿಯೂ ಸಹ ಇಡಲಾಗುತ್ತದೆ. ಇಂತಹ ವಿಶೇಷ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಅವರು ಹೇಳಿದರು.

*ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ:
ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಸಂಚಾರಿ ಇ-ಚಾನೆಲ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿದ್ದು, ಸೆ.12 ರ ವರೆಗೆ ಈ ರಿಯಾಯಿತಿ ಸೌಲಭ್ಯವು ಇರಲಿದೆ. ಸೆಪ್ಟೆಂಬರ್ 13 ರಂದು ನಡೆಯಲಿರುವ ರಾಷ್ಟಿçÃಯ ಲೋಕ್ ಅದಾಲತ್ ಪ್ರಯುಕ್ತ ಈ ರಿಯಾಯಿತಿ ನೀಡಲಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮತ್ತು ದುರ್ಬಲ ವರ್ಗದ ಜನರಿಗೆ ಕಾನೂನಿನ ನೆರವು ನೀಡಲು ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ಮಾನವ ಕಳ್ಳ ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆ ಸಂತ್ರಸ್ತರಿಗೆ, ಅಸಂಘಟಿತ ವಲಯ ಕಾರ್ಮಿಕರಿಗೆ, ಮಾನಸಿಕ ಅಸ್ವಸ್ಥತೆ ಮತ್ತು ಬುದ್ಧಿ ಮಾಂದ್ಯತೆ ಇರುವ ವ್ಯಕ್ತಿಗಳಿಗೆ ಕಾನೂನು ಸೇವೆಗಳು, ಬುಡಕಟ್ಟು ಹಕ್ಕುಗಳ ರಕ್ಷಣೆ ಮತ್ತು ಜಾರಿ, ಬಡತನ ನಿವಾರಣಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಆಸಿಡ್ ದಾಳಿಯ ಸಂತ್ರಸ್ತರಿಗೆ ಕಾನೂನು ಸೇವೆಗಳ ಒದಗಿಸುವ ಯೋಜನೆಗಳನ್ನು ಜಾರಿಗೊಳಿಸಿರುವುದಲ್ಲದೇ, ಅವುಗಳನ್ನು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಗುರಿಯನ್ನು ಸಹ ಹೊಂದಲಾಗಿದೆ ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?