Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಲೋಕಸಭೆ ಸಾರ್ವತ್ರಿಕ ಚುನಾವಣೆ : ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿ 24 ಚೆಕ್‍ಪೋಸ್ಟ್ ಭದ್ರತೆ

ಬಳ್ಳಾರಿ,ಮಾ.22 :
ಲೋಕಸಭೆ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣೆಯ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಜಿಲ್ಲೆಯ 5 ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 24 ಚೆಕ್‍ಪೋಸ್ಟ್ ಸ್ಥಾಪಿಸಿ, ನೇರ ದೃಶ್ಯಾವಳಿ ಸೆರೆಹಿಡಿಯಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಮತದಾರರಿಗೆ ಆಮಿಷ ಒಡ್ಡಲು ಮತ್ತು ಅನಧಿಕೃತವಾಗಿ ವಸ್ತುಗಳನ್ನು ನೀಡುವುದು. ದಾಖಲೆಯಿಲ್ಲದ ಹಣವನ್ನು ಸಾಗಾಣೆ ಮಾಡುವುದು ಸೇರಿದಂತೆ ಆಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೇ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಹದ್ದಿನ ಕಣ್ಣಿಡಲಾಗಿದೆ. ಇದರ ಭಾಗವಾಗಿ ಬಳ್ಳಾರಿ ಜಿಲ್ಲೆ ಅಂತರ್‍ರಾಜ್ಯ ಗಡಿ ಮತ್ತು ಅಂತರ್‍ಜಿಲ್ಲಾ ಗಡಿಯನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ತೀವ್ರ ಬಿಗಿಯಾದ ಕ್ರಮವನ್ನು ಕೈಗೊಂಡಿದೆ ಅಲ್ಲದೇ, ಎಚ್ಚರಿಕೆಯನ್ನು ವಹಿಸಲಾಗಿದೆ.
ಚುನಾವಣೆ ಅಕ್ರಮಗಳ ಮೇಲೆ ಕಣ್ಗಾವಲು ಇಡಲು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ಅಲ್ಲಿ ವಿವಿಧ ತಂಡಗಳನ್ನು ನೇಮಿಸಲಾಗಿದೆ. ಇಲ್ಲಿನ ಕಾರ್ಯಚಟುವಟಿಕೆಗಳ ನೇರ ದೃಶ್ಯಾವಳಿಗಳನ್ನು ಸೆರೆಹಿಡಿಯಲು ಸಿಸಿ ಕ್ಯಾಮೆರಾ ಆಳವಡಿಸಿ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ವೀಕ್ಷಣೆ ಮಾಡುವುದು ಆಪ್ ಮೂಲಕವೂ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು, ಎಂಸಿಸಿ ತಂಡದ ಮುಖ್ಯಸ್ಥರು ವೀಕ್ಷಣೆ ಮಾಡಲಿದ್ದಾರೆ.
ಜಿಲ್ಲೆಯಲ್ಲಿ 7, ಅಂತರ್‍ಜಿಲ್ಲೆ ಗಡಿಯಲ್ಲಿ 4 ಮತ್ತು ಅಂತರರಾಜ್ಯ ಆಂಧ್ರಪ್ರದೇಶ ಗಡಿಭಾಗದಲ್ಲಿ 13 ಸೇರಿ 24 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
5 ಕ್ಷೇತ್ರದಲ್ಲಿ 24 ಚೆಕ್‍ಪೋಸ್ಟ್ ಸ್ಥಾಪನೆ:
ಜಿಲ್ಲೆಯಾದ್ಯಂತ ಒಟ್ಟು 24 ಚೆಕ್‍ಪೆÇೀಸ್ಟ್ ಸ್ಥಾಪಿಸಲಾಗಿದ್ದು, ಪ್ರತಿ ಚೆಕ್‍ಪೆÇೀಸ್ಟ್‍ನಲ್ಲಿ 3 ಎಸ್‍ಎಸ್‍ಟಿ ಅಧಿಕಾರಿಗಳು ಹಾಗೂ ಪೆÇಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಮತಕ್ಷೇತ್ರಕ್ಕೆ ಫ್ಲೈಯಿಂಗ್ ಸ್ಕ್ವ್ಯಾಡ್ ಮತ್ತು ವಿಡಿಯೋ ಕಣ್ಗಾವಲು ತಂಡಗಳನ್ನು ನೇಮಕ ಮಾಡಲಾಗಿದೆ.
ಕ್ಷೇತ್ರವಾರು ಚೆಕ್‍ಪೋಸ್ಟ್ ಸ್ಥಾಪನೆ:
91-ಕಂಪ್ಲಿ:
ಕಂಪ್ಲಿ ಕ್ಷೇತ್ರದಲ್ಲಿ 3 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಸಿಂಧಗೇರಿ, ಅಂತರ್‍ಜಿಲ್ಲೆ ಕೊಪ್ಪಳ ಗಡಿಭಾಗದಲ್ಲಿ ಕಂಪ್ಲಿ ಸೇತುವೆ ಬಳಿ ಮತ್ತು ವಿಜಯನಗರ ಜಿಲ್ಲೆ ಗಡಿಭಾಗದ ದೇವಲಾಪುರ - ಉಪ್ಪಾರಹಳ್ಳಿ ವೃತ್ತದಲ್ಲಿ ಸ್ಥಾಪನೆ ಮಾಡಲಾಗಿದೆ.
92-ಸಿರುಗುಪ್ಪ:
ಸಿರುಗುಪ್ಪ ಕ್ಷೇತ್ರದಲ್ಲಿ 5 ಚೆಕ್‍ಪೋಸ್ಟ್‍ಗಳನ್ನು ಆರಂಭಿಸಲಾಗಿದ್ದು, ಅಂತರ್‍ಜಿಲ್ಲೆ ರಾಯಚೂರು ಗಡಿಭಾಗದ ಇಬ್ರಾಹಿಂಪುರ-ಇಬ್ರಾಹಿಂಪುರ ಗ್ರಾಮ, ಅಂತರ್‍ರಾಜ್ಯ ಗಡಿಭಾಗದ ಇಟ್ಟಿಗೆಹಾಳ್, ವಟ್ಟುಮುರುವಾಣಿ, ಮಾಟಸೂಗೂರು ಮತ್ತು ಕೆ.ಬೆಳಗಲ್ ಗ್ರಾಮಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ.
93-ಬಳ್ಳಾರಿ ಗ್ರಾಮೀಣ ಕ್ಷೇತ್ರ:
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ಅಂತರ್‍ರಾಜ್ಯ ಆಂಧ್ರಪ್ರದೇಶ ಗಡಿಭಾಗದ ಹಲಕುಂದಿ(ಬೆಂಗಳೂರು ರಸ್ತೆ), ಎತ್ತಿನ ಬೂದಿಹಾಳ್(ಬೊಮ್ಮನಹಾಳ್ ರಸ್ತೆ), ರೂಪನಗುಡಿ ರಸ್ತೆ, ಜೋಳದರಾಶಿ ಗ್ರಾಮ(ಗುಂತಕಲ್ ರಸ್ತೆ), ಕಾರೇಕಲ್ಲು ಗ್ರಾಮ, ಸಿಂಧವಾಳ ಗ್ರಾಮ ಮತ್ತು ಆಂಧ್ರ ಗಡಿಭಾಗದ ಬೊಮ್ಮನಹಾಳ್ ಗ್ರಾಮ ಒಳಗೊಂಡಂತೆ 7 ಕಡೆ ಚೆಕ್ ಪೆÇೀಸ್ಟ್‍ಗಳನ್ನು ಸ್ಥಾಪಿಸಲಾಗಿದೆ.
94-ಬಳ್ಳಾರಿ ನಗರ ಕ್ಷೇತ್ರ:
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಕಣೆಕಲ್ ರಸ್ತೆಯ ಆಂಧ್ರಾಳ್ ಬೈಪಾಸ್ ಹತ್ತಿರ, ಮೋಕಾ ರಸ್ತೆಯ ಕೆಇಬಿ ವೃತ್ತ ಹತ್ತಿರ, ತಾಳೂರು ರಸ್ತೆಯ ಮಹಾನಂದಿ ಕೊಟ್ಟಂ ಹತ್ತಿರ, ರೂಪನಗುಡಿ ರಸ್ತೆಯ ದುರ್ಗ ವೃತ್ತದ ಹತ್ತಿರ, ಸಿರುಗುಪ್ಪ ರಸ್ತೆಯ ಕ್ಲಾಸಿಕ್ ಫಂಕ್ಷನ್ ಹಾಲ್ ಹತ್ತಿರ, ಅನಂತಪುರ ರಸ್ತೆಯ ಬೈಪಾಸ್ ವೃತ್ತದ ಹತ್ತಿರ ಸೇರಿ 5 ಸ್ಥಾಪಿಸಲಾಗಿದೆ.
95-ಸಂಡೂರು ಕ್ಷೇತ್ರ:
ಸಂಡೂರು ಕ್ಷೇತ್ರ ವ್ಯಾಪ್ತಿಯಲ್ಲಿ ಜಿಂದಾಲ್‍ನ ವಿದ್ಯಾನಗರ ವಿಮಾನ ನಿಲ್ದಾಣ ಹತ್ತಿರ, ಅಂತರ್‍ಜಿಲ್ಲೆಯಾದ ಚಿತ್ರದುರ್ಗ ಗಡಿಭಾಗದ ಮೊಟಲಕುಂಟ ಹತ್ತಿರ ಮತ್ತು ಅಂತರ್‍ರಾಜ್ಯ ಆಂಧ್ರಪ್ರದೇಶ ಗಡಿಭಾಗದ ಜಿ.ಬಸಾಪುರ ಮತ್ತು ಎಂ.ಗಂಗಲಾಪುರ ಗ್ರಾಮಗಳಲ್ಲಿ 4 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಕಂಟ್ರೋಲ್ ರೂಂ ಆರಂಭ :
ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವ ಸಂಬಂಧ ಸಾರ್ವಜನಿಕರ ದೂರು-ದುಮ್ಮಾನಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.
ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ 08392-277100 ಮತ್ತು 1950 ಕರೆ ಮಾಡಿ ತಿಳಿಸಿಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
---------

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?