Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ರಾಮ

ಅಯೋಧ್ಯೆ,ಜ,೨೨: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ಈ ಮಹತ್ವದ ಸಮಾರಂಭವನ್ನು ಜಾಗತೀಕರಣಗೊಳಿಸುವ ನಿಟ್ಟಿನಲ್ಲಿ ವಿವಿಧ ೫೦ ದೇಶಗಳನ್ನು ಪ್ರತಿನಿಧಿಸುವ ೯೨ ವಿಶೇಷ ಆಹ್ವಾನಿತರು ಈ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದಾರೆ.
ಮಧ್ಯಾಹ್ನ ೧೨.೨೦ ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು ೧೨, ೪೫ರವರೆಗೆ ನಡೆದಿದೆ. ಸುಮಾರು ೨ ಗಂಟೆಗಳ ಕಾಲ ೨೫ ರಾಜ್ಯದಗಳ ವಿವಿಧ ಸಂಗೀತ ವಾದ್ಯಗಳ ಮಂಗಲ ಧ್ವನಿ ಕಾರ್ಯಕ್ರಮವೂ ನೆರವೇರಿದೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಹಿನ್ನೆಲೆ ಅಯೋಧ್ಯೆಯ ಇಡೀ ನಗರವನ್ನು ೨೫೦೦ ಕ್ವಿಂಟಾಲ್‌ಗೂ ಹೆಚ್ಚು ಹೂವಿನಿಂದ ಅಲಂಕರಿಸಲಾಗಿದ್ದು, ಪ್ರಾಣ ಪ್ರತಿಷ್ಠೆಯ ನಂತರ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಲಾಗುತ್ತದೆ.ಆದರೆ ಜನಸಂದಣಿ ಕಡಿಮೆಯಾದ ನಂತರ ಜನವರಿ ೨೭ರ ನಂತರವೇ ದೇವಾಲಯಕ್ಕೆ ಭೇಟಿ ನೀಡುವಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಭಕ್ತರಲ್ಲಿ ವಿನಂತಿ ಮಾಡಿದೆ.
ಸಮಾರಂಭದಲ್ಲಿ ಎನ್‌ಎಸ್‌ಜಿ ಸ್ನೈಪರ್‌ಗಳ ಎರಡು ತಂಡಗಳು, ಆ್ಯಂಟಿ ಡ್ರೋನ್ ತಂತ್ರಜ್ಞಾನ ಹೊಂದಿದ ಎಟಿಎಸ್ ಕಮಾಂಡೋಗಳ ಆರು ತಂಡಗಳು ಮತ್ತು ಯುಪಿ ಮತ್ತು ಅರೆಸೇನಾ ಪಡೆಗಳ ೧೫,೦೦೦ ಪೊಲೀಸ್ ಸಿಬ್ಬಂದಿಯನ್ನು ಅಯೋಧ್ಯೆಯ ಭದ್ರತೆಗಾಗಿ ನಿಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಸರಸಂಘ ಚಾಲಕ ಮೋಹನ್ ಭಾಗವತ್, ರಾಜ್ಯಪಾಲೆ ಆನಂದಿ ಬೆನ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಪಾಲ್ಗೊಂಡಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?