Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ನೈತಿಕತೆ ಪಾಲನೆ ಪತ್ರಕರ್ತರ ಜವಾಬ್ದಾರಿ: ಸಚಿವ ಮಲ್ಲಿಕಾರ್ಜುನ್

ದಾವಣಗೆರೆ (ಫೆ.04): ಸಾಮಾಜಿಕ ಜಾಲತಾಣದಲ್ಲಿ ನೈತಿಕತೆ ಉಳಿಸಿಕೊಂಡು ಹೋಗುವುದು ಪತ್ರಕರ್ತರ ಜವಾಬ್ದಾರಿ. ಸುಳ್ಳು ಸುದ್ದಿ ಹರಡಿರುವ ಸಾಕಷ್ಟು ಉದಾಹರಣೆ ಇದೆ. ಇದರ ಬಗ್ಗೆ ಪತ್ರಕರ್ತರು ಎಚ್ಚರಿಕೆ ವಹಿಸಬೇಕು ಎಂದು ಗಣಿ, ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಲಹೆ ನೀಡಿದರು. ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದ ಹರ್ಡೆಕರ್ ಮಂಜಪ್ಪನವರ ವೇದಿಕೆಯಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆಯುತ್ತಿರುವ ರಾಜ್ಯಮಟ್ಟದ 38ನೇ ಸಮ್ಮೇಳನದಲ್ಲಿ ಮಾತನಾಡಿ ಭಾಷೆ, ಜ್ಞಾನ, ಸಾಮಾಜಿಕ ಕಾಳಜಿ, ಧಾರ್ಮಿಕ, ಇತಿಹಾಸ, ಪರಂಪರೆ ಸಾಂಸ್ಕೃತಿಕತೆ ಮೈಗೂಡಿಸಿಕೊಳ್ಳಬೇಕು.

ಪತ್ರಕರ್ತರು, ಮಾಧ್ಯಮಗಳು ಸಾರ್ವಜನಿಕರಿಗೆ ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ದುರುಪಯೋಗ ಆಗದಂತೆ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಬೀದರ್, ಕಲ್ಬುರ್ಗಿಯಿಂದ ಚಾಮರಾಜನಗರದವರೆಗೆ ಎಲ್ಲ ಪತ್ರಕರ್ತರು ಬಂದಿರುವುದು ಸಂತೋಷ. ಸುದ್ದಿಮನೆ ಧಾವಂತದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ, ಅನೇಕರಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಹಲವರ ಕಳೆದುಕೊಂಡಿದ್ದೇವೆ. 108ಕ್ಕೂ ಹೆಚ್ಚು ಪತ್ರಕರ್ತರು ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದರು. ಆ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರು ತಾಯ್ತನದ ಗುಣದಿಂದ ಸಾಕಷ್ಟು ಸಹಾಯಹಸ್ತ ಚಾಚಿದರು.

ಪ್ರಭಾಕರ್ ಅವರು ಪತ್ರಕರ್ತರ ಪರವಾಗಿ ನಿಂತು ನಮಗೆ ಸಿಎಂ ಅವರನ್ನು ಭೇಟಿ ಮಾಡಿಸಿ, ಸಹಾಯ ಮಾಡಿದರು ಎಂದರು. ಸುದ್ದಿಮನೆಯಲ್ಲಿ ಕೆಲಸ ಮಾಡುವವರಿಗೆ ಸಾಕಷ್ಟು ಸವಾಲುಗಳು ಬರುತ್ತಿವೆ. ಸದುದ್ದೇಶದಿಂದ ಪವಿತ್ರ ವ್ರತದಂತೆ ಭಾವಿಸುವವರು ಈ ರಂಗಕ್ಕೆ ಬರಬೇಕೆ ಹೊರತು, ದಂಧೆಯೆಂದು ಭಾವಿಸಿಕೊಂಡು ಬರಬಾರದು, ನೈಜ ಪತ್ರಕರ್ತರ ಉಳಿಸಿಕೊಳ್ಳುವ ಸವಾಲು ನಮ್ಮ ಮುಂದಿದೆ. ಈ ದೃಷ್ಟಿಯಲ್ಲಿ ಇದು ಮಹತ್ವದ ಸಮ್ಮೇಳನ ಎಂದು ಹೇಳಿದರು. ಬಡಪತ್ರಕರ್ತರು ಅನಾರೋಗ್ಯ ಸಮಸ್ಯೆ ಉಂಟಾದಾಗ ಅವರಿಗೆ ಆಸ್ಪತ್ರೆಗೆ ಹಣ ನೀಡಲು ಪರದಾಡುತ್ತಿದ್ದಾರೆ.

ಹಾಗಾಗಿ, ಅವರಿಗೆ ಆರೋಗ್ಯ ಸಂಜೀವಿನಿಯಂತಹ ಸೌಲಭ್ಯ ನೀಡಬೇಕು. ಜಾಹೀರಾತು ಕಾರಣಕ್ಕೆ ಪ್ರಾದೇಶಿಕ ಮತ್ತು ಜಿಲ್ಲಾಮಟ್ಟದ ಪತ್ರಿಕೆಗಳು ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಅವರಿಗೆ ಜಾಹೀರಾತು ನೀಡಬೇಕು. ಎಸ್ಸೆಸ್ಸ್ ಅವರು ₹5 ಕೋಟಿ ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟಿದ್ದು ಪ್ರಶಂಸನೀಯ ಎಂದರು. ಪತ್ರಿಕಾ ವಿತರಕರಿಗೆ ಅನುಕೂಲ ಮಾಡಿಕೊಟ್ಟಿರುವುದು ಸಿದ್ಧರಾಮಯ್ಯ. ಪತ್ರಿಕಾ ವಿತರಕರಿಗೆ ಅಪಘಾತವಾದಾಗ ಕನಿಷ್ಠ ₹1 ಲಕ್ಷ ಹಣ ಸಿಗುತ್ತಿದೆ. ಸಾವು ಸಂಭವಿಸಿದರೆ ₹2 ಲಕ್ಷ ಹಣ ಸಿಗುತ್ತದೆ. ಬೆಂಗಳೂರಿನಲ್ಲಿ ಪತ್ರಕರ್ತರ ಭವನ ನಿರ್ಮಿಸಿಕೊಡಬೇಕು ಎಂದು ಹೇಳಿದರು.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?