Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮಿಲ್ಲರ್ ಪೇಟೆಯ ಸಮುದಾಯ ಭವನ ನವೀಕರಣಕ್ಕೆ ಶಾಸಕ ನಾರಾ ಭರತ್ ರೆಡ್ಡಿ ಸೂಚನೆ

ಬಳ್ಳಾರಿ, ಮಾ.27: ಮಿಲ್ಲರ್ ಪೇಟೆಯ ಸಮುದಾಯ ಭವನವನ್ನು ನವೀಕರಣ ಮಾಡಿ, ಕಪೌಂಡ್ ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ನಾರಾ ಭರತ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ಸಲಾಂ ಬಳ್ಳಾರಿ ಅಭಿಯಾನದ ಅಂಗವಾಗಿ ನಗರದ 13ನೇ ವಾರ್ಡಿನ ವಿವಿಧ ಬಡಾವಣೆಗಳಲ್ಲಿ ಗುರುವಾರ ಸಂಚಾರ ನಡೆಸಿದರು.

ಇದಕ್ಕೂ ಮುನ್ನ ವಾರ್ಡಿನ ಕಾಂಗ್ರೆಸ್ ಮುಖಂಡರಾದ ರಾಕೇಶ್, ಶಿವಕುಮಾರ್, ರಘು ಅವರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪಠ್ಯ ಸಾಮಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ವಾರ್ಡಿನ ಸರ್ಕಾರಿ ಪ್ರಾಥಮಿಕ ಶಾಲೆಯ 170 ವಿದ್ಯಾರ್ಥಿಗಳಿಗೆ ನೋಟಬುಕ್ ಹಾಗೂ ಕಂಪಾಸ್ ಬಾಕ್ಸ್ ವಿತರಿಸಲಾಯಿತು.

ವಾರ್ಡಿನ ಮಿಲ್ಲರ್ ಪೇಟೆ, ಗಣೇಶ್ ಗುಡಿ, ಕೊರಟಗೇರಿ, ಗಡ್ಡೆ ಕೆಳಗೆ, ಅಬ್ದುಲ್ ಅಜೀಜ್ ಬೀದಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಸಂಚರಿಸಿ, ಜನರ ಸಮಸ್ಯೆಗಳನ್ನು ಆಲಿಸಿದರು.

ಮಹಾನಗರ ಪಾಲಿಕೆಯ ಅಧಿಕಾರಿಗಳು, ಜೆಸ್ಕಾಂ, ಪೊಲೀಸ್, ಸಂಚಾರಿ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಭಿಯಂತರರು, ಅಧಿಕಾರಿಗಳು ಶಾಸಕ ನಾರಾ ಭರತ್ ರೆಡ್ಡಿಯವರ ಜೊತೆಗೆ ಸಂಚರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.

ಮನೆಗಳ ಹಕ್ಕು ಪತ್ರ, ರಸ್ತೆ, ಒಳ ಚರಂಡಿ, ಹೊರ ಚರಂಡಿ, ಬೀದಿ ದೀಪ, ಕುಡಿಯುವ ನೀರು, ನೈರ್ಮಲ್ಯ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿ ಜನರು ಶಾಸಕರಿಗೆ ಮನವಿ ಮಾಡಿದರು.

ಮನೆ ಮನೆ ತೆರಳಿ ಜನರ ಸಮಸ್ಯೆ ಆಲಿಸುತ್ತ, ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸಿರುವ ಶಾಸಕ ನಾರಾ ಭರತ್ ರೆಡ್ಡಿಯವರ ಸಲಾಂ ಬಳ್ಳಾರಿ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಕೇಶ್; ಇದೊಂದು ಐತಿಹಾಸಿಕ ಕಾರ್ಯಕ್ರಮ, ಬಳ್ಳಾರಿಯ ರಾಜಕೀಯ ಇತಿಹಾಸದಲ್ಲಿಯೇ ಯಾವ ನಗರ ಶಾಸಕರೂ ಈ ರೀತಿಯ ಜನಪರ ಕಾರ್ಯಕ್ರಮ ರೂಪಿಸಿಲ್ಲ, ಇದು ಒಂದು ವಿಭಿನ್ನ ಪ್ರಯತ್ನ, ಜನರಿಂದ ಈ ಅಭಿಯಾನಕ್ಕೆ ಒಳ್ಳೆಯ ಸ್ಪಂದನೆ ಸಿಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭ ಮಹಾನಗರ ಪಾಲಿಕೆಯ ಸದಸ್ಯರಾದ ಜಬ್ಬಾರ್, ಎಂ.ರಾಜೇಶ್ವರಿ, ವಿ.ಕುಬೇರಾ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ವಿಷ್ಣು ಬೋಯಪಾಟಿ, ವೆಂಕಟೇಶ ಹೆಗಡೆ, ಹೊನ್ನಪ್ಪ, ಶಿವರಾಜ್, ಮಂಜುಳಾ, ಯಶೋಧಾ, ಗಾಜುಲು ಶ್ರೀನಿವಾಸ್, (ಕಪ್ಪೆ) ಶಿವು ಹುಂಡೇಕರ್ ಪ್ರದೀಪ್, ಸುರೇಶ್, ರಸೂಲ್, ತಬ್ರೇಜ್, ಯರಗುಡಿ ಸೋಮಣ್ಣ ಮೊದಲಾದವರು ಹಾಜರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?