Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಆರು ಮಸೀದಿಗಳಿಗೆ ಅನುದಾನ ಬಿಡುಗಡೆ ಮಾಡಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ,ಪೆ,೦೫: ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕೆಲ ಮಸೀದಿಗಳ ಅಭಿವೃದ್ದಿಗಾಗಿನಾರಾ ಭರತ್ ರೆಡ್ಡಿ ಅವರ ಪ್ರಯತ್ನದ ಫಲವಾಗಿ ಆರು ಮಸೀದಿಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಮಂಜೂರಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಗರದಲ್ಲಿರುವ ೧೬ ಮುಸ್ಲಿಂ ಪ್ರಾರ್ಥನಾ ಮಂದಿರಗಳ(ಮಸೀದಿಗಳಿಗೆ) ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ವಕ್ಫ್ ಖಾತೆ ಸಚಿವರಾದ ಜಮೀರ್ ಅಹ್ಮದ್ ಖಾನ್‌ರಿಗೆ ಶಾಸಕ ನಾರಾ ಭರತ್ ರೆಡ್ಡಿಯವರು ಪತ್ರ ಬರೆದು ಅನುದಾನ ಮಂಜೂರು ಮಾಡುವಂತೆ ಕೋರಿದ್ದರು. ತದನಂತರ ವಕ್ಘ್ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಮಸೀದಿಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನಿಸಿದ್ದರು. ಶಾಸಕರ ಈ ಪ್ರಯತ್ನದ ಫಲವಾಗಿ ಸರ್ಕಾರದಿಂದ ಮೊದಲನೆಯ ಹಂತದಲ್ಲಿ ಬಳ್ಳಾರಿ ನಗರದ ಆರು ಮಸೀದಿಗಳ ಅಭಿವೃದ್ಧಿಗೆ ಸರ್ಕಾರದಿಂದ ೬೫.೦೦ ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ.
ನಗರದ ಅಂದ್ರಾಳುವಿನ ಎಂ.ಜೆ.ಡಿ.ಇ ಆಶಾರಫಿಯಾ ಮಸೀದಿಗೆ ೧೦ ಲಕ್ಷ ರೂ. ೧೨ ನೇ ವಾರ್ಡ್ ನಲ್ಲಿರುವ ಬಂಗಾರ ಸ್ಟೀಟ್ ತಾಜೀಯಾ ಮಹೊಲ್ಲ ಮಸೀದಿಗೆ ೫ ಲಕ್ಷ. ಗುಗ್ಗರಹಟ್ಟಿಯಲ್ಲಿರುವ ಕೆ.ಜಿ. ಎನ್. ಕಾಲೋನಿ ಜಂತೂಲ್ ಫಿರದೋಸ್ ಮಸೀದಿಗೆ ೫ ಲಕ್ಷ. ಗಾಂಧಿನಗರದ ಕಪ್ಪಗಲ್ ರಸ್ತೆಯಲ್ಲಿರುವ ಮಸ್ಜೀದ್- ಏ-ಆಹ್ಮದ್ ಐಲೇ ಸುನ್ನತ್ ಉಲ್-ಜಮಾತ್ ಮಸೀದಿಗೆ ೧೦ ಲಕ್ಷ. ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಜಮೀಯಾ ಸುನ್ನಿ ಮಸೀದಿಗೆ ೧೦ ಲಕ್ಷ. ದೇವಿನಗರದಲ್ಲಿರುವ ಮಸ್ಜೀದ್ ಏ ಸಿದ್ದೀಖಿ ಹಾಗೂ ದೇವಿನಗರದ ಮದರಾಸಾಗೆ ೧೫ ಲಕ್ಷ ರೂ. ಅನುದಾನವನ್ನ ನಗರ ಶಾಸಕ ನಾರಾಭರತ್ ರೆಡ್ಡಿಯವರು ಮಂಜೂರು ಮಾಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಹೊಸ ಕಾಮಗಾರಿ ಹಾಗೂ ಹೊಸ ಅಭಿವೃದ್ಧಿ ಕಾರ್ಯಗಳಿಗೆ ಸರಕಾರ ಅನುದಾನ ಬಿಡುಗಡೆ ಮಾಡುವ ಸನ್ನಿವೇಶವಿಲ್ಲದ ಈ ಸಮಯದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ವಿಶೇಷ ಕಾಳಜಿ ಹಾಗೂ ಸತತ ಪ್ರಯತ್ನದ ಫಲವಾಗಿ ನಗರದ ಅಭಿವೃದ್ಧಿಗೆ ಅನುದಾನವನ್ನ ತಂದು ನಗರ ಅಭಿವೃದ್ಧಿಗೆ ಪಣ ತೊಟ್ಟಿರುವ ಶಾಸಕರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?