Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ವಿವಿಧ ಯೋಜನೆಗಳಿಗೆ ಮೋದಿ ಚಾಲನೆ, ಟಿಎಂಸಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ

ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ: ನಾಡಿಯಾ ಜಿಲ್ಲೆಯ ಕೃಷ್ಣಾ ನಗರದಲ್ಲಿ ಪ್ರಧಾನಿ ಮೋದಿ ಸಾವಿರಾರು ಕೋಟಿ ರೂಪಾಯಿಗಳ ಮಹತ್ವದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯಕ್ಕೆ ಭೇಟಿ ನೀಡಿರುವ ಮೋದಿ, ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಆರಂಭಿಸಿದ್ದಾರೆ.

ಕೋಲ್ಕತ್ತ, ಮಾರ್ಚ್​ 1: ಪಶ್ಚಿಮ ಬಂಗಾಳದ (West Bengal) ನಾಡಿಯಾ ಜಿಲ್ಲೆಯ ಕೃಷ್ಣಾ ನಗರದಲ್ಲಿ (Krishna Nagar) 15 ಸಾವಿರ ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modiನೆರವೇರಿಸಿದರು. ಶುಕ್ರವಾರವಷ್ಟೇ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯ ಅರಾಂಬಾಗ್‌ನಲ್ಲಿ 7,200 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು.

ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, 21ನೇ ಶತಮಾನದ ಭಾರತವು ಕ್ಷಿಪ್ರಗತಿಯಲ್ಲಿ ಮುನ್ನಡೆಯುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದಿದ್ದಾರೆ.

ಹಲ್ದಿಯಾ-ಬರೌನಿ ಕಚ್ಚಾ ತೈಲ ಪೈಪ್‌ಲೈನ್‌ಗೆ ಚಾಲನೆ ನೀಡಿದ ಮೋದಿ, ಪರಿಸರದೊಂದಿಗೆ ಸಾಮರಸ್ಯ ಸಾಧಿಸುವುದರ ಜತೆಗೇ ಅಭಿವೃದ್ಧಿಯನ್ನು ಹೇಗೆ ಮಾಡಬಹುದು ಎಂಬುದನ್ನು ಭಾರತವು ಜಗತ್ತಿಗೆ ತೋರಿಸಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳ ಅಗತ್ಯತೆಗಳನ್ನು ಪೂರೈಸಲು ಪಶ್ಚಿಮ ಮೇದಿನಿಪುರ ಜಿಲ್ಲೆಯ ಖರಗ್‌ಪುರದಲ್ಲಿ ಎಲ್‌ಪಿಜಿ ಬಾಟ್ಲಿಂಗ್ ಘಟಕವನ್ನು ಉದ್ಘಾಟಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ತ್ಯಾಜ್ಯ ನೀರು ಸಂಸ್ಕರಣೆ ಮತ್ತು ಒಳಚರಂಡಿಗೆ ಸಂಬಂಧಿಸಿದ ಮೂರು ಯೋಜನೆಗಳನ್ನು ಅವರು ಉದ್ಘಾಟಿಸಿದ್ದಾರೆ. ಈ ಪ್ರದೇಶದಲ್ಲಿ ರೈಲು ಸಾರಿಗೆ ಸೌಲಭ್ಯಗಳನ್ನು ವಿಸ್ತರಿಸುವ ಹಲವಾರು ರೈಲ್ವೆ ಯೋಜನೆಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಇದಕ್ಕೂ ಮುನ್ನ ಮೋದಿ, ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಸಿಂದ್ರಿಯಲ್ಲಿ 35,700 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ಈ ಯೋಜನೆಗಳು ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಗಳಿಗೆ ಸಂಬಂಧಿಸಿದ್ದಾಗಿವೆ.

ಕೃಷ್ಣಾ ನಗರದಲ್ಲಿ ಬಿಜೆಪಿಯ ವಿಜಯ ನಿರ್ಣಯ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ, ರೋಡ್ ಶೋ ನಡೆಸಿದರು. ಬೆಂಬಲಿಗರತ್ತ ಕೈ ಬೀಸಿ ಶುಭಾಶಯ ಕೋರಿದರು.

ಟಿಎಂಸಿ ಸರ್ಕಾರಕ್ಕೆ ‘ಕಮಿಷನ್ ಮೊದಲು, ನಂತರ ಅನುಮೋದನೆ’: ಮೋದಿ ವ್ಯಂಗ್ಯ

ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂಬುದಕ್ಕೆ ಬಂಗಾಳದ ಮೊದಲ ಏಮ್ಸ್ ಉದಾಹರಣೆಯಾಗಿದೆ. ಏಮ್ಸ್ ನಿರ್ಮಾಣಕ್ಕೆ ಅನುಮತಿಗೆ ಅವರು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ (ಟಿಎಂಸಿ) ಮೊದಲು ಕಮಿಷನ್ ನೀಡಬೇಕು. ನಂತರವಷ್ಟೇ ಅನುಮತಿ ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂಗಾಳದಲ್ಲಿ ಏಮ್ಸ್ ನಿರ್ಮಿಸುವುದು ಮೋದಿಯವರ ಗ್ಯಾರಂಟಿ. ಇದು ಈಡೇರುವುದು ಗ್ಯಾರಂಟಿ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಬಂಗಾಳಿ ಭಾಷೆಯಲ್ಲಿ ಮೋದಿ ಹೇಳಿದರು.

ಏಮ್ಸ್ ಅನ್ನು ಸ್ಥಾಪಿಸುವಲ್ಲಿ ಸಮಸ್ಯೆಗಳಿವೆ. ಇದಕ್ಕೆ ಅನುಮತಿ ಏಕೆ ತೆಗೆದುಕೊಂಡಿಲ್ಲ ಎಂದು ರಾಜ್ಯ ಸರ್ಕಾರ ಪ್ರಶ್ನಿಸುತ್ತಿದೆ. ಪುಂಡ ಪೋಕರಿಗಳಿಗೆ ಕುಮ್ಮಕ್ಕು ನೀಡುವ ಈ ಸರ್ಕಾರ ಇಷ್ಟು ದೊಡ್ಡ ಆಸ್ಪತ್ರೆಗೆ ಅನುಮತಿ ಪಡೆದಿಲ್ಲ ಎನ್ನುತ್ತಿದೆ. ಕಮಿಷನ್ ನೀಡದಿದ್ದರೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಮೋದಿ ಆರೋಪಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?