Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ಮೋದಿ ಪ್ರಾರ್ಥನೆ

ತ್ರಿಶ್ಶೂರ್ (ಕೇರಳ),ಜ,೧೭: ಕೇರಳದ ಗುರುವಾಯೂರಿನಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮೋದಿ ಸಾಂಪ್ರದಾಯಿಕ ಮಲಯಾಳಿ ಶೈಲಿಯಲ್ಲಿ ಬಿಳಿ ಮುಂಡು (ಧೋತಿ), ಶರ್ಟ್ ಮತ್ತು ಶಾಲು ಧರಿಸಿದ್ದರು. ಗುರುವಾಯೂರು ದೇವಾಲಯದಲ್ಲಿ ನಡೆದ ಬಿಜೆಪಿ ನಾಯಕ , ನಟ ಸುರೇಶ್ ಗೋಪಿ ಅವರ ಮಗಳು ಭಾಗ್ಯಾ ಸುರೇಶ್ ಅವರ ಮದುವೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ತಾಳಿ ಕಟ್ಟಿದ ನಂತರ ನವ ದಂಪತಿಗಳು ಪರಸ್ಪರ ಹಾರ ಬದಲಾಯಿಸುವಾಗ ಮೋದಿಯವರೇ ದಂಪತಿ ಕೈಗೆ ಹಾರ ಕೊಟ್ಟಿದ್ದಾರೆ.ಮಮ್ಮುಟ್ಟಿ, ಮೋಹನ್‌ಲಾಲ್ ಮತ್ತು ದಿಲೀಪ್ ಸೇರಿದಂತೆ ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ಗಳು ಸಹ ಅಲ್ಲಿ ಹಾಜರಿದ್ದರು. ಪ್ರಧಾನಿ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ ಎಂದ ಭದ್ರತಾ ವ್ಯವಸ್ಥೆ ಕರ್ತವ್ಯದಲ್ಲಿರುವ ಅಧಿಕಾರಿಯೊಬ್ಬರು ಹೇಳಿದ್ದಾರೆ.ಸುರೇಶ್ ಗೋಪಿ ಅವರ ಮಗಳ ಮದುವೆಗೂ ಮುನ್ನ ಬೆಳಗ್ಗೆ ದೇವಸ್ಥಾನದಲ್ಲಿ ವಿವಾಹವಾದ ದಂಪತಿಗಳಿಗೆ ಪ್ರಧಾನಿ ಆಶೀರ್ವದಿಸಿ ಸಿಹಿತಿಂಡಿಗಳನ್ನು ನೀಡಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಾಲಯಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಬೆಳಗ್ಗೆ ೭.೩೫ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ಆಗಮಿಸಿದ ಪ್ರಧಾನಿ ಮೋದಿ ಶ್ರೀಕೃಷ್ಣ ಕಾಲೇಜು ಮೈದಾನದಲ್ಲಿ ಬಂದಿಳಿದಿದ್ದು, ನೂರಾರು ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ಅವರನ್ನು ಸ್ವಾಗತಿಸಲು ಗಂಟೆಗಟ್ಟಲೆ ಜಮಾಯಿಸಿದ್ದರು. ಎಲ್ಲಾ ವಯಸ್ಸಿನ ಜನರು ಹೆಲಿಪ್ಯಾಡ್‌ನಲ್ಲಿ ಬಿಜೆಪಿ ಧ್ವಜಗಳನ್ನು ಬೀಸುತ್ತಾ ಮತ್ತು ಪಕ್ಷದ ಬಣ್ಣಗಳಲ್ಲಿ ಟೋಪಿಗಳು ಮತ್ತು ಕ್ಯಾಪ್ಗಳನ್ನು ಧರಿಸಿ ಪ್ರಧಾನಿಯನ್ನು ಸ್ವಾಗತಿಸಿದರು.
ಹೆಲಿಪ್ಯಾಡ್‌ನಿಂದ ಶ್ರೀವಲ್ಸಮ್ ಗೆಸ್ಟ್ ಹೌಸ್‌ಗೆ ತೆರಳಿದ ಪ್ರಧಾನಿ ಮೋದಿ ಅಲ್ಲಿ ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳುವ ಮುನ್ನ ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಬದಲಾಯಿಸಿಕೊಂಡರು.ನAತರ ಅವರು ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಚ್ಚಿಗೆ ಹಿಂದಿರುಗುವ ಮೊದಲು ಅಲ್ಲಿ ಕೇಂದ್ರ ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೇರಳಕ್ಕೆ ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಮಂಗಳವಾರ ಸಂಜೆ ಕೇರಳಕ್ಕೆ ಆಗಮಿಸಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?