Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕೊಪ್ಪಳದಲ್ಲಿ ಗವಿಸಿದ್ದೇಶ್ವರ ಮಹಾರಥೋತ್ಸವ, 10 ಲಕ್ಷಕ್ಕೂ ಅಧಿಕ ಜನ ಭಾಗಿ!!

ಕೊಪ್ಪಳ (ಜ.15): ಇಡೀ ರಾಜ್ಯದಲ್ಲಿ ಗಮನಸೆಳೆಯುವ ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಮಹಾರಥೋತ್ಸವಕ್ಕೆ ಬುಧವಾರ ಸಂಜೆ ಅದ್ದೂರಿ ಚಾಲನೆ ಸಿಕ್ಕಿದೆ. ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದರು. ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಧಾರವಾಡದ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಧ್ವಜಾರೋಹಣ ಮಾಡುವ ಮೂಲಕ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿದೆ. ರಥೋತ್ಸವದಲ್ಲಿ ನಾಡಿನ ಹಲವು ಮಠಾಧೀಶರು ಭಾಗಿಯಾಗಿದ್ದಾರೆ. 'ಗವಿಸಿದ್ದೇಶ್ವರ ರಥೋತ್ಸವದಲ್ಲಿ ಭಾಗಿಯಾಗಿದ್ದು ನನ್ನ ಪೂರ್ವಜನ್ಮದ ಪುಣ್ಯ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಗವಿಸಿದ್ದೇಶ್ವರ ಮಠ ಅನ್ನ, ಅಕ್ಷರ ದಾಸೋಹ ಮಾಡುತ್ತಿದೆ. ಅಂಧರ ಶಿಕ್ಷಣ ಸಂಸ್ಥೆ ಮಾಡಲು ಗವಿಸಿದ್ದೇಶ್ವರ ಸ್ವಾಮೀಜಿ ಸಂಕಲ್ಪ ಮಾಡಿದ್ದಾರೆ. ಶ್ರೀಗಳ ಸಂಕಲ್ಪ ಈಡೇರಲಿದೆ ಎಂದು ಹೇಳಿದ್ದಾರೆ.

ಗವಿಸಿದ್ದೇಶ್ವರ ರಥೋತ್ಸವಕ್ಕೆ ಗವಿಸಿದ್ದೇಶ್ವರ ರಥೋತ್ಸವವೇ ಸರಿಸಾಟಿ ಎಂದು ರಥೋತ್ಸವದ ಬಳಿಕ ತುಮಕೂರಿನ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ. ಎಲ್ಲರ ಚಿತ್ತ ಅಜ್ಜನ ಜಾತ್ರೆಯತ್ತ ಇದೆ. ನಾಲ್ಕೈದು ವರ್ಷಗಳಿಂದ ಶ್ರೀಗಳು ಕರೆಯುತ್ತಿದ್ದರು. ಆದರೆ ಈ ವರ್ಷಭಾಗಿಯಾಗಿದ್ದೇನೆ. ಶ್ರೀಗಳು ಬರೀ ಜಾತ್ರೆ ಮಾಡುವುದಿಲ್ಲ. ಅವರು ಜಾಗೃತಿಯ ಜಾತ್ರೆ ಮಾಡುತ್ತಾರೆ ಗವಿಸಿದ್ದೇಶ್ವರ ಮಠ ದೊಡ್ಟದಾಗಿ ಬೆಳೆದಿದೆ ಎಂದು ಹೇಳಿದ್ದಾರೆ.

ಗವಿಸಿದ್ದೇಶ್ವರ ಜಾತ್ರೆ ನಿಮಿತ್ತ ನಡೆಯುವ ರಥೋತ್ಸವಕ್ಕೆ ಅಪಾರ ಪ್ರಮಾಣದ ಭಕ್ತಗಣ ಕಾಯುತ್ತಾ ನಿಂತಿತ್ತು. ಮಠದ ಅಂಗಳದಲ್ಲಿರುವ ರಥ ಬೀದಿಯಲ್ಲಿ ಅಂತಿಮ ಹಂತದ ಸಿದ್ಧತೆಯನ್ನು ಮಾಡಲಾಗಿತ್ತು. ರಥ ಬೀದಿಯ ಇಕ್ಕೆಲಗಳಲ್ಲಿ ರಂಗೋಲಿ ಚಿತ್ತಾರ ಮಾಡಲಾಗಿದೆ. ಶ್ರೀಮಠದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ರಂಗೋಲಿ ಮೂಡಿದೆ. 250 ಅಡಿ ಉದ್ದದ ಜಾಗದಲ್ಲಿ ವಿದ್ಯಾರ್ಥಿಗಳು ರಂಗೋಲಿ ಬಿಡಿಸಿದ್ದಾರೆ. ಸಂಕ್ರಾಂತಿ ಸಂಭ್ರಮದ ಜೊತೆಗೆ ವಿವಿಧ ಜಾಗೃತಿ ಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿದ್ದಾರೆ.

ಜಾತ್ರೆಯಲ್ಲಿ ಖಡಕ್ ರೊಟ್ಟಿ ಖದರ್: ಗವಿಸಿದ್ದೇಶ್ವರ ಜಾತ್ರೆಯಲ್ಲಿ ಖಡಕ್ ರೊಟ್ಟಿ ಖದರ್ ಜೋರಾಗಿದೆ. ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡಲು 20 ಲಕ್ಷ ರೊಟ್ಟಿ ಸಂಗ್ರಹವಾಗಿದೆ. ಕೊಪ್ಪಳ, ಗದಗ, ಬಾಗಲಕೋಟೆ ಧಾರವಾಡದಿಂದ ಈ ರೊಟ್ಟಿಗಳು ಬಂದಿವೆ. 300 ಕ್ಕೂ ಹೆಚ್ಚು ಗ್ರಾಮದಿಂದ ಜೋಳದ ರೊಟ್ಟಿ ಸಂಗ್ರಹವಾಗಿದೆ. ಎರಡು ಬೃಹತ್ ಶೆಡ್ ನಲ್ಲಿ ಮಠದ ಸಿಬ್ಬಂದಿ ರೊಟ್ಟಿಯನ್ನು ಸಂಗ್ರಹಿಸಿದ್ದಾರೆ. ಜನವರಿ 6 ರಿಂದ ಇಲ್ಲಿಯವರೆಗೂ ರೊಟ್ಟಿ ಸಂಗ್ರಹ ಕಾರ್ಯ ನಡೆದಿತ್ತು. ಗ್ರಾಮದಲ್ಲಿ ಸಣ್ಣ ಸಣ್ಣ ಗುಂಪು ಮಾಡಿ ಮಹಿಳೆಯರು ರೊಟ್ಟಿ ಮಾಡಿಕೊಟ್ಟಿದ್ದಾರೆ. ವೈಯಕ್ತಿಕವಾಗಿ ಜನರಿಂದ ಮಠಕ್ಕೆ ರೊಟ್ಟಿ ಅರ್ಪಣೆಯಾಗಿದೆ. ಇದನ್ನು ಜಾತ್ರೆಗೆ ಬರುವ ಭಕ್ತರಿಗೆ ಪ್ರಸಾದದ ರೂಪದಲ್ಲಿ ರೊಟ್ಟಿ ವಿತರಣೆ ನೀಡಲಾಗುತ್ತದೆ. ಮುಂದಿನ ಅಮವಾಸ್ಯೆ ಬರುವವರೆಗೆ ಮಠಕ್ಕೆ ಬರುವ ಭಕ್ತರಿಗೆ ರೊಟ್ಟಿ, ಪಲ್ಯ ವಿತರಣೆ ಮಾಡಲಾಗುತ್ತದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?