Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಂಸದ ಡಿ.ಕೆ ಸುರೇಶ್‌ 598 ಕೋಟಿ ರೂಪಾಯಿ ಒಡೆಯ, ಕಳೆದ 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಬೆಂಗಳೂರು: ಏಪ್ರಿಲ್ 26ರಂದು ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ಅದರಂತೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.

598 ಕೋಟಿ ರೂಪಾಯಿ ಒಡೆಯರಾಗಿರುವ ಡಿಕೆ ಸುರೇಶ್ ಅವರ ಆಸ್ತಿಯಲ್ಲಿ ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯವು ಹೆಚ್ಚಳವಾಗಿದೆ. ಅಲ್ಲದೆ ಒಟ್ಟು 207 ಕೋಟಿ ರೂಪಾಯಿ ಸಾಲವಿದೆ. ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಅವರ ಕಿರಿಯ ಸಹೋದರ ಸುರೇಶ್ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿದ್ದರು.

ಬೆಂಗಳೂರು ಗ್ರಾಮಾಂತರದಿಂದ ಪುನರಾಯ್ಕೆ ಬಯಸಿರುವ ಮೂರು ಬಾರಿ ಸಂಸದರಾಗಿರುವ ಅವರು  ಸಲ್ಲಿಸಿದ ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂಪಾಯಿ ಠೇವಣಿ ಹೊಂದಿದ್ದಾರೆ. 57 ವರ್ಷದ ಸಂಸದ ಸುರೇಶ್ 32.76 ಕೋಟಿ ಮೌಲ್ಯದ 21 ಸ್ಥಳಗಳಲ್ಲಿ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಮತ್ತು 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?