Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಮನರಂಜನೆ ಸುದ್ದಿ

ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು ಸರಿಯಲ್ಲ, ವರ್ತೂರ್ ಸಂತೋಷ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಹಳ್ಳಿಕಾರ್ ಸಂರಕ್ಷಕರು

ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ ಎಂದು ವರ್ತೂರ್ ಸಂತೋಷ್ ವಿರುದ್ಧ ಕಾನೂನು ಹೋರಾಟ ನಡೆಸಲು ಹಳ್ಳಿಕಾರ್ ಸಂರಕ್ಷಕರು ಮುಂದಾಗಿದ್ದಾರೆ. ಬಿಗ್ ಬಾಸ್ ಸ್ವರ್ಧಿ ವರ್ತೂರ್ ವಿರುದ್ಧ ಮಂಡ್ಯ ರೈತರು ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯ, ಫೆ.24: ಹಳ್ಳಿಕಾರ್ ತಳಿಯ ಜಾನುವಾರು ಸಾಕಾಣಿಕೆಯಿಂದ ಜನಪ್ರಿಯತೆ ಪಡೆದಿರುವ ವರ್ತೂರು ಸಂತೋಷ್ (Varthur Santhosh)  ಬಿಗ್ ಬಾಸ್​ಗೆ (Bigg Boss Kannada) ಬಂದು ಹೋದ ನಂತರ ಇಡೀ ಕರ್ನಾಟಕದ ಮನೆ ಮಗ ಆಗಿದ್ದಾರೆ. ಸದ್ಯ ಜನರು ವರ್ತೂರ್ ಸಂತೋಷ್ ಅವರನ್ನು ಹಳ್ಳಿಕಾರ್ ಒಡೆಯ (Hallikar Odeya) ಅಂತಲೇ ಕರೆಯುತ್ತಾರೆ. ಆದರೆ ಹಳ್ಳಿಕಾರ್ ಎಂಬ ಬಿರುದು ಸಂಬಂಧ ಮತ್ತೆ ವಿವಾದ ತಾರಕಕ್ಕೇರಿದೆ. ವರ್ತೂರು ಸಂತೋಷ್ ವಿರುದ್ದ ಹಳ್ಳಿಕಾರ್ ಸಂರಕ್ಷಕರು ಸಿಡಿದೆದ್ದಿದ್ದಾರೆ. ಸಂತೋಷ್ ವಿರುದ್ದ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಕನ್ನಡದ ಬಿಗ್ ಬಾಸ್ ಮನೆಯಲ್ಲಿದ್ದಾಗ ಹಳ್ಳಿಕಾರ್ ಒಡೆಯ‌ ಬಿರುದು ವಿವಾದ ಸೃಷ್ಟಿಯಾಗಿತ್ತು. ಈ ಹಿಂದೆ ವರ್ತೂರು ಸಂತೋಷ್ ಬೆಂಬಲಿಗರಿಗೆ ತಿಳುವಳಿಕೆ ಹೇಳಲು ಹಳ್ಳಿಕಾರ್ ತಳಿ ಸಂರಕ್ಷಕರು ಚರ್ಚಾಗೋಷ್ಠಿ ಏರ್ಪಡಿಸಿದ್ದರು. ಅಂದು ವರ್ತೂರು ಸಂತೋಷ್ ಬೆಂಬಲಿಗರು ಹಾಗೂ ತಲಾತಲಾಂತರಿಂದ ಹಳ್ಳಿಕಾರ್ ತಳಿ ಸಂರಕ್ಷಕರ ನಡುವೆ ಜಟಾಪಟಿ ನಡೆದಿತ್ತು. ವಾಗ್ವಾದದಿಂದ ಕಾರ್ಯಕ್ರಮದ ಅರ್ಧದಲ್ಲೆ ಸಂತೋಷ್ ಬೆಂಬಲಿಗರನ್ನ ಪೊಲೀಸರು ಕಳುಹಿಸಿದ್ದರು. ಇಷ್ಟೆಲ್ಲಾ ಆದ ಬಳಿಕ ಬಿಗ್ ಬಾಸ್ ಮನೆಯಿಂದ ಹೊರ ಬರ್ತಿದ್ದಂತೆ ವಿರೋಧಿಗಳಿಗೆ ವರ್ತೂರ್ ಸಂತೋಷ್ ಟಾಂಗ್ ಕೊಟ್ಟಿದ್ದರು. ಏಕವಚನದಲ್ಲಿ ಹಿರಿಯ ಹಳ್ಳಿಕಾರ್ ಸಂರಕ್ಷಕರ ವಿರುದ್ದ ಹರಿಹಾಯ್ದಿದ್ದರು. ಸದ್ಯ ಈಗ ವರ್ತೂರ್ ಮಾತಿಗೆ ಮತ್ತೆ ಸಿಡಿದೆದ್ದ ಹಳ್ಳಿಕಾರ್ ಸಂರಕ್ಷಕರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ. ತಲಾತಲಾಂತರದಿಂದ ಹಳ್ಳಿಕಾರ್ ಸಂರಕ್ಷಣೆ ಮಾಡ್ತಿರುವ ರೈತರ ಭಾವನೆಗೂ ಧಕ್ಕೆ, ಅವಮಾನ ಆಗಿದೆ. ಗೂಗಲ್ ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಸರ್ವೇಶನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ. ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡ್ತೇನೆ. ಎಲ್ಲಾ ದಾಖಲಾತಿಗಳನ್ನ ಸಂಗ್ರಹಿಸುತ್ತಿದ್ದು ಶೀಘ್ರ ಕಾನೂನು ಸಮರ ಸಾರುತ್ತೇವೆ. ಗೂಗಲ್ ವಿರುದ್ದ ಕಾನೂನು ಹೋರಾಟ ಮಾಡ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿ ಪಟೇಲ್ ಎಚ್ಚರಿಕೆ ನೀಡಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?